ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ, ಅ. 02. ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಗುಡ್ಡಪ್ಪ ಬಲ್ಯ ಇವರು ಮಾತನಾಡುತ್ತಾ “ಇವತ್ತು ನಾವು ಇಬ್ಬರು ಮಹಾತ್ಮರುಗಳ ಜನ್ಮದಿನವನ್ನು ಆಚರಿಸುತ್ತಾ ಇದ್ದೇವೆ. ಇಬ್ಬರೂ ಕೂಡ ಮಹತ್ತರ ಕೆಲಸಗಳನ್ನು ಮಾಡಿದ ಕಾರಣ ಆ ಆತ್ಮವನ್ನು ಮಹಾತ್ಮರನ್ನಾಗಿ ನಾವು ಕಾಣುತ್ತೇವೆ. ಮಹಾತ್ಮ ಗಾಂಧೀಜಿಯವರ ಬಗ್ಗೆ ಹೇಳುವುದಾದರೆ, ಅವರು ಅನೇಕ ಕಷ್ಟಗಳನ್ನ ಸಹಿಸಿಕೊಂಡು, ಬೇರೆ ಬೇರೆ ರಾಷ್ಟ್ರಗಳಲ್ಲಿ […]

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ್ ಸೇವಾದಳದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಅಕ್ಟೋಬರ್ 2ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಟೌನ್‍ಹಾಲ್ ಬಳಿಯಿರುವ ರಾಜಾಜೀ ಪಾರ್ಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ನಗರ ಪೊಲೀಸ್ ಆಯುಕ್ತರು, ಜಿಲ್ಲಾ

ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ Read More »

ಕರಾವಳಿ

ಕಡಬ: ಶಾಲಾ ಬಳಿ ತಂಬಾಕು ಮಾರಾಟ- ಸಿಎಂ ಕಛೇರಿಗೆ ಪತ್ರ ಬರೆದ 3ನೇ ತರಗತಿ ಬಾಲಕಿ..! ; ತುರ್ತು ಸ್ಪಂದಿಸಿದ ಸಿಎಂ ಕಛೇರಿ- ಎರಡೇ ಗಂಟೆಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಅ. 01. ಶಾಲಾ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ತುರ್ತು ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಕಚೇರಿ, ನೀಡಿದ ಸೂಚನೆ ಮೇರೆಗೆ ಕಡಬ ಪೊಲೀಸರು ಅಂಗಡಿಯೊಂದಕ್ಕೆ ದಾಳಿ ನಡೆಸಿ ಮಾರಾಟವಾಗುತ್ತಿದ್ದ ತಂಬಾಕು ಮತ್ತು ಸಿಗರೇಟನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿಯಾತನಿಗೆ ದಂಡ ವಿಧಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಎಂಬಾಕೆ ಪತ್ರಿಕೆಯೊಂದಕ್ಕೆ ಪತ್ರ ಬರೆದಿದ್ದು, ಅದರಲ್ಲಿ ಶಾಲೆ

ಕಡಬ: ಶಾಲಾ ಬಳಿ ತಂಬಾಕು ಮಾರಾಟ- ಸಿಎಂ ಕಛೇರಿಗೆ ಪತ್ರ ಬರೆದ 3ನೇ ತರಗತಿ ಬಾಲಕಿ..! ; ತುರ್ತು ಸ್ಪಂದಿಸಿದ ಸಿಎಂ ಕಛೇರಿ- ಎರಡೇ ಗಂಟೆಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಕೃಷಿ ಉತ್ಪನ್ನಗಳ ವ್ಯಾಪಾರಿಯೊಬ್ಬರಿಗೆ ವ್ಯಕ್ತಯೋರ್ವ 75 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ವಂಚನೆಗೊಳಗಾದವರನ್ನು ಅಬ್ದುಲ್ ರಹಿಮಾನ್ ಬಾವಾ ಎನ್ನಲಾಗಿದೆ. ಇವರು ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೇಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 2021ರ ಜನವರಿಯಲ್ಲಿ ದೂರುದಾರರಿಗೆ ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ಚಾಲಕನಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿ ಆಟೋ ಚಾಲಕನಿಗೆ ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ಮಹಮ್ಮದ್‌ ಸುಹೈಲ್‌ (25) ಎಂದು ಗುರುತಿಸಲಾಗಿದೆ. ಸೆ. 27 ರಂದು ರಾತ್ರಿ ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭ ಸುಹೈಲ್ ಹಾಗೂ ಆರೋಪಿ ಹಾರೀಸ್‌ ರವರಿಗೆ ಮಾತುಕತೆಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಗುರುವಾರ ಬೆಳಗ್ಗೆ ಸುಹೈಲ್ ತನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು

ಆಟೋ ಚಾಲಕನಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ

(ನ್ಯೂಸ್ ಕಡಬ) newskadaba.com ಮಾಣಿ, ಸೆ. 29. ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯಲ್ಲಿ ಲೋಕ ಪ್ರವಾದಿ ಹಝ್ರತ್ ಮುಹಮ್ಮದ್ ಮುಸ್ತಫಾ (ಸ.ಅ)ರವರ ಜನ್ಮದಿನಾಚರಣೆ ಪ್ರಯುಕ್ತ ಮೀಲಾದುನ್ನಬಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಎರಡು ದಿನಗಳ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಮತ ಪ್ರಭಾಷಣ, ಬುರ್ದಾ ಮಜ್ಲಿಸ್, ಮೌಲಿದ್ ಮತ್ತು ಆಕರ್ಷಕ ಮೀಲಾದ್ ರ‌್ಯಾಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಸೀದಿ ಖತೀಬರಾದ ಹನೀಫ್ ಸ‌ಅದಿ ಕುಂತೂರು, ಸದರ್ ಇಬ್ರಾಹಿಂ ರಝಾ ಅಲ್ ಫುರ್ಖಾನಿ ವಿಟ್ಲ, ಅಧ್ಯಾಪಕರಾದ ನವಾಝ್ ಹನೀಫಿ ಅಲ್ ಅಶ್‌ಹರಿ

ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ Read More »

ಕರಾವಳಿ

ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 29. ಬದ್ರಿಯಾ ಜುಮಾ ಮಸೀದಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್(ಸ.ಅ) ಪೈಗಂಬರರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ಪ್ರವಾದಿ ಕುರಿತ ಕೀರ್ತನೆಗಳು, ಆಲಾಪನೆ, ಪ್ಲವರ್ ಶೋ, ದಫ್ ಸ್ಪರ್ದೆ, ಬುರ್ಧಾ ಮಜ್ಲೀಸ್ ಕಾರ್ಯಕ್ರಮವು ಮರ್ ಹೂಮ್ ಡಾ|ಕೆ.ಎಂ. ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ

ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ Read More »

ಕರಾವಳಿ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದೂ ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಭಯಗೊಂಡ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top