ಕರಾವಳಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದ್ದು, ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. […]

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕರ್ನಾಟಕ

ಲಾರಿಗೆ ವಿದ್ಯುತ್ ತಂತಿ ಸಿಲುಕಿ ರಸ್ತೆಗೆ ವಾಲಿದ ವಿದ್ಯುತ್ ಕಂಬ – ತಪ್ಪಿದ ಭಾರೀ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಲಾರಿಯೊಂದಕ್ಕೆ ವಿದ್ಯುತ್ ತಂತಿ ಸಿಲುಕಿದ ಪರಿಣಾಮ, ವಿದ್ಯುತ್ ಕಂಬವೊಂದು ಕಿತ್ತು ರಸ್ತೆಗೆ ವಾಲಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಾಹನ ಸವಾರರು ಪಾರಾದ ಘಟನೆ ತುಂಬೆ ಬಳಿ ನಡೆದಿದೆ. ಬೆಂಗಳೂರಿನಿಂದ ಎಚ್‌ಪಿಸಿಎಲ್‌ ಗೆ ತೆರಳುತ್ತಿದ್ದ ಲಾರಿಯ ಹಿಂಬಾಂಗದಲ್ಲಿ ಲೋಡ್ ಆಗಿದ್ದ ಕೆಲವು ವಸ್ತುಗಳಿಗೆ ರಸ್ತೆ ಬದಿಯ ವಿದ್ಯುತ್ ಕಂಬದ ತಂತಿಗಳು ಸಿಲುಕಿದೆ. ಇದರ ಅರಿವಿರದ ಚಾಲಕ ಲಾರಿಯನ್ನು ಮುಂದಕ್ಕೆ ಚಲಾಯಿಸಿದಾಗ ವಿದ್ಯುತ್ ತಂತಿಗಳು ಎಳೆದಾಡಿದಂತಾಗಿ, ವಿದ್ಯುತ್ ಕಂಬವು

ಲಾರಿಗೆ ವಿದ್ಯುತ್ ತಂತಿ ಸಿಲುಕಿ ರಸ್ತೆಗೆ ವಾಲಿದ ವಿದ್ಯುತ್ ಕಂಬ – ತಪ್ಪಿದ ಭಾರೀ ದುರಂತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗುದದ್ವಾರದಲ್ಲಿಟ್ಟು ಅಕ್ರಮ ಚಿನ್ನಸಾಗಾಣೆ – ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಗುದದ್ವಾರದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅ. 04 ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯ ತಪಾಸಣೆ ವೇಳೆ ಡಿಟೆಕ್ಟರ್ ನಲ್ಲಿ ಬೀಪ್ ಶಬ್ದ ಬಂದಿದ್ದ, ಈ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಧೃಡಪಟ್ಟಿದೆ. ಎರಡು ಗೋಳಾಕಾರದ ಕ್ಯಾಪ್ಸುಲ್ ಮಾದರಿಗಳಲ್ಲಿ ಪೇಸ್ಟ್ ರೂಪದ ಚಿನ್ನವನ್ನು ಗುದದ್ವಾರದಲ್ಲಿ

ಗುದದ್ವಾರದಲ್ಲಿಟ್ಟು ಅಕ್ರಮ ಚಿನ್ನಸಾಗಾಣೆ – ಮಹಿಳೆ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯೋತ್ಸವಕ್ಕೆ ಜಿಲ್ಲಾದ್ಯಂತ ಸಂಭ್ರಮದ ಸಿದ್ಧತೆ- ಡಾ.ಎಂ.ಪಿ.ಶ್ರೀನಾಥ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶನದಲ್ಲಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ ಅವರು ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಜರುಗಿದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಜರುಗಿದ ರಾಜ್ಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ತೀರ್ಮಾನಗಳನ್ನು ವಿವರಿಸಿದರು. ದತ್ತಿನಿಧಿ ಕಾರ್ಯಕ್ರಮಗಳನ್ನು ಇನ್ನಷ್ಟು ಏರ್ಪಡಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನವನ್ನು

ರಾಜ್ಯೋತ್ಸವಕ್ಕೆ ಜಿಲ್ಲಾದ್ಯಂತ ಸಂಭ್ರಮದ ಸಿದ್ಧತೆ- ಡಾ.ಎಂ.ಪಿ.ಶ್ರೀನಾಥ Read More »

ಕರಾವಳಿ

ಇಂದು ದಡಾರ, ರುಬೆಲ್ಲಾ ನಿರ್ಮೂಲನ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. 2023ನೇ ಸಾಲಿನ 3ನೇ ಸುತ್ತಿನ ದಡಾರ ಮತ್ತು ರುಬೆಲ್ಲಾ ನಿರ್ಮೂಲನಾ ನಗರ ಮಟ್ಟದ ಚಾಲನಾ ಸಮಿತಿ ಸಭೆಯು ಇಂದು(ಅ. 5) ಬೆಳಗ್ಗೆ 10.30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಲಿಕೆಯ 2ನೇ ಮಹಡಿಯಲ್ಲಿರುವ ಆಯುಕ್ತರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ದಡಾರ, ರುಬೆಲ್ಲಾ ನಿರ್ಮೂಲನ ಸಭೆ Read More »

ಕರಾವಳಿ

ದಕ್ಷಿಣ ಕನ್ನಡದ ಹಲವು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ – ಕಡಬದ ರುಕ್ಮಯ ಗೌಡರವರಿಗೂ ಸಂದ ಪ್ರಶಸ್ತಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. 2021-2022 ಹಾಗೂ 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಜಿಲ್ಲೆಯ ಅಗ್ನಿಶಾಮಕ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಜನರಾಗಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್, ಕದ್ರಿ ಅಗ್ನಿಶಾಮಕ ಠಾಣೆಯ ಜಿಲ್ಲಾಧಿಕಾರಿ ಮಹಮ್ಮದ್ ಜುಲ್ಫಿಕರ್ ನವಾಜ್ ಕೆ ಪಿ, ಜಿಲ್ಲೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ್, ಜಿಲ್ಲೆಯ ಮಂಗಳೂರು ತಾಲೂಕಿನ ಆದರ್ಶ ನಗರದ ಪ್ರಮುಖ ಅಗ್ನಿಶಾಮಕ-1647 ಸುದರ್ಶನ್.ಕೆ, ಕಡಬ ತಾಲೂಕಿನ ಕೊಂಬಾರು ಪ್ರಮುಖ ಅಗ್ನಿಶಾಮಕ-2119

ದಕ್ಷಿಣ ಕನ್ನಡದ ಹಲವು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ – ಕಡಬದ ರುಕ್ಮಯ ಗೌಡರವರಿಗೂ ಸಂದ ಪ್ರಶಸ್ತಿ..! Read More »

ಕರಾವಳಿ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 04. ಮಾರ್ಬಲ್‌ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್ ಲೋಡ್ ಗಾಗಿ ರಿವರ್ಸ್ ತೆಗೆಯುವ ಸಂದರ್ಭ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಮಂಗಳೂರು ವಿಶ್ವವಿದ್ಯಾನಿಲಯ, ಕಾಲೇಜು ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ಮಾಹಿತಿ ಶಿಬಿರವನ್ನು ಅ. 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಲಾಲ್ ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ Read More »

ಕರಾವಳಿ

ಯುವತಿ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ನಗರದ ಅಭಿಮಾನ್ ಮ್ಯಾನ್ಷನ್ ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಆಸ್ಟಿಯ ಸಮ್ರೀನ್ (22) ಎಂಬಾಕೆ ಅ. 01 ರಂದು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ:- ಎತ್ತರ 5.2 ಅಡಿ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕಾಣೆಯಾಗುವಾಗ ಹಸಿರು ಬಣ್ಣದ ಚೂಡಿದಾರ ಟಾಪ್, ತಿಳಿ ಗ್ರೇ ಬಣ್ಣದ ಪ್ಯಾಂಟ್ ಶಾಲು ಹಾಕಿರುತ್ತಾರೆ. ಹಿಂದಿ, ಉರ್ದು, ಕನ್ನಡ ಮತ್ತು ಇಂಗ್ಲೀಷ್ ಭಾಷೆ

ಯುವತಿ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು, ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ನ ವೆಬ್‍ಸೈಟ್ https://sevasindhu.karnataka.gov.in ನಲ್ಲಿ ಅ.15 ರೊಳಗೆ ನಾಮನಿರ್ದೇಶನ ಮಾಡಬಹುಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top