ಕರಾವಳಿ

ಪ್ರಶಸ್ತಿ ಪ್ರಧಾನ ಸಮಾರಂಭ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ತೃತೀಯ ಚರಣ (ಕಬ್) ಸುವರ್ಣ ಗರಿ (ಬುಲ್ ಬುಲ್) ತೃತೀಯ ಸೋಪಾನ (ಸ್ಕೌಟ್ಸ್-ಗೈಡ್ಸ್) ಹಾಗೂ ನಿಪುಣ್(ರೋವರ್ಸ್-ರೇಂಜರ್ಸ್) ಪ್ರಶಸ್ತಿ ಪ್ರಧಾನ ಸಮಾರಂಭ ಸೆಪ್ಟೆಂಬರ್ 17ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಬಲ್ಮಠ ವೃತ್ತದಲ್ಲಿರುವ ಕಲೆಕ್ಟರ್ಸ್ ಗೇಟ್ ನ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಿಗಧಿಯಾಗಿತ್ತು. ಕಾರಣಾಂತರಗಳಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ […]

ಪ್ರಶಸ್ತಿ ಪ್ರಧಾನ ಸಮಾರಂಭ ಮುಂದೂಡಿಕೆ Read More »

ಕರಾವಳಿ

ಸೆ. 17ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಇವರ ಸಹಯೋಗದಲ್ಲಿ ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

ಸೆ. 17ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ Read More »

ಕರಾವಳಿ

ಸಂವಿಧಾನವನ್ನು ಭಾರತದ ಪ್ರಜೆಗಳಾದ ನಾವು ಗೌರವಿಸುವುದು ನಮ್ಮ ಕರ್ತವ್ಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ನಮ್ಮ ದೇಶದ ಸಂವಿಧಾನವನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸಿ ಅದರ ಆಶಯದಂತೆ ನಡೆದುಕೊಂಡಾಗ ಮಾತ್ರ ಸದೃಢ ದೇಶ ನರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು. ಅವರು ಶುಕ್ರವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆದ ಸಂವಿಧಾನದ ಪೀಠಿಕೆಯ ಓದು ಕರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ

ಸಂವಿಧಾನವನ್ನು ಭಾರತದ ಪ್ರಜೆಗಳಾದ ನಾವು ಗೌರವಿಸುವುದು ನಮ್ಮ ಕರ್ತವ್ಯ- ಜಿಲ್ಲಾಧಿಕಾರಿ Read More »

ಕರಾವಳಿ

ಸೆ. 17ರಂದು ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರಾದ ಪುರ್ಷೊತ್ತಮ್ ರೂಪಾಲ ಅವರು ಸೆ.17ರ ಭಾನುವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ:- ಸೆ.16ರ ಶನಿವಾರ ರಾತ್ರಿ 8.50ಕ್ಕೆ ಮಂಗಳೂರಿಗೆ ಆಗಮಿಸುವರು. ಸೆ.17ರಂದು ಬೆಳಗ್ಗೆ 9.55ಕ್ಕೆ ನಗರದ ಟಿ.ಎಂ.ಎ.ಪೈ ಕಾನ್ವೆನ್ಷನ್ ಸೆಂಟರ್ ನಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4. 35ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 17ರಂದು ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರ ಪ್ರವಾಸ Read More »

ಕರಾವಳಿ

ಪ.ಜಾ, ಪ.ಪಂ. ಅಭ್ಯರ್ಥಿಗಳಿಂದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮಾರ್ಗಸೂಚಿಯಂತೆ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ಅರ್ಹ ಅಭ್ಯರ್ಥಿಗಳು ಸಿಸ್ಕೋ ಸರ್ಟಿಫೈಡ್ ನೆಟ್ವರ್ಕ್ ಅಸೋಸಿಯೇಟ್ (ಸಿ,ಸಿ,ಎನ್,ಎ) ಸಿಸ್ಕೋ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜಿರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಈಆರ್‍ಪಿ/ ಪ್ರೈಮ್ ಕೋರ್ಸುಗಳಲ್ಲಿ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಗರದ ಕದ್ರಿಹಿಲ್ಸ್‍ನಲ್ಲಿರುವ,

ಪ.ಜಾ, ಪ.ಪಂ. ಅಭ್ಯರ್ಥಿಗಳಿಂದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ.ಜಾ, ಪ.ಪಂ. ವಿದ್ಯಾರ್ಥಿಗಳಿಂದ ವಸತಿನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅಕ್ಟೋಬರ್ 11ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://shp.karnataka.gov.inಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿ ನಿಲಯಗಳಲ್ಲಿ

ಪ.ಜಾ, ಪ.ಪಂ. ವಿದ್ಯಾರ್ಥಿಗಳಿಂದ ವಸತಿನಿಲಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಲ್ಪಸಂಖ್ಯಾತ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಒಳಪಡುವ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆ.16ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://dom.karnataka.gov.in ವೆಬ್ ಸೈಟ್ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನ Read More »

ಕರಾವಳಿ

ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಕಾಳಜಿ ಕಾಯ್ದೆ- 2017ರ ಅಡಿಯಲ್ಲಿ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿ ಮತ್ತು ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ ಶನಿವಾರ ಬೆಳಿಗ್ಗೆ 9.30ಕ್ಕೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ

ನ್ಯಾಯಿಕ ದಂಡಾಧಿಕಾರಿ ಹಾಗೂ ಪೊಲೀಸ್ ಪಾತ್ರದ ಕುರಿತು ಕಾರ್ಯಗಾರ Read More »

ಕರಾವಳಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ -2023

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಇವರ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2023ನ್ನು ಇಂದು ಮಧ್ಯಾಹ್ನ 2.30ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ -2023 Read More »

ಕರಾವಳಿ

ನಾಳೆ(ಸೆ. 16) ಸಂವಾದ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪ್ರತಿ ತಿಂಗಳ 3ನೇ ಶನಿವಾರದಂದು ನಡೆಸಲಾಗುವುದು. ಆದ್ದರಿಂದ ಸಪ್ಟೆಂಬರ್ ತಿಂಗಳ ಸಂವಾದ ಕಾರ್ಯಕ್ರಮವು ಸೆ. 16ರ ಶನಿವಾರ ಬೆಳಿಗ್ಗೆ 10.30ರಿಂದ 1.30ರ ವರೆಗೆ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ(ಸೆ. 16) ಸಂವಾದ ಕಾರ್ಯಕ್ರಮ Read More »

ಕರಾವಳಿ
Scroll to Top