ಕರಾವಳಿ

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರದಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿಯೋರ್ವರು ಬೆಂಗಳೂರು ನಗರದ ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದರು. ಇದಕ್ಕೆ […]

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲದ ವ್ಯಕ್ತಿ ವಿಟ್ಲದಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 12. ಉಳ್ಳಾಲದ ವ್ಯಕ್ತಿಯೋರ್ವ ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಎಂದು ಗುರುತಿಸಲಾಗಿದೆ. ರವೀಂದ್ರ ಅವರು ಭಾನುವಾರದಂದು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆಗೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್

ಉಳ್ಳಾಲದ ವ್ಯಕ್ತಿ ವಿಟ್ಲದಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡೋಸಲ್ಪಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12. ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ) ಎಂದು ಗುರುತಿಸಲಾಗಿದೆ. ರಾಜೇಶ್ 2015ರ ಅ. 01ರಂದು ತನ್ನದೇ ಊರಿನ 19ರ ಹರೆಯದ ಎಂಡೋಸಲ್ಫಾನ್ ಪೀಡಿತೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭ ಅತ್ಯಾಚಾರವೆಸಗಿದ್ದರೆಂದು ಆರೋಪಿಸಿ

ಎಂಡೋಸಲ್ಪಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಸೆ.11. ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳದವರನ್ನು ನಿಸಾರ್ ಎಂದು ಗುರುತಿಸಲಾಗಿದೆ. ನಿಸಾರ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದು, ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ದಾಟುವ ವೇಳೆ ಆಟೋ ರಿಕ್ಷಾ ಢಿಕ್ಕಿ- ಪಾದಚಾರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 07. ರಸ್ತೆ ದಾಟುತ್ತಿದ್ದ ವೇಳೆ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಾಯಗೊಂಡ ಘಟನೆ ಬಿ.ಸಿ.ರೋಡಿನ ಕೈಕಂಬದಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡವರನ್ನು ಇರಾ ನಿವಾಸಿ ಅಬ್ದುಲ್‌ ರಹಿಮಾನ್‌ ಎಂದು ಗುರುತಿಸಲಾಗಿದೆ. ರಹಿಮಾನ್ ರವರು ತರಕಾರಿ ಖರೀದಿಸಿ ರಸ್ತೆ ದಾಟುತ್ತಿದ್ದ ವೇಳೆ ರಿಕ್ಷಾವೊಂದು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಈ ಕುರಿತು ಬಂಟ್ವಾಳ ಸಂಚಾರಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ದಾಟುವ ವೇಳೆ ಆಟೋ ರಿಕ್ಷಾ ಢಿಕ್ಕಿ- ಪಾದಚಾರಿಗೆ ಗಾಯ Read More »

ಕರಾವಳಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 07. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಪೆರಿಯಶಾಂತಿ- ಇಚ್ಲಂಪಾಡಿ ರಸ್ತೆಯ ನಡುಮನೆ ಎಂಬಲ್ಲಿ ಬುಧವಾರದಂದು ಮಧ್ಯಾಹ್ನ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿನ ನಡುವೆ ಇಚ್ಲಂಪಾಡಿ ಗ್ರಾಮದ ನಡುಮನೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಹೆಡ್‌ ಕಾನ್ಸ್ಟೇಬಲ್ ಕುಶಾಲಪ್ಪ ನಾಯ್ಕ, ಕಾನ್‌ಸ್ಟೇಬಲ್ ಪ್ರತಾಪ್‌ರವರು ಭೇಟಿ ನೀಡಿ ಪರಿಶೀಲನೆ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ಪಿಲ್ಯ ಫ್ಯಾಶನ್ ನಲ್ಲಿ ಇಂದಿನಿಂದ ಸ್ಪೆಷಲ್ ಆಫರ್ – ಯಶಸ್ವೀ 5ನೇ ವರ್ಷದ ಪ್ರಯುಕ್ತ ಪ್ರತೀ ಖರೀದಿಗೆ ವಿಶೇಷ ರಿಯಾಯಿತಿ

ಕಡಬ, ಆ.31. ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸುಸಜ್ಜಿತ ಹೆಸರಾಂತ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಷನ್‌’ನ ಯಶಸ್ವೀ ಐದನೇ ವರ್ಷದ ಪ್ರಯುಕ್ತ ಇಂದಿನಿಂದ ಸೆಪ್ಟಂಬರ್ 5 ರ ತನಕ ಸ್ಪೆಷಲ್ ಆಫರ್ ನಡೆಯಲಿದೆ. ಮಹಿಳೆಯರ 3 ಜೊತೆ ಕುರ್ತೀಸ್ 299/- 349/- 399/- 449/-499/- ಮಹಿಳೆಯರ 3ಜೊತೆ ಪ್ಯಾಂಟ್ 285/- 3ಜೊತೆ ನೈಟಿ 399/- 499/- 599/- ಮಕ್ಕಳ 3 ಜೊತೆ ಮಕ್ಕಳ ಕುರ್ತಿಸ್ 199/- 249/-299/- ಮಕ್ಕಳ ಕಾಟನ್ ಪ್ಲಾಝಾ 3ಜೊತೆಗೆ 255/- ಪುರುಷರ ಶರ್ಟ್

ಕಡಬ ಪಿಲ್ಯ ಫ್ಯಾಶನ್ ನಲ್ಲಿ ಇಂದಿನಿಂದ ಸ್ಪೆಷಲ್ ಆಫರ್ – ಯಶಸ್ವೀ 5ನೇ ವರ್ಷದ ಪ್ರಯುಕ್ತ ಪ್ರತೀ ಖರೀದಿಗೆ ವಿಶೇಷ ರಿಯಾಯಿತಿ Read More »

ಕರಾವಳಿ

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಆ. 30. ಶ್ರೀ ನಾರಾಯಣ ಗುರು ಮಂದಿರದ ಕಿಟಿಕಿಯ ಮರದ ಮೂರು ದಳಿಗಳನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಮಂದಿರದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಸುಮಾರು 15,000 ರೂ. ನಗದನ್ನು ಕಳವುಗೈದಿರುವ ಘಟನೆ ಮುದರಂಗಡಿ ಎಂಬಲ್ಲಿ ನಡೆದಿದೆ. ಮಂಗಳವಾರದಂದು ಬೆಳಗ್ಗೆ ಅರ್ಚಕ ಆನಂದ ಪೂಜಾರಿ ಮಂದಿರಕ್ಕೆ ಬಂದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಪಡುಬಿದ್ರಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಆ. 30. ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸೆ. 11ರಿಂದ 13ರ ವರೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ‘ಸೌಜನ್ಯಾ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಬಾಲಕೃಷ್ಣ ಡಿ.ಬಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಧರಣಿ ಸತ್ಯಾಗ್ರಹ ಸೆ. 11ರಂದು ಬೆಳಗ್ಗೆ 10ಕ್ಕೆ ಆರಂಭಗೊಂಡು ಮೂರು ದಿನಗಳ ಕಾಲ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಬಳಿಕ ಪ್ರಕರಣದ ಮರುತನಿಖೆ ನಡೆಸುವಂತೆ ಜಿಲ್ಲಾಧಿಕಾರಿ

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಗಾಯಗೊಂಡ ಆಟೋ ಚಾಲಕನನ್ನು ಮಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಸಾದಿಕ್ ತನ್ನ ಆಟೋ ರಿಕ್ಷಾದಲ್ಲಿ ಸುರಕ್ಷಾ ಅಧಿಕಾರಿಯೋರ್ವರನ್ನು ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬಂದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ, ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಯಾಣಿಕರೊಬ್ಬರು

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top