ಕರಾವಳಿ

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ […]

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಹೊತ್ತಿ ಉರಿದ ಕಾರು – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 17.ನಿಂತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಕುಕ್ಕೆ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸರ್ಪಸಂಸ್ಕಾರ ಯಾಗ ಶಾಲೆ ಬಳಿ ನಡೆದಿದೆ. ಬೆಂಗಳೂರಿನಿಂದ ಸರ್ಪಸಂಸ್ಕಾರಕ್ಕೆಂದು ಬಂದಿದ್ದ ಕುಟುಂಬವೊಂದು ಯಾಗಶಾಲೆಯ ಮುಂದೆ ಕಾರು ನಿಲ್ಲಿಸಿತ್ತು. ಸ್ವಲ್ಪ ಸಮಯದ ಬಳಿಕ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅದನ್ನು ನಂದಿಸಿ 30ಕ್ಕೂ ಹೆಚ್ಚು ವಾಹನಗಳು ಪಕ್ಕದಲ್ಲೇ ನಿಂತಿದ್ದರಿಂದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸುಳ್ಯ: ಹೊತ್ತಿ ಉರಿದ ಕಾರು – ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಟೆಲಿಗ್ರಾಂ ನಲ್ಲಿ ಬಂದ ಆನ್‌ಲೈನ್‌ ಪಾರ್ಟ್‌ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್‌ ಟೈಂ ಆನ್‌ಲೈನ್‌ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್‌ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್‌ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಟುಂಬಸ್ಥರು ಯಾರೂ ಬಾರದ ಹಿನ್ನೆಲೆ – ಪೊಲೀಸ್ ಹಾಗೂ ಸ್ಥಳೀಯಾಡಳಿತದಿಂದ ಕಾರ್ಮಿಕನ ಅಂತ್ಯಸಂಸ್ಕಾರ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 17. ವಾರದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಹೊಟೇಲ್‌ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಸಂಬಂಧಿಕರು ಯಾರೂ ಬಾರದ ಹಿನ್ನೆಲೆಯಲ್ಲಿ ಸುಳ್ಯ ಠಾಣಾ ಪೊಲೀಸರು, ಸ್ಥಳೀಯಾಡಳಿತ ನೆರವಿನೊಂದಿಗೆ ಅಂತ್ಯಸಂಸ್ಕಾರ ನಡೆಸಿದ ಕುರಿತು ವರದಿಯಾಗಿದೆ. ಇಲ್ಲಿನ ರಥಬೀದಿಯಲ್ಲಿನ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ಶ್ರೀಲೂಲು ಎಂಬವರು ಕಳೆದ ವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯ ಶೀತಲೀಕರಣ ಘಟಕದಲ್ಲಿ ಇರಿಸಿ, ವ್ಯಕ್ತಿಯ ಸಂಬಂಧಿಕರು ಇದ್ದಲ್ಲಿ ಸುಳ್ಯ ಠಾಣೆ ಸಂಪರ್ಕಿಸುವಂತೆ ಪ್ರಕಟಣೆ ನೀಡಲಾಗಿತ್ತು. ಆದರೆ

ಕುಟುಂಬಸ್ಥರು ಯಾರೂ ಬಾರದ ಹಿನ್ನೆಲೆ – ಪೊಲೀಸ್ ಹಾಗೂ ಸ್ಥಳೀಯಾಡಳಿತದಿಂದ ಕಾರ್ಮಿಕನ ಅಂತ್ಯಸಂಸ್ಕಾರ..! Read More »

ಕರಾವಳಿ

ಉಪ್ಪಿನಂಗಡಿ: ಗಾಂಜಾ ಸೇವನೆ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newsmadaba.com ಉಪ್ಪಿನಂಗಡಿ, ಸೆ. 17. ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ 34ನೇ ನೆಕ್ಕಿಲಾಡಿಯ ಬಸ್‌ ತಂಗುದಾಣದ ಬಳಿ ನಡೆದಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿ ವೆಂಕಟೇಶ್‌ (32) ಎಂದು ಗುರುತಿಸಲಾಗಿದೆ. ಈತನ ಅನುಚಿತ ವರ್ತನೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ಗಾಂಜಾ ಸೇವಿಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದ

ಉಪ್ಪಿನಂಗಡಿ: ಗಾಂಜಾ ಸೇವನೆ- ಓರ್ವ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 17. ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ನಿವಾಸಿ ಕಲಂದರ್ ಶಾ (36) ಎಂದು ಗುರುತಿಸಲಾಗಿದೆ. ಕಲ್ಲಡ್ಕ- ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯಿಂದ ಆಟೋ ರಿಕ್ಷಾ, ಸಾಗಿಸುತ್ತಿದ್ದ  6.110 ಕೆ.ಜಿ ತೂಕದ ಗಾಂಜಾ, ಎರಡು ಮೊಬೈಲ್

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಮಲ್ಪೆ ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೇ 16ರಿಂದ ಸೆ.15ರವರೆಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವರ್ಷ ಹಾರ್ಬರ್ ಕ್ರಾಷ್ಟ್ ನಿಯಮದಂತೆ ಬೀಚ್ ಪ್ರದೇಶದಲ್ಲಿ ಮಳೆಗಾಲದುದ್ದಕ್ಕೂ ಎಲ್ಲಾ ರೀತಿಯ ಜಲ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಇತ್ತೀಚಿನ ಮಳೆಯಿಂದಾಗಿ ಅರಬಿಸಮುದ್ರ ಈಗಲೂ

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..! Read More »

ಕರಾವಳಿ

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 17. ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ತಲಪಾಡಿ ತಚ್ಚಾಣಿ ಬಳಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್‌ ತನ್ವೀರ್‌ (20) ಹಾಗೂ ಕೋಝಿಕ್ಕೋಡ್‌ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕ್‌ ಮತ್ತು ಮೊಬೈಲ್‌ಗ‌ಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎನ್‌ಡಿಪಿಎಸ್‌

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದೈಹಿಕ ಆರೋಗ್ಯಕ್ಕೆ ಕಾಳಜಿ ವಹಿಸಿದಷ್ಟು ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿ- ರವೀಂದ್ರ ಎಂ. ಜೋಶಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಮಾನವನು ದೈಹಿಕ ಆರೋಗ್ಯಕ್ಕೆ ಒತ್ತು ಕೊಡುವ ರೀತಿಯಲ್ಲೇ ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಕೂಡ ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಎಂ. ಜೋಶಿ ಹೇಳಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು

ದೈಹಿಕ ಆರೋಗ್ಯಕ್ಕೆ ಕಾಳಜಿ ವಹಿಸಿದಷ್ಟು ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿ- ರವೀಂದ್ರ ಎಂ. ಜೋಶಿ Read More »

ಕರಾವಳಿ

ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ- ಡಾ. ಸುದರ್ಶನ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಯುವ ಜನರು ವ್ಯಸನದಿಂದ ದೂರ ಉಳಿದು ಸದೃಢ ಮನಸ್ಸನ್ನು ಹೊಂದಿದರೆ ಮಾತ್ರ ಆತ್ಮಹತ್ಯೆಯಂತಹ ಹೇಯ ಕೃತ್ಯಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುದರ್ಶನ್ ತಿಳಿಸಿದರು. ಅವರು ಶನಿವಾರದಂದು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ,

ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ- ಡಾ. ಸುದರ್ಶನ್ Read More »

ಕರಾವಳಿ
Scroll to Top