ಕರಾವಳಿ

ಕಡಬ: ನಾಳೆ (ನ.24) ಕರ್ನಾಟಕ ಸಲಫಿ ಅಸೋಸಿಯೇಷನ್ ವತಿಯಿಂದ ಧಾರ್ಮಿಕ ಕಾರ್ಯಕ್ರಮ – ಡ್ರಗ್ಸ್ ಮುಕ್ತರಾಗೋಣ, ಸೃಷ್ಟಿಕರ್ತನಿಗೆ ವಿಧೇಯರಾಗೋಣ ಧ್ಯೇಯದಡಿ ಧಾರ್ಮಿಕ ಪ್ರಭಾಷಣ

(ನ್ಯೂಸ್ ಕಡಬ) newskadaba.com ಕಡಬ, ನ. 23. ಕರ್ನಾಟಕ ಸಲಫಿ ಅಸೋಸಿಯೇಷನ್ (ರಿ.) ಸುಳ್ಯ ಮತ್ತು ಬೆಳ್ಳಾರೆ ಘಟಕದ ವತಿಯಿಂದ ಡ್ರಗ್ಸ್ ಮುಕ್ತರಾಗೋಣ, ಸೃಷ್ಟಿಕರ್ತನಿಗೆ ವಿಧೇಯರಾಗೋಣ ಎಂಬ ಧ್ಯೇಯವಾಕ್ಯದಡಿ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮವು ನಾಳೆ (ನ.24 ಶುಕ್ರವಾರ) ಕಡಬದ ಅನುಗ್ರಹ ಸಭಾಭವನದ ವಠಾರದಲ್ಲಿ ನಡೆಯಲಿದೆ. ನಾಳೆ ಸಂಜೆ 5 ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ| ಇಬ್ರಾಹಿಂ ಖಲೀಲ್ ತಲಪಾಡಿ ಪ್ರಭಾಷಣಗೈಯಲಿದ್ದು, ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಎಂ.ಎಸ್. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ […]

ಕಡಬ: ನಾಳೆ (ನ.24) ಕರ್ನಾಟಕ ಸಲಫಿ ಅಸೋಸಿಯೇಷನ್ ವತಿಯಿಂದ ಧಾರ್ಮಿಕ ಕಾರ್ಯಕ್ರಮ – ಡ್ರಗ್ಸ್ ಮುಕ್ತರಾಗೋಣ, ಸೃಷ್ಟಿಕರ್ತನಿಗೆ ವಿಧೇಯರಾಗೋಣ ಧ್ಯೇಯದಡಿ ಧಾರ್ಮಿಕ ಪ್ರಭಾಷಣ Read More »

ಕರಾವಳಿ, ಕರ್ನಾಟಕ

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ನ. 23. ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯಾದ ಆರೋಗ್ಯ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್‌ವಿಎಸ್ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲ್ ಹಾಗೂ ಪಿಯು ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23. ಅಕ್ರಮವಾಗಿ ಮರಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ಸಮೇತ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಕಡಿದು ಸಾಗಿಸುತ್ತಿದ್ದ ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 23. ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.   ಮೃತ ಮಹಿಳೆಯನ್ನು ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು ಗುರುತಿಸಲಾಗಿದೆ. ಲೀಲಾವತಿಯವರು ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ನ. 23. ಮುಕ್ಕ ಚೆಕ್‌ಪೋಸ್ಟ್‌ ಬಳಿ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಭಾಗಕ್ಕೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಮಯ್ಯದ್ದಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಫಲಕ ಅಳವಡಿಸದೇ ಲಾರಿ ನಿಲ್ಲಿಸಿದ ಚಾಲಕ ಕಳಸಪ್ಪ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪರವಾನಗಿ ಇಲ್ಲದ ನಾಡ ಕೋವಿ ಹೊಂದಿದ್ದ ಪ್ರಕರಣ- ಆರೋಪಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಸುಳ್ಯ, ನ. 23. ಪರವಾನಗಿ ಇಲ್ಲದೇ ನಾಡಕೋವಿ ಹೊಂದಿದ್ದ ಪ್ರಕರಣದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಸುಳ್ಯ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ವಿಧಿಸಿರುವ ಕುರಿತು ವರದಿಯಾಗಿದೆ. 2013ರಲ್ಲಿ ಕಣ್ಣೂರು ಜಿಲ್ಲೆಯ ಎಂ.ಕೆ. ಅಜಿತ್ ಎಂಬಾತ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಬಟ್ಟಂಗಾಯ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿರುವ ಮನೆಯ ಅಂಗಳಕ್ಕೆ ಪರವಾನಿಗೆ ಇಲ್ಲದ ನಾಡ ಕೋವಿ, ಗನ್ ಪೌಡರ್ ಹಾಗೂ 2 ಕಬ್ಬಿಣದ ಕಡ್ಡಿಗಳನ್ನು ತಂದಿದ್ದು,

ಸುಳ್ಯ: ಪರವಾನಗಿ ಇಲ್ಲದ ನಾಡ ಕೋವಿ ಹೊಂದಿದ್ದ ಪ್ರಕರಣ- ಆರೋಪಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಹೊಟೇಲ್ ರೂಂ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ನ. 15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ಬುಧವಾರದಂದು ರಾತ್ರಿ ಊಟದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ಅರಿತ

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿದೇಶದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದ ಕುರಿತು ವರದಿಯಾಗಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರವರು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿಯೋರ್ವರು ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದಿದ್ದಾರೆ. ಈ ವೇಳೆ

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ

ನಾಳೆ (ನ.24) ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಇದರ ಸಹಯೋಗದಲ್ಲಿ ನಗರದ ಎಮ್ಮೆಕೆರೆಯಲ್ಲಿ ನಿರ್ಮಿಸಲಾಗಿರುವ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸ್ಪೀಕರ್ ಯುಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆಯನ್ನು ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ನೆರವೇರಿಸುವರು. 19ನೇ ರಾಷ್ಟ್ರೀಯ ಮಾಸ್ಟರ್ ಚಾಂಪಿಯನ್‍ಶಿಪ್ ಈಜು ಸ್ಪರ್ಧೆ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಹಾಗೂ

ನಾಳೆ (ನ.24) ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ರವರು ಬುಧವಾರದಂದು ಪಂಜಾಬ್ ವಿಧಾನಸಭೆ ಸಭಾಧ್ಯಕ್ಷ ಸರ್ದಾರ್ ಕುಳ್ತಾರ್ ಸಿಂಘ್ ಸಂದ್ವನ್ ಅವರನ್ನು ಭೇಟಿಯಾಗಿ ಚರ್ಚಿಸಿ ಅಗತ್ಯ ಮಾಹಿತಿ ಪಡೆದರು. ಪಂಜಾಬ್ ವಿಧಾನ ಸಭೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಕೂಡ ಚರ್ಚಿಸಿದರು. ಈ ಸಂದರ್ಭದಲ್ಲಿ ಪಂಜಾಬ್ ವಿಧಾನ ಸಭೆಯ ಕಾರ್ಯದರ್ಶಿ ರಮ್ಲೋಕ್, ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top