ಕರಾವಳಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು.!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 12. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ಸೋಮವಾರದಂದು ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್ ಎಂಬವರ ಪುತ್ರಿ ತ್ರಿಶಾ(16) ಎಂದು ಗುರುತಿಸಲಾಗಿದೆ. ಈಕೆ ಫೆ. 07ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಎನ್ನಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು […]

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 12. ಲಾರಿ ಮತ್ತು ರಿಕ್ಷಾದ ನಡುವೆ ನಡೆದ ಅಪಘಾತ ಸಂಭವಿಸಿ, ರಿಕ್ಷಾ ಚಾಲಕನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಲ್ಲಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಆದರೆ ಚಾಲಕ ಚೇತನ್ ಅವರ ಕಾಲಿಗೆ ಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರಿಗೆ ಬೈಕ್‌ ಡಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 12. ಕಾರಿನ ಹಿಂಭಾಗಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು, ಗಾಯಗೊಂಡ ಘಟನೆ ಅರಂತೋಡಿನ ಹೈಸ್ಕೂಲ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ಸುಳ್ಯದ ಶೋ ರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕರು, ಅರಂತೋಡಿನಿಂದ ಸುಳ್ಯದ ಕಡೆ ತೆರಳುತ್ತಿದ್ದ ವೇಳೆ, ಮುಂಭಾಗದಿಂದ ತೆರಳುತ್ತಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಳ್ಯ: ಕಾರಿಗೆ ಬೈಕ್‌ ಡಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 12. ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹವೊಂದು ಇಂದು ಮಧ್ಯಾಹ್ನದ ವೇಳೆ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರು ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು, ಇಂದು ಬೆಳಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ ಅರ್ಚಕರೊಬ್ಬರು ಕಂಡಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ವ್ಯಕ್ತಿಯ ಗುರುತು ಪತ್ತೆ ಹಚ್ಚುವಿಕೆಗೆ ಕ್ರಮಕೈಗೊಂಡಿದ್ದಾರೆ.

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ- ಡಾ|| ಚೂಂತಾರು ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಣಂಬೂರು ಘಟಕದ ವತಿಯಿಂದ ಫೆ. 11ರ ಭಾನುವಾರದಂದು ಪಣಂಬೂರು ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ|| ಮುರಲೀ ಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಡಲ ತೀರ ಮತ್ತು ಪರಿಸರವನ್ನು ನಾವು

ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ- ಡಾ|| ಚೂಂತಾರು ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ Read More »

ಕರಾವಳಿ, ಕರ್ನಾಟಕ

ಕಡಬ: ಸ್ಪಂದನಾ ಸಮುದಾಯ ಸಹಕಾರ ಸಂಘ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ. 12. ಸಹಕಾರಿ ಸಂಘಗಳು ಸಮಾಜದಲ್ಲಿ ಸಹಕಾರಿಯಾಗಿ ಕೆಲಸ ಮಾಡುತ್ತಿವೆ. ಸಹಕಾರ ಸಂಘಗಳ ಮೂಲಕ ಸದಸ್ಯರು ತಾವು ಪಡೆದ ಸಾಲವನ್ನು ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ದಿ ಹೊಂದಲು ಸಾಧ್ಯ. ಸ್ವಾಭಿಮಾನದ ಬದುಕು ಕಟ್ಟಿಕೊಂಡು ಜೀವನ ನಡೆಸಲು ಸಹಕಾರ ಸಂಘಗಳು ಸಹಕಾರಿ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಭಾನುವಾರದಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಸ್ಪಂದನಾ ಸಮುದಾಯ ಸಹಕಾರ ಸಂಘದ

ಕಡಬ: ಸ್ಪಂದನಾ ಸಮುದಾಯ ಸಹಕಾರ ಸಂಘ ಶುಭಾರಂಭ Read More »

ಕರಾವಳಿ, ಕರ್ನಾಟಕ

ಪಡುಬೆಟ್ಟು ಮಕ್ಕಳ ಯಕ್ಷಗಾನ ಮಂಡಳಿ ಉದ್ಘಾಟನೆ-ರಂಗಪ್ರವೇಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 07. ನೆಲ್ಯಾಡಿ ಕೀರ್ತಿಶೇಷ ಶಾಂತಿಗೋಡು ಗೋಪಾಲಕೃಷ್ಣ ಶಗ್ರಿತ್ತಾಯ-ಜಾನಕಿ ಅಮ್ಮ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಸಹಯೋಗದಲ್ಲಿ ಪಡುಬೆಟ್ಟು ಶ್ರೀ ಬಾಲಸುಬ್ರಹ್ಮಣ್ಯ ಮಕ್ಕಳ ಯಕ್ಷಗಾನ ಮಂಡಳಿಯ ಉದ್ಘಾಟನಾ ಸಮಾರಂಭ, ಗುರುವಂದನೆ, ಮಕ್ಕಳ ರಂಗಪ್ರವೇಶ ಕಾರ್ಯಕ್ರಮವು ಫೆ.10 ರಂದು ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರಂಗಮಂದಿರದಲ್ಲಿ ನಡೆಯಿತು. ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿಯವರು ಮಕ್ಕಳ ಯಕ್ಷಗಾನ ಮಂಡಳಿಯನ್ನು ದೀಪಬೆಳಗಿಸಿ ಉದ್ಘಾಟಿಸಿ

ಪಡುಬೆಟ್ಟು ಮಕ್ಕಳ ಯಕ್ಷಗಾನ ಮಂಡಳಿ ಉದ್ಘಾಟನೆ-ರಂಗಪ್ರವೇಶ Read More »

ಕರಾವಳಿ, ಕರ್ನಾಟಕ

ಬಸ್ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್‌ ಸಮೀಪದ ಅರ್ಕುಳ ದ್ವಾರದ ಬಳಿ ಸಂಭವಿಸಿದೆ. ಮೃತ ಸವಾರನನ್ನು ಸ್ಥಳೀಯ ನಿವಾಸಿ ಚರಣ್‌ ರಾಜ್‌ ಎಂದು ಗುರುತಿಸಲಾಗಿದೆ. ಇವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಬಸ್‌ ಢಿಕ್ಕಿಯಾಗಿದೆ ಎನ್ನಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದ, ಇದಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ವತಿಯಿಂದ ಎರಡನೇ ವರ್ಷದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 12. ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ಪುತ್ತೂರು ಧರ್ಮಪ್ರಾಂತ್ಯದ ನೇತೃತ್ವದಲ್ಲಿ ನಡೆಯುತ್ತಿರುವ ವಾಸಯೋಗ್ಯವಲ್ಲದ ಮನೆಗಳ ಪುನರ್ ನಿರ್ಮಾಣ ಮತ್ತು ಹಳೇ ಮನೆಗಳ ದುರಸ್ತಿ ಕಾಮಗಾರಿ ಯೋಜನೆಯ ಎರಡನೇ ವರ್ಷದ ಕಾಮಗಾರಿಯ ಶಂಕುಸ್ಥಾಪನೆಯನ್ನು ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ವಂದನೀಯ ರೆ.ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರು ನೆರವೇರಿಸಿದರು. ಮಲಂಕರ ಕ್ಯಾಥೊಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯದ ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ (ಎಂಸಿಎ) ನೇತೃತ್ವದಲ್ಲಿ ಎಂಸಿಎ ದಕ್ಷಿಣ ಕನ್ನಡ, ಬೆಂಗಳೂರು ಮತ್ತು ಶಿವಮೊಗ್ಗ ವಲಯಗಳ ಸಹಭಾಗಿತ್ವ

ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ವತಿಯಿಂದ ಎರಡನೇ ವರ್ಷದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಕುಂತೂರು ಮಾರ್ ಇವಾನಿಯೋಸ್ ಬಿ ಎಡ್ ಕಾಲೇಜು ವಾರ್ಷಿಕೋತ್ಸವ – ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯನ್ನು ಉಳಿಸೋಣ- ಹರಿಶ್ಚಂದ್ರ ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಭಾರತೀಯ ಪರಂಪರೆಯ ಶಿಕ್ಷಣ ವ್ಯವಸ್ಥೆ ಅತ್ಯಂತ ಮೌಲ್ಯಯುತವಾದದ್ದು ಪ್ರಸ್ತುತ ಸಮಾಜದ ಬದಲಾದ ಕಾಲಘಟ್ಟದ‌ ಪರಿಸ್ಥಿತಿಯಲ್ಲಿ ಪಾಶ್ಚಾತ್ಯ ಶೈಲಿಯ ಆಕರ್ಷಣೆಗಳಿಗೆ ಒಳಗಾಗದೆ ಶಿಕ್ಷಣವನ್ನು ಪಡೆಯಲು ಉತ್ತಮ ವಾತಾವರಣವನ್ನು ಶಿಕ್ಷಣ ಸಂಸ್ಥೆಗಳು ನಿರ್ಮಿಸಿ ಕೊಡಬೇಕು. ಇವುಗಳ ಜೊತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ ಹೊಂದಿರುವ ಶಿಕ್ಷಕರು ಉತ್ತಮ ಗುಣ-ನಡತೆಗಳೊಂದಿಗೆ ಸಚ್ಚಾರಿತ್ರ‍್ಯವನ್ನು ಹೊಂದಿ ಶಿಕ್ಷಣ ವೃತ್ತಿಯ ಘನತೆ-ಗೌರವವನ್ನು ಸದಾ ಕಾಲವೂ ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಜ್ಞೆಯನ್ನು ಹೊಂದಿರುವುದು ಅತೀ ಮುಖ್ಯವಾಗಿದೆ ಎಂದು

ಕುಂತೂರು ಮಾರ್ ಇವಾನಿಯೋಸ್ ಬಿ ಎಡ್ ಕಾಲೇಜು ವಾರ್ಷಿಕೋತ್ಸವ – ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯನ್ನು ಉಳಿಸೋಣ- ಹರಿಶ್ಚಂದ್ರ ಕೆ Read More »

ಕರಾವಳಿ, ಕರ್ನಾಟಕ
Scroll to Top