ಕರಾವಳಿ

ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ – ಕಡಬ ಸೈಂಟ್ ಆನ್ಸ್ ಪ್ರಾಥಮಿಕ ಶಾಲೆ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 24. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಲಿಟಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಸಲೀತ್, ರಿಝ್ವಾನ್, ನಿರ್ಭಯ್ ಹಾಗೂ ಕೌಶಿಕ್ […]

ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ – ಕಡಬ ಸೈಂಟ್ ಆನ್ಸ್ ಪ್ರಾಥಮಿಕ ಶಾಲೆ ದ್ವಿತೀಯ Read More »

ಕರಾವಳಿ

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಸೆ. 24. ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಶನಿವಾರದಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ‌

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆವೈಸಿ ಹೆಸರಿನಲ್ಲಿ 1.93 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಕೆವೈಸಿ ಮಾಡದಿದ್ದಲ್ಲಿ ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗುತ್ತದೆ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ 1,93,210 ರೂ. ಹಣವನ್ನು ಬ್ಯಾಂಕ್ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕೆವೈಸಿ ಅಪ್‌ಡೇಟ್ ಮಾಡುವ ಕುರಿತಂತೆ ಸಂದೇಶ ಬಂದಿದೆ. ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಪ್‌ ಡೇಟ್ ಮಾಡದಿದ್ದರೆ ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗುತ್ತದೆ ಎಂದು ತಿಳಿಸಿದ್ದ ಎನ್ನಲಾಗಿದೆ. ಇದನ್ನು ನಂಬಿದ ದೂರುದಾರರು

ಕೆವೈಸಿ ಹೆಸರಿನಲ್ಲಿ 1.93 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ. ಮಹಮ್ಮದ್ ಆದಿಲ್ ಶನಿವಾರದಂದು ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಾಸ್ಟೆಲ್ ನಿಂದ 4 ಮೊಬೈಲ್ ಫೋನ್ ಕಳವು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ನಗರದ ಬಂದರ್‌ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಡಿಕಲ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಿಂದ ವಿದ್ಯಾರ್ಥಿಗಳ ನಾಲ್ಕು ಮೊಬೈಲ್ ಫೋನ್‌ಗಳು ಕಳವಾಗಿರುವ ಕುರಿತು ಹಾಸ್ಟೆಲ್ ವಾರ್ಡನ್ ಸಂಗಮೇಶ್ ಎಂ. ಮಠ ಅವರು ಬಂದರು ಠಾಣೆಗೆ ನಿಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಸೆ. 21ರಂದು ಬೆಳಗ್ಗೆ 8 ಗಂಟೆಗೆ ವಿದ್ಯಾರ್ಥಿ ನಿಲಯದಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಒಟ್ಟು 4 ವಿದ್ಯಾರ್ಥಿಗಳ ಮೊಬೈಲ್ ಪೋನ್‌ಗಳು ನಾಪತ್ತೆಯಾಗಿರುವ ಬಗ್ಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ

ಮಂಗಳೂರು: ಹಾಸ್ಟೆಲ್ ನಿಂದ 4 ಮೊಬೈಲ್ ಫೋನ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಎಕ್ಸ್‌ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮವಾಗಿ ಸುಮಾರು 30 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟಿರುವುದಾಗಿ ಸ್ಟೇಷನ್ ಮಾಸ್ಟರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 24- ರಾಷ್ಟ್ರೀಯ ಸೇವಾ ಯೋಜನಾ ದಿನ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 24. ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುದಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ ನಡುವೆ ಸುಖಕರವಾದ

ಸೆಪ್ಟೆಂಬರ್ 24- ರಾಷ್ಟ್ರೀಯ ಸೇವಾ ಯೋಜನಾ ದಿನ – ಡಾ. ಮುರಲೀ ಮೋಹನ ಚೂಂತಾರು Read More »

ಕರಾವಳಿ, ವಿಶೇಷ ಲೇಖನಗಳು

ಸ್ಕೌಟ್ಸ್-ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ- ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಜಾರಿಗೊಂಡರೆ ವಿದ್ಯಾರ್ಥಿಗಳು ಜಾಗೃತರಾಗಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಅಭಿಪ್ರಾಯಪಟ್ಟರು. ಅವರು ನಗರದ ಲಾಲ್‍ಬಾಗ್ ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಂಡ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ ನಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಶಿಸ್ತು, ಸಂಯಮ, ಕರ್ತವ್ಯ ಮತ್ತು

ಸ್ಕೌಟ್ಸ್-ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ- ಡಾ. ಆನಂದ್ Read More »

ಕರಾವಳಿ

ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಕಡಬ ಹಾಗೂ ಸವಣೂರು ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 24ರಂದು ಬೆಳಿಗ್ಗೆ 9 ಗಂಟೆಗೆ  ಸವಣೂರು  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ

ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ

ಇಂದು (ಸೆ. 24) ಬಂಟ್ವಾಳ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಂಟ್ವಾಳ ತಾಲೂಕು ಪಂಚಾಯತ್, ಬಂಟ್ವಾಳ ಪುರಸಭೆ, ವಿಟ್ಲ ಪಟ್ಟಣ ಪಂಚಾಯತ್ ಹಾಗೂ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 24ರಂದು ಬೆಳಿಗ್ಗೆ 9 ಗಂಟೆಗೆ ವಿಟ್ಲದ ವಿಠಲ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ

ಇಂದು (ಸೆ. 24) ಬಂಟ್ವಾಳ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ
Scroll to Top