ಕರಾವಳಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಇಲ್ಲಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ನೇರ ಪ್ರವೇಶಾತಿ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9880591219, 7975621917 ಕರೆ ಮಾಡಿ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಆ. 26ರಂದು ಗಡಿನಾಡ ಕನ್ನಡ ಉತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದೇ ಮಾಹೆಯ 26ರಂದು ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮ ತಲಪಾಡಿಯ ವಿಶ್ವಾಸ ಸಭಾಂಗಣದಲ್ಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಇದೇ ವೇಳೆ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಹಲವು ಸಂಘಸಂಸ್ಥೆಗಳ ಪದಾಧಿಕಾರಿಗಳು, ಕವಿಗಳು ಸಾಹಿತ್ಯ

ಆ. 26ರಂದು ಗಡಿನಾಡ ಕನ್ನಡ ಉತ್ಸವ Read More »

ಕರಾವಳಿ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಉತ್ತಮ ಆರೋಗ್ಯದಿಂದ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ, ಈ ದಿಸೆಯಲ್ಲಿ ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ನೀಡಲಾಗುವ ಲಸಿಕೆಗಳನ್ನು ಪೋಷಕರು ತಮ್ಮ ಮಕ್ಕಳಿಗೆ ಕೊಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕರೆ ನೀಡಿದರು. ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸುರತ್ಕಲ್‍ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಗೆ ಚಾಲನೆ – ಅಗತ್ಯ ಲಸಿಕೆ ಕೊಡಿಸಲು ಜಿಲ್ಲಾಧಿಕಾರಿ ಕರೆ Read More »

ಕರಾವಳಿ

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಡೆಂಗ್ಯು ತಡೆಗಟ್ಟಲು ಅದರ ಬಗ್ಗೆ ವ್ಯಾಪಕ ವಾದ ಮಾಹಿತಿ ನೀಡುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ತಿಳಿಸಿದರು ಎಂದು ವರದಿ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ರು ಕುಟುಂಬದ ಕಲ್ಯಾಣ ಇಲಾಖೆ ವತಿಯಿಂದ ಪತ್ರಿಕಾ ಭವನದ ಮುಂಭಾಗದಲ್ಲಿ ಡೆಂಗ್ಯು ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆ ಯಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ ನೀಡಿ

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ Read More »

ಕರಾವಳಿ

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು – ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಧರ್ಮಸ್ಥಳದ ಸೌಜನ್ಯ ಹತ್ಯೆ ಬಗ್ಗೆ ಮಾತನಾಡಿದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ‘ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು. ಪ್ರಕರಣದ ರಹಸ್ಯವನ್ನ ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು’ ಎಂಬ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಖಾಕಿಯಾಗಲೀ, ಕಾವಿಯಾಗಲೀ ಅವರನ್ನೂ ತನಿಖೆ ಮಾಡುವ ಶಕ್ತಿ ನಮ್ಮಲ್ಲಿ ಇದೆ. ಸಮಯ ಬಂದಾಗ ಮಾತನಾಡುತ್ತೇನೆ. ಆಗ ನನ್ನನ್ನೂ ಸಾಯಿಸಿಬಿಡಬಹುದು. ಆದರೆ ಸಾಯುವ ಮೊದಲು ನ್ಯಾಯ ಕೊಡಿಸಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.  

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು – ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ Read More »

ಕರಾವಳಿ

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ವರದಿಯಾಗಿದೆ. ಆರೋಪಿಯು ಕೆಲವು ಸಮಯಗಳಿಂದ ದೂರದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಕಿಟಕಿಯ ಮೂಲಕ ಮೈಗೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ನವದೆಹಲಿ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು ಎನ್ನಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೂ.19.32 ಕೋಟಿ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ Read More »

ಕರಾವಳಿ

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.07. ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ ಪೆರಿಯಡ್ಕದ ನೆಡ್ಚಿಲ್ ಬಳಿ ನಡೆದಿದೆ. ಕೇರಳ ಮೂಲದ ಮೂವರು ಇಲ್ಲಿ ಬಾಡಿಗೆ ರೂಂನಲ್ಲಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ನಡೆಸುತ್ತಿದ್ದರು. ಇವರು ತಮ್ಮ ಬಾಡಿಗೆ ಕೊಠಡಿಯಲ್ಲಿ ಪರಸ್ಪರ ಜಗಳವಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ಸೇರಿ ಮರದ ತುಂಡಿನಿಂದ ಮತ್ತೋರ್ವನ ತಲೆಗೆ ಹೊಡೆದಿದ್ದಲ್ಲದೆ, ತೀವ್ರ ಗಾಯಗೊಂಡು ಬಿದ್ದಿದ್ದ ಈತನನ್ನು ಕೊಠಡಿಯ ಹೊರಗೆ ಹಾಕಿ, ಬಾಗಿಲು ಹಾಕಿ ಕುಳಿತ್ತಿದ್ದರು ಎನ್ನಲಾಗಿದೆ.

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ ಗಳ ತೆರವಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..! Read More »

ಕರಾವಳಿ

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top