ಕರಾವಳಿ

ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17.  2023-24ನೇ ಸಾಲಿನ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ. 5,000 ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000 ದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಪಶು ಸಖಿಯರು ಮೃತಪಟ್ಟ ಜಾನುವಾರುವಿನ ಮಾಲೀಕರಿಗೆ ಈ […]

ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ದಸರಾ ಹಬ್ಬದ ಪ್ರಯುಕ್ತ ಚರ್ಮದ ವಸ್ತುಗಳ ಮೇಲೆ 20% ರಿಯಾಯಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ನಗರದ ಲೀಡ್‍ಕರ್ ಮಾರಾಟ ಮಳಿಗೆಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 18ರಿಂದ ನವೆಂಬರ್ 18ರವರೆಗೆ ಎಲ್ಲಾ ಚರ್ಮದ ಪಾದರಕ್ಷೆ, ಶೂಗಳು ಮತ್ತು ಚರ್ಮದ ವಸ್ತುಗಳ ಮೇಲೆ ಶೇಕಡ 20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಯಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸರಾ ಹಬ್ಬದ ಪ್ರಯುಕ್ತ ಚರ್ಮದ ವಸ್ತುಗಳ ಮೇಲೆ 20% ರಿಯಾಯಿತಿ Read More »

ಕರಾವಳಿ

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಜಿಲ್ಲಾ ವ್ಯಾಪ್ತಿಯ 17 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನವೆಂಬರ್ 6ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಮುಲ್ಕಿ ತಾಲೂಕಿನ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್, ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಇರುವತ್ತೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತ್, ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಆಯೋಗ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಪೋಕ್ಸೊ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಬಗ್ಗೆ ಶಾಲಾ ಕಾಲೇಜುಗಳಲ್ಲಿ ವಸತಿ ನಿಲಯದಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಇದರ ಬಗ್ಗೆ ತರಬೇತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೆಸ್ವಾಮಿ ಕೆ.ಟಿ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಶಾಲೆ, ಪಂಚಾಯತ್ ಕಟ್ಟಡ ಹಾಗೂ ಬಸ್

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಆಯೋಗ ಸೂಚನೆ Read More »

ಕರಾವಳಿ

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಅ. 17. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಸಂಜೆ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಶಾಲಿನಿ ಎಂಬವರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣವೇ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಶಾಲಿನಿಯವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಟಾಫ್

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ – ಕಡ್ಡಾಯ ದಂಡ ವಿಧಿಸಲು ಡಿ.ಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಶಾಲಾ,ಕಾಲೇಜುಗಳಲ್ಲಿ ಸಿಗರೇಟ್ ಹಾಗೂ ತಂಬಾಕು ಬಳಕೆಗಳಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಎಚ್ಚರಿಕೆ ಬೋರ್ಡ್‍ಗಳನ್ನು ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಬಳಕೆಯ ಅಪರಾಧಕ್ಕೆ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್. ಕೆ ಸಲಹೆ ನೀಡಿದರು. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ, ದೇವಸ್ಥಾನಗಳಲ್ಲಿ,

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ – ಕಡ್ಡಾಯ ದಂಡ ವಿಧಿಸಲು ಡಿ.ಸಿ ಸೂಚನೆ Read More »

ಕರಾವಳಿ

ಬಂಟ್ವಾಳ: ಅಪರೂಪದ ಉಡ’ವನ್ನು ಬೇಟೆಯಾಡಿ ಫೋಟೋಗೆ ಪೋಸ್‌ – ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 16. ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡ’ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದರೊಂದಿಗೆ ಪೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ಬಂಟ್ವಾಳದ ವಗ್ಗದಲ್ಲಿ ನಡೆದಿದೆ. ಉಡ’ವನ್ನು ಕೊಂದ ವ್ಯಕ್ತಿಯನ್ನು ವಗ್ಗ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ವನ್ಯ ಜೀವಿ ಸಂರಕ್ಷಣ ಕಾಯಿದೆ 1972 ಅನ್ವಯ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅ. 11 ರಂದು ಘಟನೆ ಬೆಳಕಿಗೆ ಬಂದಿದ್ದು, ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು

ಬಂಟ್ವಾಳ: ಅಪರೂಪದ ಉಡ’ವನ್ನು ಬೇಟೆಯಾಡಿ ಫೋಟೋಗೆ ಪೋಸ್‌ – ಯುವಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣಗಳ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೋರ್ವನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ರವಿವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಜಾಲ್ ಫೈಸಲ್ ನಗರದ ತೌಸೀಫ್ (27)ಎಂದು ಗುರುತಿಸಲಾಗಿದೆ. 2016ರಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯು ಕಳೆದ ನಾಲ್ಕು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈ‌ ಬಗ್ಗೆ ‌ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆರೋಪಿಯ ಬಗ್ಗೆ ಮಾಹಿತಿ ಪಡೆದ

ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣಗಳ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುರತ್ಕಲ್, ಅ. 16. ವಾಟ್ಸಾಪ್ ಗ್ರೂಪ್ ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸುರತ್ಕಲ್ ಕಟ್ಲ ನಿವಾಸಿ ಮೂಡ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದ ಪ್ರವೀಣ ಮತ್ತು ಚೊಕ್ಕಬೆಟ್ಟು ಕ್ರಾಸ್ ವಿಶಾಲ್ ಮಾರ್ಟ್ ಬಳಿಯ ನಿವಾಸಿ ಮೂಡ ಮಾರುಕಟ್ಟೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುನವ್ವರ್ ಎಂದು ಗುರುತಿಸಲಾಗಿದೆ. ಆರೋಪಿ ಪ್ರವೀಣ್ ಎಂಬಾತ ವಾಟ್ಸಾಪ್ ಗ್ರೂಪ್ ಗಳನ್ನು ಮಾಡಿಕೊಂಡು ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ

ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 16. ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವ ಕುರಿತು ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೇ ಎರಡು ಪವನಿನ

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top