ಕರಾವಳಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2023ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ಮೈದಾನದ ಎದುರಿನಲ್ಲಿರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಆರಂಭವಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೊಡಿಯಾಳ, ಆಲೆಟ್ಟಿ […]

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ Read More »

ಕರಾವಳಿ

ಪುತ್ತೂರು: ನಾಳೆ (ಸೆ.23) ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪುತ್ತೂರು ತಾಲೂಕು ಪಂಚಾಯತ್ ಹಾಗೂ ಪುತ್ತೂರು ನಗರಸಭೆ ಅವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 23ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ

ಪುತ್ತೂರು: ನಾಳೆ (ಸೆ.23) ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಯಾವ ಕ್ರೀಡೆಯಲ್ಲಿಯೂ ಸಹ ಧರ್ಮ ಪಂಥ ಮೇಲು ಕೀಳು ಎಂಬ ಭಾವನೆ ಇಲ್ಲ. ಕ್ರೀಡೆಯಲ್ಲಿ ಇದನ್ನು ನೋಡಲು ಸಾಧ್ಯವಿಲ್ಲ. ಕ್ರೀಡೆ ಒಂದು ಒಗ್ಗಟ್ಟಿನ ಮಂತ್ರ. ನಮ್ಮ ಮಕ್ಕಳ ಶೈಕ್ಷಣಿಕದೊಂದಿಗೆ ಸಾಮರಸ್ಯವನ್ನು ಮೂಡಿಸಲು ಕ್ರೀಡೆಯು ಪ್ರಧಾನ ಅಂಗವಾಗಿದೆ. ನಾವೆಲ್ಲರೂ ಎಲೆ ಮರೆ ಕಾಯಿಯಂತೆ ಪ್ರಾಥಮಿಕ ಶಾಲಾ ಮಕ್ಕಳಂತೆ ಕ್ರೀಡೆಗೆ ಬಂದಿದ್ದೇವೆ. ನಿಮ್ಮಲ್ಲಿ ಯಾವ ಪ್ರತಿಭೆ ಇದೆಯೋ ಅದು ನಿಮ್ಮನ್ನು ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹಾಗೂ ದೇಶವನ್ನೇ ಪ್ರತಿನಿಧಿಸಲಿಕ್ಕೆ ಸಾಧ್ಯವಾಗಬಹುದು.

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ Read More »

ಕರಾವಳಿ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ. ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಶಾಲಾ ಮೈದಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಸುರೇಶ್ ಉಳುವಾರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಯಕ್ಷಗಾನ ಯುವ ವೇಷಧಾರಿ ಹೆರಂಜಾಲು ರಾಜೇಂದ್ರ ಗಾಣಿಗ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರದಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿದ್ದ ರಾಜೇಂದ್ರ ಗಾಣಿಗ ಅವರು, ಮಾರಣಕಟ್ಟೆ, ಹಾಲಾಡಿ, ಸೌಕೂರು ಹಾಗೂ ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆ ಮಾಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ತಾಯಿ ಹಾಗೂ ಅಪಾರ ಸಂಖ್ಯೆಯ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ (ಲಿ.) ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆ ಒಟ್ಟು 88 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಹಣ ಪಾವತಿಗೆ ವಿಫಲರಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆ, ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ಬಾಲಕಿಯರ ನೂತನ ವಿದ್ಯಾರ್ಥಿ ನಿಲಯಗಳ ಉದ್ಘಾಟನೆ: ಶಿಕ್ಷಣಕ್ಕೆ ಒತ್ತು ನೀಡುವಲ್ಲಿ ವಿದ್ಯಾರ್ಥಿ ನಿಲಯಗಳ ಪಾತ್ರ ಮುಖ್ಯ- ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಶಿಕ್ಷಣಕ್ಕೆ ಒತ್ತು ನೀಡಲು ಸುಜಜ್ಜಿತ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಮಹತ್ವವಿದೆ, ಅದನ್ನು ಮನಗಂಡು ಸಮಾಜ ಸುಧಾರಕರಾದ ಕುದ್ಮುಲ್ ರಂಗರಾವ್ ಅವರು ಒಂದು ನೂರು ವರ್ಷಗಳ ಹಿಂದೆಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತರು ಹಾಗೂ ಧ್ವನಿ ಇಲ್ಲದವರಿಗೆ ಆಗುತ್ತಿದ್ದ ಅನ್ಯಾಯವನ್ನು ತಡೆಯಲು, ಅವರಲ್ಲಿ ಬದಲಾವಣೆ ತರಲು ಹೋರಾಟ ಮಾಡಿದರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯಪಟ್ಟರು. ಅವರು

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ಬಾಲಕಿಯರ ನೂತನ ವಿದ್ಯಾರ್ಥಿ ನಿಲಯಗಳ ಉದ್ಘಾಟನೆ: ಶಿಕ್ಷಣಕ್ಕೆ ಒತ್ತು ನೀಡುವಲ್ಲಿ ವಿದ್ಯಾರ್ಥಿ ನಿಲಯಗಳ ಪಾತ್ರ ಮುಖ್ಯ- ದಿನೇಶ್ ಗುಂಡೂರಾವ್ Read More »

ಕರಾವಳಿ

ಮಂಗಳೂರು: ಸೆ. 25 ರಂದು ಜನತಾ ದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇದೇ ಸೆ. 25ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಸೆ. 25 ರಂದು ಜನತಾ ದರ್ಶನ Read More »

ಕರಾವಳಿ

ಸೆ. 25 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದೊಂದಿಗೆ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇದೇ ಸೆ. 25 ರಂದು ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ ವಿವರ ಪುರುಷರಿಗೆ:- ಅಥ್ಲೆಟಿಕ್ಸ್- 100 ಮೀ, 200 ಮೀ, 400

ಸೆ. 25 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಇಲ್ಲಿನ ನೆಕ್ಕಿಲಾಡಿಯಲ್ಲಿ ಕಾರ್ಯಾಚರಿಸುತ್ತಿದ್ದ ರೈಟ್ ಚಾಯ್ಸ್ ಪೆಟ್ರೋಲ್ ಪಂಪ್‌ನಲ್ಲಿ ಸೆ.16ರ ಮಧ್ಯರಾತ್ರಿಯ ವೇಳೆ ಕಳ್ಳತನವಾಗಿರುವ ಕುರಿತು ಸಿಸಿಟಿವಿ ದೃಶ್ಯದ ಮೂಲಕ ಬೆಳಕಿಗೆ ಬಂದಿದೆ. ಕಳ್ಳನೋರ್ವ ಗ್ಲಾಸ್ ಡೋರ್‌ನ ಲಾಕ್ ಪುಡಿಗೈದು ಒಳಬಂದು ಕ್ಯಾಶ್ ಡ್ರಾವರ್‌ನಲ್ಲಿದ್ದ 30 ಸಾವಿರ ರೂ. ನಗದನ್ನು ಕಳವು ಮಾಡಿದ್ದು, ರೈನ್‌ಕೋಟ್, ಹೆಲ್ಮೆಟ್ ಧರಿಸಿ ಬಂದ ಕಳ್ಳ ಟಾರ್ಚ್ ಹಿಡಿದು ಕ್ಯಾಬಿನ್ ಜಾಲಾಡುವ ದೃಶ್ಯ ಸೆರೆಯಾಗಿದೆ. ಈ ಕುರಿತು ಪೆಟ್ರೋಲ್‌ ಬಂಕ್‌ ಮಾಲಕ ನವಾಝ್ ಎಂಬವರು

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top