ಕರಾವಳಿ

ನಡೆ ನುಡಿಯ ಸಮನ್ವಯದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರ- ನುಡಿ ನಮನ ಸಲ್ಲಿಸಿ ಡಾ।ಪೆರ್ಲ ಅಭಿಮತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಅಪಾರ ಪಾಂಡಿತ್ಯ ಹೊಂದಿದ್ದ ನಗುಮೊಗದ ನಿಗರ್ವಿ, ನಡೆ ಹಾಗೂ ನುಡಿಯಲ್ಲಿ ಉನ್ನತ ಆದರ್ಶಗಳನ್ನೇ ಪರಿಪಾಲಿಸಿದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರರದು ಎಂದು ಖ್ಯಾತ ಸಾಹಿತಿ ಡಾ। ವಸಂತಕುಮಾರ ಪೆರ್ಲ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕ, ನಗರದ  ಶಾರದಾ ವಿದ್ಯಾಲಯದಲ್ಲಿ ಏರ್ಪಡಿಸಿದ ಪ್ರೊ. ಅಮೃತ ಸೋಮೇಶ್ವರರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿದರು. ಅಮೃತರು ಕರಾವಳಿಯ ಮೂರೂ ಜಿಲ್ಲೆಗಳ ಸಮರ್ಥ […]

ನಡೆ ನುಡಿಯ ಸಮನ್ವಯದ ಸಮಗ್ರ ವ್ಯಕ್ತಿತ್ವ ಅಮೃತ ಸೋಮೇಶ್ವರ- ನುಡಿ ನಮನ ಸಲ್ಲಿಸಿ ಡಾ।ಪೆರ್ಲ ಅಭಿಮತ Read More »

ಕರಾವಳಿ, ಕರ್ನಾಟಕ

ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ; ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಮಾರ್ಗಸೂಚಿಯಂತೆ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಚಿತ ತರಬೇತಿ- ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ, ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಇಖP/PಖIಒಇ ಕೋರ್ಸ್‍ಗಳ ತರಬೇತಿ ನೀಡಲಾಗುವುದು. ಆಸಕ್ತ

ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ; ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜ. 20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನಮೇಳ ಜ. 20 ಹಾಗೂ 21ರಂದು ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆ ಜ. 20ರಂದು ಬೆಳಿಗ್ಗೆ

ಜ. 20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ Read More »

ಕರಾವಳಿ, ಕರ್ನಾಟಕ

ರಾಜ್ಯಮಟ್ಟದ ವೃತ್ತಿಪರ ಕ್ರೀಡಾಕೂಟ – ಪ್ರಥಮ ಸ್ಥಾನ ಪಡೆದ ಗೃಹರಕ್ಷಕಿಯರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ವೃತ್ತಿಪರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗೃಹರಕ್ಷಕಿಯರಾದ ಶಕೀಲಾ, ಬಂಟ್ವಾಳ ಘಟಕ ಮತ್ತು ಭವ್ಯಶ್ರೀ, ಮಂಗಳೂರು ಘಟಕ ಇವರು 800 ಮೀಟರ್ ರಿಲೇ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.  ಇವರಿಗೆ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರು ಇವರು ಅಭಿನಂದಿಸಿ, ಶಾಲು ಹೊದಿಸಿ, ತಲಾ 1000/- ರೂ.  ನಗದು ಬಹುಮಾನವನ್ನು  ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೀನಿಯರ್

ರಾಜ್ಯಮಟ್ಟದ ವೃತ್ತಿಪರ ಕ್ರೀಡಾಕೂಟ – ಪ್ರಥಮ ಸ್ಥಾನ ಪಡೆದ ಗೃಹರಕ್ಷಕಿಯರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಮಾರುಕಟ್ಟೆ ಮೌಲ್ಯ ದರಪಟ್ಟಿ ಪರಿಷ್ಕರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ನಗರದ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ದರಪಟ್ಟಿಯನ್ನು 2023ರ ಅಕ್ಟೋಬರ್ 1 ರಿಂದ ಪರಿಷ್ಕರಿಸಲಾಗಿದ್ದು, ಇದರಲ್ಲಿ ಕೆಲವು ಹತ್ತು ವರ್ಷಗಳ ಹಳೆಯ ಅಪಾರ್ಟ್‍ಮೆಂಟ್‍ಗಳು ಹಾಗೂ 500 ಚ.ಮೀಟರ್ ನಿವೇಶನದಲ್ಲಿ ನಿರ್ಮಿಸಿದ ಅಪಾರ್ಟ್‍ಮೆಂಟ್‍ಗಳಿಗೆ ಮೌಲ್ಯ ನಿಗದಿಪಡಿಸಲು ಬಿಟ್ಟು ಹೋಗಿರುತ್ತದೆ. ಕೇಂದ್ರ ಮೌಲ್ಯ ಮಾಪನ ಸಮಿತಿಯು ಅಪಾರ್ಟ್‍ಮೆಂಟ್‍ಗಳಿಗೆ ಮೌಲ್ಯವನ್ನು ನಿಗದಿಪಡಿಸಿ ಉಪಸಮಿತಿ ಸಭೆಯಲ್ಲಿ ಅನುಮೋದಿಸಲಾಗಿದೆ. ಈ ಬಗ್ಗೆ ಪರಿಷ್ಕೃತ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ದರಪಟ್ಟಿಯನ್ನು ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ

ಮಾರುಕಟ್ಟೆ ಮೌಲ್ಯ ದರಪಟ್ಟಿ ಪರಿಷ್ಕರಣೆ Read More »

ಕರಾವಳಿ, ಕರ್ನಾಟಕ

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. 2023-24ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ರಾಜ್ಯವಲಯ ಯೋಜನೆಗಳಡಿ “ಹೈಟೆಕ್ ಹಾರ್ವೆಸ್ಟರ್ ಹಬ್” ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸದರಿ ಯೋಜನೆಯಡಿ ಜಿಲ್ಲೆಗೆ ಒಬ್ಬರು ಮಾಡಬಹುದಾದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಗುರಿ ನೀಡಲಾಗಿದೆ. ಆಸಕ್ತ ಫಲಾನುಭವಿಗಳು ಜಿಲ್ಲೆಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ರೂ.40 ಲಕ್ಷದ ಒಂದು ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶವಿರುತ್ತದೆ. ಸದರಿ ಹಬ್ ಸ್ಥಾಪನೆಗೆ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಟ

ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜ. 12. ಇಲ್ಲಿನ ಹನುಮಾನ್‍ನಗರ ಕೇವಳದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಂಟಿಯಾಗಿ ಜನವರಿ 12ರಂದು ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಕೌಶಿಕ್, ಸಿಂಚನಾ ಕೆ ಎಸ್ ಹಾಗೂ ಆದಿತ್ಯ ಕೆ ವಿ ಗೌಡ ಇವರು ವಿವೇಕಾನಂದರ ಕುರಿತು ಮಾತನಾಡಿದರು. ಶಿಕ್ಷಕಿ ಶ್ರೀಮತಿ ಸೌಮ್ಯ ಕೆ.ಎ ಇವರು ವಿವೇಕಾನಂದರ ಜೀವನದಲ್ಲಿ ಆದ ಘಟನೆಗಳನ್ನು ತಿಳಿಸಿ ಅವರು ಯುವ ಜನಾಂಗಕ್ಕೆ ಪ್ರೇರಣಾ ಶಕ್ತಿಯಾಗಿದ್ದರು ಎಂದು ಶುಭ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಮೂರು ದಿನದ ಹಿಂದೆ ಸಾಯಂಕಾಲದ ವೇಳೆಗೆ ಉದನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜಗಾಂಭೀರ್ಯದಿಂದ ಸಂಚರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯೊಂದು ಇದೀಗ ಮತ್ತೆ ಉದನೆಯಲ್ಲಿ ಹಗಲು ವೇಳೆಯಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಉದನೆ- ಶಿಬಾಜೆ ರಸ್ತೆಯಲ್ಲಿರುವ ಉದನೆ ಹೈಸ್ಕೂಲ್‌ ಸಮೀಪ ಶುಕ್ರವಾರದಂದು ಬೆಳಗ್ಗೆ 9.30ರ ವೇಳೆಗೆ ಕಾಡಾನೆಯೊಂದು ಹೆದ್ದಾರಿ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಶಿರಾಡಿ ಗ್ರಾ.ಪಂ.ನ ಕುಡಿಯುವ ನೀರು ನಿರ್ವಾಹಕ ಸನಿಲ್‌ಕುಮಾರ್ ಅವರು ಉದನೆಯಿಂದ ಕಳಪ್ಪಾರುಗೆ ತೆರಳುತ್ತಿದ್ದ

ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ಸ್ಥಾಪನೆ- ಸ್ಥಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳ ಮಾರಾಟದ ಹಿನ್ನೆಲೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾರಾಗೃಹದ ಮುಂಭಾಗದ ಆವರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತ ಸ್ಥಳ ಎಂದು ಅಂತಿಮಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರಾಗ್ರಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹದಲ್ಲಿ ಬಂಧಿತರಾಗಿರುವ ಕೈದಿಗಳು

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ಸ್ಥಾಪನೆ- ಸ್ಥಳ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.   ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.      

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top