ಕರಾವಳಿ

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ. 13. ಅನಾರೋಗ್ಯದಿಂದ ಬಳಲುತ್ತಿದ್ದ ಮಹಳೆಯೋರ್ವರು ಕೆರೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಾಳ ಗ್ರಾಮದ ಇಂದಿರಾನಗರ ನಿವಾಸಿ ಗುಲಾಬಿ(85) ಎಂದು ಗುರುತಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ…! Read More »

ಕರಾವಳಿ

ನಿಲ್ಲಿಸಿದ್ದ ಟಿಪ್ಪರ್ ಲಾರಿಯ 5 ಟಯರ್ ಹಾಗೂ ಬ್ಯಾಟರಿ ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಫೆ. 13. ನಿಲ್ಲಿಸಿದ್ದ ಟಿಪ್ಪರ್ ಲಾರಿಯ ಟಯರ್ ಹಾಗೂ ಬ್ಯಾಟರಿಯನ್ನು ಕಳವು ಮಾಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಶಾಶ್ವತ್ ಎಂಬವರು ತನ್ನ ಮನೆಯ ಮನೆಯ ಬಳಿ ನಿಲ್ಲಿಸಿದ್ದ ಟಿಪ್ಪರ್ ಲಾರಿಯನ್ನು ಕಳವು ಮಾಡಿಕೊಂಡು ಹೋಗಿರುವ ಕಳ್ಳರು, ಪಾಂಗಾಳದ ಸೇತುವೆ ಬಳಿ ನಿಲ್ಲಿಸಿ ಅದರ ಡಿಸ್ಕ್ ಸಮೇತ 5 ಟಯರ್ ಮತ್ತು ಬ್ಯಾಟರಿಯನ್ನು ಕಳವು ಮಾಡಿರುವುದಾಗಿ ದೂರಲಾಗಿದೆ. ಕಳವಾದ ಸೊತ್ತಿನ ಮೌಲ್ಯ 98,000ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ

ನಿಲ್ಲಿಸಿದ್ದ ಟಿಪ್ಪರ್ ಲಾರಿಯ 5 ಟಯರ್ ಹಾಗೂ ಬ್ಯಾಟರಿ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 13. ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರದಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಚವಾಣ್ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದ್ದು, ಇದೀಗ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..! Read More »

ಕರಾವಳಿ

ಪ್ರಸಿದ್ಧ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 13. ಉಡುಪಿಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧು ಪಾಣಾರ ಮಂಚಿಕೆರೆ(68) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ದೈವಾರಾಧನೆ ನಡೆಸಿದ್ದ ಅವರು ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಪ್ರಸಿದ್ಧ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ವಿಧಿವಶ Read More »

ಕರಾವಳಿ

ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ ದೃಢ- ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 13. ಶಿವಮೊಗ್ಗದ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಫೆ. 12 ರಂದು ಆರು ಮಂದಿಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 42 ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೆಎಫ್ಡಿ ಬಾಧಿತ ಪ್ರದೇಶದಲ್ಲಿ ಜ್ವರದಿಂದ ಬಳಲುತ್ತಿದ್ದ ಆರು ಮಂದಿಯ ರಕ್ತದ ಮಾದರಿಯನ್ನು ಶಿವಮೊಗ್ಗದ ವೈರಲ್ ಡಯಾಗ್ನಸ್ಟಿಕ್ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ ದೃಢ- ಆರೋಗ್ಯ ಇಲಾಖೆ Read More »

ಕರಾವಳಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 13. ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ ಎದು ಗುರುತಿಸಲಾಗಿದೆ. ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮೂರ್ತಿ, ಸಿಬ್ಬಂದಿಗಳಾದ ಹೆಚ್.ಸಿ ಕೃಷ್ಣ ಮತ್ತು ಪಿ.ಸಿ ಯೋಗೇಶ್ ಹಾಗೂ ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂವಿಧಾನ ಜಾಥಾ – ತಾಳ ಮದ್ದಳೆ ಮೂಲಕ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಕಬಕ ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್‍ಗೆ ಸೋಮವಾರ ಬೆಳಿಗ್ಗೆ 9.30ಕ್ಕೆ ಆಗಮಿಸಿತು. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್‍ನಿಂದ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್‍ಗೆ ಚೆಂಡೆ, ತಾಳ ಮದ್ದಳೆ, ಕಳಶ ಮತ್ತು ವಿದ್ಯಾರ್ಥಿಗಳು ರ್ಯಾಲಿ ಮೂಲಕ

ಸಂವಿಧಾನ ಜಾಥಾ – ತಾಳ ಮದ್ದಳೆ ಮೂಲಕ ಸ್ವಾಗತ Read More »

ಕರಾವಳಿ, ಕರ್ನಾಟಕ

ಗಣಿ ಇಲಾಖೆಯ ಅಧೀನದಿಂದ ಕಡಲಾಚೆಯ ಪರಿಶೋಧನೆ- ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಭಾರತ ಸರ್ಕಾರದ ಗಣಿ ಇಲಾಖೆ ಅಧೀನದ ಭಾರತೀಯ ಭೂವೈಜ್ಞಾನಿಕ ಸರ್ವೆ, ಮಂಗಳೂರು ವಿಭಾಗದ ವತಿಯಿಂದ ಕಡಲಾಚೆಯ ಪರಿಶೋಧನೆ (Offshore Exploration: synergies and opportunties) ಕುರಿತ ವಿಚಾರ ಸಂಕಿರಣ ನಗರದಲ್ಲಿ ಫೆಬ್ರವರಿ 15ರಂದು  ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ನಗರದ ಹೋಟೆಲ್ ಓಷಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯುವ ಕಾರ್ಯಾಗಾರವನ್ನು ಭಾರತ ಸರ್ಕಾರದ ಗಣಿ ಇಲಾಖೆ ಕಾರ್ಯದರ್ಶಿ ವಿ.ಎಲ್. ಕಾಂತಾರಾವ್ ಉದ್ಘಾಟಿಸಲಿದ್ದಾರೆ. ಕಾರ್ಯಗಾರದಲ್ಲಿ ವಿವಿಧ ವಿಷಯಗಳ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ

ಗಣಿ ಇಲಾಖೆಯ ಅಧೀನದಿಂದ ಕಡಲಾಚೆಯ ಪರಿಶೋಧನೆ- ವಿಚಾರ ಸಂಕಿರಣ Read More »

ಕರಾವಳಿ, ಕರ್ನಾಟಕ

ಫೆ.14 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಫೆಬ್ರವರಿ 14ರಂದು ಬೆಳಿಗ್ಗೆ 10.30ಕ್ಕೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.14 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ Read More »

ಕರಾವಳಿ

ಫೆ. 15ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಫೆಬ್ರವರಿ 15ರಂದು ಬೆಳಗ್ಗೆ 11 ಗಂಟೆಯಿಂದ ಮೂಡಬಿದ್ರೆಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420.

ಫೆ. 15ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ
Scroll to Top