ಕರಾವಳಿ

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಈ ಅಗ್ನಿ ಅನಹುತ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ ಎಂದು ಹೇಳಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸುಮಾರು ಒಂದು ತಾಸಿಗಿಂತಲೂ ಅಧಿಕ ಸಂಚಾರಕ್ಕೆ ಅಡಚಣೆಯಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದಲ್ಲದೇ, ಇದರ ಹಿಂಬದಿಯಿಂದ ಬಂದ ಎರಡು ವಾಹನಗಳು ಮತ್ತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಕೆಟ್ಟು ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು Read More »

ಕರಾವಳಿ, ಕ್ರೈಮ್ ನ್ಯೂಸ್

ಅರಣ್ಯದಿಂದ ಮರ ಸಾಗಾಟ- ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಹಾಸ್ಪರೆ ಭಾಗದಲ್ಲಿ ಮೀಸಲು ಅರಣ್ಯದಿಂದ ಮರವನ್ನು ಕಡಿದು ಸಾಗಿಸುತ್ತಿರುವ ಬಗ್ಗೆ ವರದಿಯಾಗಿದೆ. ಈ ಕುರಿತ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಪೆರಾಜೆ ಮೂಲದ ಪಿಕಪ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಸ್ಥಳ ಮಹಜರು ಮಾಡಲು ತೆರಳಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಅರಣ್ಯದಿಂದ ಮರ ಸಾಗಾಟ- ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ಚತುರ್ಥಿ- ಪೊಲೀಸರಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 19. ಗಣೇಶ ಚತುರ್ಥಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಪೊಲೀಸರಿಂದ ಪಥ ಸಂಚಲನವು ಉಡುಪಿ ನಗರದಲ್ಲಿ ನಡೆಯಿತು. ಉಡುಪಿ ಉಪವಿಭಾಗದ ಡಿವೈಎಸ್ಪಿ ದಿನಕರ್ ಪಿ.ಕೆ. ನೇತೃತ್ವದಲ್ಲಿ ಉಡುಪಿ ನಗರ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿ, ಕೆಎಸ್ಆರ್ಟಿಸಿ ತುಕುಡಿ ಸೇರಿದಂತೆ ಒಟ್ಟು ನೂರಕ್ಕೂ ಅಧಿಕ ಪೊಲೀಸರು  ಪಥಸಂಚನಲದಲ್ಲಿ ಪಾಲ್ಗೊಂಡಿದ್ದರು. ನಗರದ ಬನ್ನಂಜೆಯಿಂದ ಆರಂಭಗೊಂಡ ಪಥಸಂಚಲನವು ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ ಮಾರ್ಗವಾಗಿ ಕೆ.ಎಮ್ ಮಾರ್ಗದಲ್ಲಿ ಸಾಗಿ

ಗಣೇಶ ಚತುರ್ಥಿ- ಪೊಲೀಸರಿಂದ ಪಥ ಸಂಚಲನ Read More »

ಕರಾವಳಿ

ಮಂಗಳೂರು: ಸೆ. 22ರಂದು ಹೋಬಳಿ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. 2023-24ನೇ ಸಾಲಿನ ಮಂಗಳೂರು ಪ್ರೌಢಶಾಲಾ ವಿಭಾಗದ ಹೋಬಳಿ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೆ. 22ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕರಾದ ಭರತ್ ಶೆಟ್ಟಿ ವೈ. ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆಯ ಸದಸ್ಯರಾದ ಸುಮಂಗಲಾ ರಾವ್, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟೀನ್ಹೊ, ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್ ಕೆ, ಇ.ಟಿ.ಎ

ಮಂಗಳೂರು: ಸೆ. 22ರಂದು ಹೋಬಳಿ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ Read More »

ಕರಾವಳಿ

ಮಂಗಳೂರು: ಸೆ. 22 ರಂದು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯಸಂಸ್ಥೆ ಹಾಗೂ ಜಿಲ್ಲಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸೆ. 22ರಂದು ಬೆಳಿಗ್ಗೆ ನಗರದ ಲಾಲ್‍ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ ಗೈಡ್ಸ್ ಭವನದಲ್ಲಿ ಒಂದು ದಿನದ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ನೋಡಲ್ ಅಧಿಕಾರಿಗಳು, ಸಿ.ಆರ್.ಪಿ ಮತ್ತು ಕ್ಷೇತ್ರ

ಮಂಗಳೂರು: ಸೆ. 22 ರಂದು ಕಾರ್ಯಗಾರ Read More »

ಕರಾವಳಿ

ಮಂಗಳೂರು: ಸೆ. 20ರಂದು ವಿದ್ಯಾರ್ಥಿ ನಿಲಯಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಉದ್ಘಾಟನಾ ಸಮಾರಂಭವನ್ನು ಸೆ. 20ರ ಬುಧವಾರದಂದು ನಗರದ ಕೊಡಿಯಾಲ್ ಬೈಲ್‍ ನ ಟಿವಿಎಸ್ ಸರ್ಕಲ್ ಸಮೀಪವಿರುವ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ

ಮಂಗಳೂರು: ಸೆ. 20ರಂದು ವಿದ್ಯಾರ್ಥಿ ನಿಲಯಗಳ ಉದ್ಘಾಟನೆ Read More »

ಕರಾವಳಿ

ಭ್ರೂಣ ಲಿಂಗ ನಿಷೇಧ ಕಾಯ್ದೆ-1994 ಕುರಿತು ಸೆ. 20ರಂದು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜಿಲ್ಲೆಯಲ್ಲಿನ ಅಂಗನವಾಡಿ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ನಿಷೇಧ ಕಾಯ್ದೆ-1994 ಹಾಗೂ ಎಂ.ಪಿ.ಟಿ ಆ್ಯಕ್ಟ್ ಬಗ್ಗೆ ಸೆ. 20ರ ಬೆಳಿಗ್ಗೆ 9.30ರಿಂದ ಜಿಲ್ಲಾ ಆಸ್ಪತ್ರೆ ಸಮೀಪವಿರುವ ಇನ್ಫೋಸಿಸ್ ಕಟ್ಟಡದ ಮಕ್ಕಳ ವಿಭಾಗದ 3ನೇ ಮಹಡಿಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭ್ರೂಣ ಲಿಂಗ ನಿಷೇಧ ಕಾಯ್ದೆ-1994 ಕುರಿತು ಸೆ. 20ರಂದು ಕಾರ್ಯಗಾರ Read More »

ಕರಾವಳಿ

ಸೆ. 20ರಂದು ಉಸ್ತುವಾರಿ ಸಚಿವರ ಪ್ರವಾಸ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ. 20ರ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸೆ.20ರ ಬುಧವಾರ ಬೆಳಿಗ್ಗೆ 8.45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 9 ಗಂಟೆಗೆ ಸರ್ಕ್ಯೂಟ್ ಹೌಸ್ ಗೆ ತೆರಳುವರು. 9.30ಕ್ಕೆ  ನಗರದ ದಿ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ ಮಂಗಳೂರು ಟ್ರೇಯತ್ಲಾನ್ ಕಾರ್ಯಕ್ರಮದ ಪೂರ್ವಭಾವಿ ಚರ್ಚೆ

ಸೆ. 20ರಂದು ಉಸ್ತುವಾರಿ ಸಚಿವರ ಪ್ರವಾಸ ಜಿಲ್ಲಾ ಪ್ರವಾಸ Read More »

ಕರಾವಳಿ

ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಅವರು ಸೆ. 20ರ ಬುಧವಾರದಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸೆ.20ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಪಿವಿಎಸ್ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ತಾಲೂಕಿನ ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ

ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ
Scroll to Top