ಕರಾವಳಿ

ಲಿಡ್‍ ಕರ್ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪರಿಶಿಷ್ಟ ಜಾತಿ, ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ ಸಮಗಾರ, ಮೋಚಿ ಜನಾಂಗದವರಿಗೆ 2023- 24ನೇ ಸಾಲಿನ ವಿವಿಧ ಯೋಜನೆಗಳಾದ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರ, ಮಾನವ ಸಂಪನ್ಮೂಲ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ ಮತ್ತು ವಸತಿ ಯೋಜನೆಗಳಿಗೆ ಅರ್ಜಿ […]

ಲಿಡ್‍ ಕರ್ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಿಸೆಂಬರ್ 2 ರಂದು ಜಿಲ್ಲಾಮಟ್ಟದ ಯುವಜನೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಮಂಗಳೂರು ತಾಲೂಕು ಯುವಜನ ಒಕ್ಕೂಟ, ಉಳ್ಳಾಲ ಪುರಸಭೆ ಹಾಗೂ ಶೃತಿಲಯ ಕಲಾ ಕೇಂದ್ರ ಕುತ್ತಾರು, ಉಳ್ಳಾಲ ಇವರ ಸಹಯೋಗದಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 2 ರಂದು ಉಳ್ಳಾಲ ನಗರಸಭಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಸ್ಪರ್ಧಾಳುಗಳು ಡಿಸೆಂಬರ್ 2ರಂದು ಬೆಳಗ್ಗೆ 9 ಗಂಟೆಯ ಒಳಗೆ

ಡಿಸೆಂಬರ್ 2 ರಂದು ಜಿಲ್ಲಾಮಟ್ಟದ ಯುವಜನೋತ್ಸವ Read More »

ಕರಾವಳಿ

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ನವೆಂಬರ್ 27ರಂದು ಬೆಳಗ್ಗೆ 11.30 ರಿಂದ 1 ಗಂಟೆಯವರೆಗೆ  ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ ನಡೆಸುವರು. ಅಲ್ಪಸಂಖ್ಯಾತ ಸಮುದಾಯದವರು ಈ ಸಭೆಗೆ ಹಾಜರಾಗಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳ ಸಭೆ Read More »

ಕರಾವಳಿ

ಡಿಸೆಂಬರ್ 2ರಂದು ವಿಶ್ವ ವಿಕಲಚೇತನರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಲಯನ್ಸ್ ಕ್ಲಬ್ ಮಂಗಳೂರು ಗಾಂಧಿನಗರ ಇವರ ಸಹಯೋಗದಲ್ಲಿ ಡಿಸೆಂಬರ್ 2 ರಂದು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9.15ಕ್ಕೆ ವಿಶೇಷ ಶಾಲೆಗಳ ವಿಕಲಚೇತನ ಮಕ್ಕಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳಿಂದ

ಡಿಸೆಂಬರ್ 2ರಂದು ವಿಶ್ವ ವಿಕಲಚೇತನರ ದಿನಾಚರಣೆ Read More »

ಕರಾವಳಿ

ಕೊಂಕಣಿ ಭಾಷಾ ಮಂಡಳ್ ಕರ್ನಾಟಕಕ್ಕೆ ಜೆಸ್ವಿತ್ ಕೊಂಕಣಿ ಸಂಸ್ಥೆಗಳ ಬೆಂಬಲ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಕೊಂಕಣಿ ಮಾತೃಭಾಷೆಯ ಸೇವೆಯಲ್ಲಿ ಹಿರಿಯ ಎರಡು ಸಂಸ್ಥೆಗಳು ಒಟ್ಟಾಗಿದ್ದು ಇದು ಶುಭ ಸೂಚನೆಯಾಗಿದೆ ಎಂದು ರೆ|ಫಾ|ಮೆಲ್ವಿನ್ ಪಿಂಟೊ ನುಡಿದರು. ಅವರು ಜೆಸ್ವಿತ್ ಶಿಕ್ಷಣ ಸಂಸ್ಥೆಗಳು ಮಂಗಳೂರು ಇವುಗಳ ರೆಕ್ಟರ್ ಆಗಿ ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇವರ ಐವತ್ತು ವರ್ಷಗಳ ಆಚರಣೆಗೆ ತಮ್ಮ ದೇಣಿಗೆಯನ್ನು ನೀಡಿ ಮಾತನಾಡಿದರು. ಜನವರಿ ಒಂಭತ್ತರಂದು ಪುರಭವನದಲ್ಲಿ ನಡೆಯುವ ಒಂದು ದಿನದ ಆಚರಣೆಗೆ ತಮ್ಮ ಆಡಳಿತದ ಸೈಂಟ್ ಅಲೋಶಿಯಸ್ ಕಾಲೇಜು ಕೊಂಕಣಿ ವಿಭಾಗಗಳು ಸಕ್ರಿಯವಾಗಿ

ಕೊಂಕಣಿ ಭಾಷಾ ಮಂಡಳ್ ಕರ್ನಾಟಕಕ್ಕೆ ಜೆಸ್ವಿತ್ ಕೊಂಕಣಿ ಸಂಸ್ಥೆಗಳ ಬೆಂಬಲ Read More »

ಕರಾವಳಿ, ಕರ್ನಾಟಕ

ಭೂಮಿ ಯೋಜನೆ- ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17,149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಿದ್ದು, ಇದಕ್ಕೆ ಸಹಕರಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದಿಸಿದ್ದಾರೆ. ಬೆಳ್ತಂಗಡಿ ತಾಲೂಕು ರಾಜ್ಯ ಮಟ್ಟದಲ್ಲಿ ಪ್ರಥಮ

ಭೂಮಿ ಯೋಜನೆ- ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ Read More »

ಕರಾವಳಿ, ಕರ್ನಾಟಕ

ಟ್ರಾನ್ಸ್ ಜೆಂಡರ್ಸ್ ಹಾಗೂ ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಅಶೋಕ ನಗರ ಇವರ ಸಹಯೋಗದಲ್ಲಿ “ಟ್ರಾನ್ಸ್ ಜೆಂಡರ್ಸ್ ಹಾಗೂ ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ”ವನ್ನು ನಗರದ ಕದ್ರಿಯ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಉಸ್ಮಾನ್ ಎ. ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅಶೋಕ ನಗರದ

ಟ್ರಾನ್ಸ್ ಜೆಂಡರ್ಸ್ ಹಾಗೂ ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಶ್ವವಿದ್ಯಾಲಯ- ಪಿ.ಹೆಚ್.ಡಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಖಾಲಿ ಇರುವ ಪಿ.ಹೆಚ್.ಡಿ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿ.ಹೆಚ್.ಡಿ ಕಾರ್ಯಕ್ರಮವನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು ಮತ್ತು ಅರ್ಜಿ ನಮೂನೆಗಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಗೆ ಭೇಟಿ ನೀಡಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ

ಮಂಗಳೂರು ವಿಶ್ವವಿದ್ಯಾಲಯ- ಪಿ.ಹೆಚ್.ಡಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. 2022ನೇ ಸಾಲಿನ ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿಯಿಂದ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು), ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತರಬೇತಿ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ ಶೇಕಡಾ 10 ರಷ್ಟು ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಸೋಮವಾರದಂದು ಪಡೀಲ್ ನ ಹೊಸ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಭದ್ರತಾ ಕೊಠಡಿಯಿಂದ ಹೊರತೆಗೆಯಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ Read More »

ಕರಾವಳಿ, ಕರ್ನಾಟಕ
Scroll to Top