ಕರಾವಳಿ

ಕಡಬ: ಕಾಡು ಪ್ರಾಣಿಗಳ ಬೇಟೆ – ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕಾಡು ಪ್ರಾಣಿಗಳ ಬೇಟೆಯಾಡಿ ಕಾರಿನಲ್ಲಿ ತೆರಳುತ್ತಿದ್ದ ಮೂವರು ಕಡಬ ಪೋಲಿಸರ ಬಲೆಗೆ ಬಿದ್ದ ಘಟನೆ ಠಾಣಾ ವ್ಯಾಪ್ತಿಯ ಕುಂತೂರು ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಬಂಧಿತ ಆರೋಪಿಗಳನ್ನು ನೆಲ್ಯಾಡಿ ನಿವಾಸಿಗಳಾದ ಬಿನು, ದಿನೇಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಲ್ಯ ರಕ್ಷಿತಾರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಇನ್ನೋವಾ ಕಾರಿನಲ್ಲಿ ಬೆಳಗಿನ ಜಾವ ಮನೆಯ ಕಡೆ ತೆರಳುತ್ತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಕಡಬ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. […]

ಕಡಬ: ಕಾಡು ಪ್ರಾಣಿಗಳ ಬೇಟೆ – ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಚಂದ್ರಯಾನ-3ರ ನೇರಪ್ರಸಾರ ಶಾಲಾ- ಕಾಲೇಜುಗಳಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಇಡೀ ದೇಶವು ಕಾತುರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಕ್ಷಣವನ್ನು ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ಈ ಸಮಯದಲ್ಲಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ವ್ಯವಸ್ಥೆಯನ್ನು ಮಾಡುತ್ತಿದೆ. ಆ. 23ರ ಬುಧವಾರದಂದು ಸಂಜೆ 5.20ರಿಂದ 6.30ರ ವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ.

ಇಂದು ಚಂದ್ರಯಾನ-3ರ ನೇರಪ್ರಸಾರ ಶಾಲಾ- ಕಾಲೇಜುಗಳಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ಕರೆ Read More »

ಕರಾವಳಿ

ಯುವಜನತೆ ಕೌಶಲ್ಯ ಬಳಸಿಕೊಂಡು ಸ್ವ-ಉದ್ಯೋಗ ಮಾಡಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಯುವಜನರು ತಮ್ಮಲ್ಲಿರುವ ಕೌಶಲ್ಯಗಳನ್ನು ಬಳಸಿಕೊಂಡು ಸ್ವ-ಉದ್ಯೋಗ ಮಾಡಲು ಕಾಲೇಜು ಮಟ್ಟದಲ್ಲಿ ಉತ್ತೇಜನ ನೀಡಬೇಕೆಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ. ರಾಮೇ ಗೌಡ ಅಭಿಪ್ರಾಯಪಟ್ಟರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಎಸ್‍ಎಪಿ (ಸ್ಯಾಪ್), ಯುಎನ್‍ಡಿಪಿ-ಕೋಡ್ ಉನ್ನತಿ ಮತ್ತು ಸೆಂವೆಂತ್ ಸೆನ್ಸ್ ಟ್ಯಾಲೆಂಟ್ ಸೆಲ್ಯುಷನ್ಸ್ ವತಿಯಿಂದ ನಗರದ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಪ್ರಾಜೆಕ್ಟ್ ಕೋಡ್ ಉನ್ನತಿ ಅಧ್ಯಾಪಕರ ಉದ್ಯಮಶೀಲತಾ

ಯುವಜನತೆ ಕೌಶಲ್ಯ ಬಳಸಿಕೊಂಡು ಸ್ವ-ಉದ್ಯೋಗ ಮಾಡಲು ಕರೆ Read More »

ಕರಾವಳಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಮಂಗಳವಾರದಂದು ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಕುರಿತು, ಆಯುಕ್ತರ ಕಛೇರಿಗೆ ಹೆಚ್ಚುವರಿ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಕವಾಯತು ಹಾಜರಾತಿ

ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ

ಮಂಗಳೂರು: ನಾಳೆ(ಆ. 23) ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವವರಿಗೆ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗುತ್ತಿದೆ. ಈ ಕಿರು ಸಾಲ ಸೌಲಭ್ಯವು ಪ್ರಥಮ ಹಂತದಲ್ಲಿ 10 ಸಾವಿರ ರೂಪಾಯಿ, ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯ ಮತ್ತು ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ 20 ಸಾವಿರ ರೂಪಾಯಿ ಹಾಗೂ ತೃತೀಯ

ಮಂಗಳೂರು: ನಾಳೆ(ಆ. 23) ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ Read More »

ಕರಾವಳಿ

ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. 2022ರ ಜನವರಿ 1 ರಿಂದ ಡಿಸೆಂಬರ್ 31ರ ವರೆಗೆ   ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸೆ. 04. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಕಚೇರಿಯಲ್ಲಿ ಸಲ್ಲಿಸಬೇಕು.

ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಜಿಮ್ ಸ್ಥಾಪನೆಯ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು 2023ರ ಸೆ. 04 ರೊಳಗೆ ಅರ್ಜಿ ಭರ್ತಿ ಮಾಡಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 0824-2451264 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಡಿ.ಎಡ್, ಬಿ.ಎಡ್ ನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಡಿ.ಎಡ್ ಹಾಗೂ ಬಿ.ಎಡ್  ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) 25,000 ರೂ.ಗಳ ಪ್ರೋತ್ಸಾಹಧನ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು  ಆನ್‍ಲೈನ್ ಪೋರ್ಟಲ್ https://sevasindhuservices.karnataka.gov.in/ ನ  ಮೂಲಕ ಸೆ. 21 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಒಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಇಲ್ಲಿ

ಡಿ.ಎಡ್, ಬಿ.ಎಡ್ ನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮಕ್ಕಳ ಸುರಕ್ಷಾ ನೀತಿ ಕಡ್ಡಾಯ ಮಾಡಲು ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರು ಸೋಮವಾರದಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡಲು ಅರಿವು ಮೂಡಿಸುವ ಹಾಗೂ 18 ವರ್ಷದೊಳಗಿನ ಡ್ರಗ್ಸ್ ವ್ಯಸನಕ್ಕೆ ಒಳಗಾದ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಸೂಚನೆಗಳನ್ನು ನೀಡಿದರು. ಪೋಕ್ಸೋ ಪ್ರಕರಣಗಳು,

ಮಕ್ಕಳ ಸುರಕ್ಷಾ ನೀತಿ ಕಡ್ಡಾಯ ಮಾಡಲು ಸಲಹೆ Read More »

ಕರಾವಳಿ

ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ನಿವೇಶನ ಹಾಗೂ ಕೃಷಿಗಾಗಿ ಅರ್ಹರಿಗೆ ಡಿಸಿ ಮನ್ನಾ ಜಮೀನು ನೀಡಲು ಜಿಲ್ಲೆಯ ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನು ಎಂದು ಘೋಷಿಸಲಾಗಿರುವ ಸ್ಥಳಗಳ ಪಟ್ಟಿಯನ್ನು ಒದಗಿಸುವಂತೆ ಸಂಬಂಧಿಸಿದ ತಾಲೂಕುಗಳ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿಸಿ ಮನ್ನಾ ಜಮೀನಿಗೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಡಿಸಿ ಮನ್ನಾ

ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top