ಕರಾವಳಿ

ಉದ್ಯೋಗಕ್ಕಾಗಿ ಬಂದಿದ್ದ ಯುವತಿ ನಾಪತ್ತೆ- ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 16. ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ಯುವತಿಯನ್ನು ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ಎಂದು ಗುರುತಿಸಲಾಗಿದೆ. ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದ ಸೋನಿಯಾ, ಬೆಂದೂರಿನ ಅಪಾರ್ಟ್‌ಮೆಂಟ್‌ ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು […]

ಉದ್ಯೋಗಕ್ಕಾಗಿ ಬಂದಿದ್ದ ಯುವತಿ ನಾಪತ್ತೆ- ತಂದೆಯಿಂದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »

ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್ Read More »

ಕರಾವಳಿ

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ. 15. ಕಾರೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡು, ಕಾರು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಮಂಗಳವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಎಂಬಲ್ಲಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದರು.

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅನಾರೋಗ್ಯದಿಂದ ಯುವಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ. 15. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ಗ್ರಾಮದ ಪಿಜಕ್ಕಳ ಎಂಬಲ್ಲಿಂದ ವರದಿಯಾಗಿದೆ. ಮೃತರನ್ನು ಕಡಬ ತಾಲೂಕಿನ ಪಿಜಕ್ಕಳ ಪೊಯ್ಯೆತ್ತಡ್ಡ ನಿವಾಸಿ ಸುಂದರ ಗೌಡರವರ ಪುತ್ರ ರಾಜೇಶ್ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ರಾಜೇಶ್, ಅಲ್ಲಿಯೇ ಅನಾರೋಗ್ಯಕ್ಕೆ ಒಳಗಾಗಿದ್ದರು. ಮನೆಯವರು ಅಲ್ಲಿಂದ ಕರೆತಂದು ಆ.13ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಆ.14ರಂದು ಸಂಜೆ ನಿಧನರಾಗಿದ್ದಾರೆ ಎನ್ನಲಾಗಿದೆ. ಮೃತರು ತಂದೆ

ಕಡಬ: ಅನಾರೋಗ್ಯದಿಂದ ಯುವಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂದಿನಿಂದ ಆ. 16ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಮೆಗಾ ಆಫರ್ – ಫಿಶ್ ಐಟಂಗಳಿಗೆ ಎರಡು ದಿನಗಳ ಕಾಲ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಆ. 15) ಬುಧವಾರದವರೆಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸ್ಪೆಷಲ್ ಆಫರ್ ನಡೆಯಲಿದೆ. ಸಿಗಡಿ ಬಿರಿಯಾನಿ, ಕಿಂಗ್ ಫಿಶ್ ಬಿರಿಯಾನಿ, ಮಾಂಜಿ ತವಾ ಫ್ರೈ, ಡಿಸ್ಕೋ ತವಾ ಫ್ರೈ, ಅಂಜಲ್ ತವಾ ಫ್ರೈ, ಮುರು ತವಾ ಫ್ರೈ, ಬಂಗುಡೆ ತವಾ ಫ್ರೈ ಹಾಗೂ ಬಂಗುಡ ಮಸಾಲಾ ಫ್ರೈ ಸೇರಿದಂತೆ ಹಲವು ಮೀನಿನ ಖಾದ್ಯಗಳಿಗೆ ವಿಶೇಷ

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂದಿನಿಂದ ಆ. 16ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಮೆಗಾ ಆಫರ್ – ಫಿಶ್ ಐಟಂಗಳಿಗೆ ಎರಡು ದಿನಗಳ ಕಾಲ ವಿಶೇಷ ರಿಯಾಯಿತಿ Read More »

ಅಡುಗೆ, ಕರಾವಳಿ

ಡಿಸಿ, ಎಸಿ, ತಹಶೀಲ್ದಾರರ ನ್ಯಾಯಾಲಯದ ಪ್ರಕರಣಗಳ ಶೀಘ್ರ ಇತ್ಯರ್ಥ – ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 15. ಡಿಸಿ, ಎ.ಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಇತ್ಯರ್ಥಕ್ಕೆ ವಾರದಲ್ಲಿ ದಿನವೊಂದನ್ನು ನಿಗದಿಪಡಿಸಿಕೊಂಡು ಪ್ರಕರಣಗಳ ವಿಚಾರಣೆ ನಡೆಸಬೇಕು, ಅಂದು ಯಾವುದೇ ಕಾರಣಕ್ಕೂ ವಿಚಾರಣೆಯನ್ನು ಮುಂದೂಡಲೇಬಾರದು. ವಿಚಾರಣೆ ನಡೆಸಿ ಇತ್ಯರ್ಥಪಡಿಸುವ ಮೂಲಕ ಸಾರ್ವಜನಿಕರಿಗೆ ಆಡಳಿತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿಯವರ

ಡಿಸಿ, ಎಸಿ, ತಹಶೀಲ್ದಾರರ ನ್ಯಾಯಾಲಯದ ಪ್ರಕರಣಗಳ ಶೀಘ್ರ ಇತ್ಯರ್ಥ – ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ Read More »

ಕರಾವಳಿ

ಗಾಂಜಾ ಸೇವನೆ- ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 15. ಗಾಂಜಾ ಸೇವಿಸಿ ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಸಜಿಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಶಾಲಾ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ

ಗಾಂಜಾ ಸೇವನೆ- ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 14. ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಏಕಾಏಕಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಎಂಬವರ ಪುತ್ರಿ ಸುಮಾ ಎಂದು ಗುರುತಿಸಲಾಗಿದೆ. ಸುಮಾ ಮಂಗಳೂರಿನ ಕಾಲೇಜೊಂದರಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆಗಸ್ಟ್ 9ರಂದು ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಆ. 11ರಂದು ಅನಾರೋಗ್ಯ

ಹೃದಯಾಘಾತ- ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಮಾರಾಟಕ್ಕೆ ಯತ್ನ- ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 14. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಬಂಧಿತನನ್ನು ಮೂಲತಃ ಕಕ್ಕಿಂಜೆ ನಿವಾಸಿಯಾಗಿರುವ,‌ ಪ್ರಸ್ತುತ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಲಕ್ಷ್ಮಣಕಟ್ಟೆ ಬಳಿಯ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿ ನೌಫಲ್ ಪೊಲೀಸರನ್ನು ಕಂಡು ಅನುಮಾನಾಸ್ಪದವಾಗಿ ವರ್ತಿಸಿದ್ದು, ಈ ಬಗ್ಗೆ ಸಂದೇಹಗೊಂಡ ಪೊಲೀಸರು ಆತನ ಬಳಿ ವಿಚಾರಣೆಗೆಂದು ಬಂದಾಗ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ಆತನನ್ನು

ಗಾಂಜಾ ಮಾರಾಟಕ್ಕೆ ಯತ್ನ- ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top