ಕರಾವಳಿ

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಆ.05. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಸತೀಶ್‌ ಗುಪ್ತ ಯಾನೆ ಮಹೋರಿ (33)ಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವೃತ್ತ ನಿರೀಕ್ಷಕ ರವಿ ಬಿ.ಎಸ್‌.ಅವರ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ವಾಮಂಜೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.  

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ YES Bankನಲ್ಲಿ ಭರ್ಜರಿ ಆಫರ್ – ಇಂದೇ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಆ.05. YES Bank Recruitment 2023 ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ (Yes Bank) ಅನೇಕ ಹುದ್ದೆಗಳು ಖಾಲಿ ಇದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ರಿಲೇಶನ್ ಶಿಪ್ ಮ್ಯಾನೇಜರ್, ಪರ್ಸನಲ್ ಬ್ಯಾಂಕರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಆಗಸ್ಟ್ 31, 2023 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ

ಉದ್ಯೋಗಾಕಾಂಕ್ಷಿಗಳಿಗೆ YES Bankನಲ್ಲಿ ಭರ್ಜರಿ ಆಫರ್ – ಇಂದೇ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ –  ಆ.08 ರಂದು ದಲಿತ್ ಸಂಘಟನೆಯಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.05. ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷದ ಎಸ್ ಸಿ, ಎಸ್ ಟಿ ಘಟಕ ಮತ್ತು ಕಾರ್ಮಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಆ.08 ರಂದು ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು. ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿಟ್ಲ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ನಾಡಕಚೇರಿ

ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ –  ಆ.08 ರಂದು ದಲಿತ್ ಸಂಘಟನೆಯಿಂದ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆ- 10 ಲೋಡ್ ಮರಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 05. ಅಕ್ರಮವಾಗಿ ಮರಳು ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ದಾಳಿ ನಡೆಸಿದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡವು 10 ಲೋಡ್ ಮರಳು ವಶಕ್ಕೆ ಪಡೆದುಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಡಿ ಸಮೀಪ ನಡೆದಿದೆ. ಅಕ್ರಮ ಮರಳು ದಾಸ್ತಾನು ಇರಿಸಿದ ಆರೋಪದಡಿಯಲ್ಲಿ ಕೋಡಿ ನಿವಾಸಿಗಳಾದ ಉಮ್ಮರ್, ನೌಫಾಲ್, ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ತಡರಾತ್ರಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಅಕ್ರಮ ಮರಳುಗಾರಿಕೆ- 10 ಲೋಡ್ ಮರಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ – ಸೌಜನ್ಯ ತಾಯಿಯಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.05. ಅಪರಿಚಿತ ವ್ಯಕ್ತಿಗಳಿಂದ ಮಾನಹಾನಿಗೆ ಯತ್ನ ಮತ್ತು ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸೌಜನ್ಯ ತಾಯಿ ಕುಸುಮಾವತಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ. ಸೌಜನ್ಯಾಗೆ 11 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದ್ದು, ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೇನೆ ಎಂದು

ಬೆಳ್ತಂಗಡಿ: ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ – ಸೌಜನ್ಯ ತಾಯಿಯಿಂದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಮಾರಾಟ ಯತ್ನ – 2 ಕೆ.ಜಿ ಗಾಂಜಾ ಸಹಿತ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ದ್ವಿಚಕ್ರ ವಾಹನದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವು ಪಡೆದ ನಗರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಕೋಡಿಕಲ್ ಮುಸ್ತಫಾ ಕಂಪೌಂಡ್ ನಿವಾಸಿ ಮೊಹಮ್ಮದ್ ಅಝೀಝ್ ಯಾನೆ ಅಜೀಜ್ (40)  ಎಂದು ಗುರುತಿಸಲಾಗಿದೆ. ಈತನಿಂದ  50 ಸಾವಿರ ಮೌಲ್ಯದ ಎರಡು ಕಿಲೋ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು ಒಟ್ಟು 1.05 ಲಕ್ಷ

ಮಾದಕ ವಸ್ತು ಮಾರಾಟ ಯತ್ನ – 2 ಕೆ.ಜಿ ಗಾಂಜಾ ಸಹಿತ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪ.ಜಾತಿ, ಪ.ಪಂಗಡದ ರೈತರಿಗೆ ಟಾರ್ಪಲಿನ್ ಮತ್ತು ಸೌರದೀಪಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಪುತ್ತೂರಿನಲ್ಲಿರುವ ಗೇರು, ನಿರ್ದೇಶನಾಲಯವು ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಟಾರ್ಪಲಿನ್ ಮತ್ತು ಸೌರದೀಪಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಹರು ರೈತರು ಸೂಕ್ತ ದಾಖಲಾತಿಗಳೊಂದಿಗೆ ಆ.15ರೊಳಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಕೃಷಿ ವಿಜ್ಞಾನ ಕೇಂದ್ರದಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ, ಮೀನುಗಾರಿಕಾ ಕಾಲೇಜು

ಪ.ಜಾತಿ, ಪ.ಪಂಗಡದ ರೈತರಿಗೆ ಟಾರ್ಪಲಿನ್ ಮತ್ತು ಸೌರದೀಪಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಆ. 09ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಇಲ್ಲಿನ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಆ. 09ರ ಬುಧವಾರದಂದು ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್

ಆ. 09ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ

ಇಂದು(ಆ. 05) ಬಂಟ್ವಾಳ ತಾ.ಪಂ. ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಬಂಟ್ವಾಳ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆ ಮತ್ತು ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಶನಿವಾರದಂದು ಬೆಳಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್ ವೈ ಸಭಾಂಗಣದಲ್ಲಿ ನಡೆಯಲಿದೆ. ಬಂಟ್ವಾಳ ತಾಲೂಕು ಪಂಚಾಯತ್‍ನ ಆಡಳಿತ ಅಧಿಕಾರಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು(ಆ. 05) ಬಂಟ್ವಾಳ ತಾ.ಪಂ. ಸಭೆ Read More »

ಕರಾವಳಿ

ಮೃತದೇಹವನ್ನು ಪಡೆಯಲು ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಇಲ್ಲಿನ ವೆನ್‍ಲಾಕ್ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ವಾರಸುದಾರಿಲ್ಲದೇ ವಿಲೇವಾರಿಯಾಗದ 2 ಮೃತದೇಹಗಳಿದ್ದು, ಈ ಮೃತದೇಹದ ವಾರಸುದಾರರು ಯಾರಾದರೂ ಇದ್ದಲ್ಲಿ ಗುರುತು ಚೀಟಿಯನ್ನು ಕಚೇರಿಗೆ ಸಲ್ಲಿಸಿ 7 ದಿನಗಳೊಳಗೆ ಮೃತ ದೇಹಗಳನ್ನು ಪಡೆಯಬಹುದೆಂದು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತದೇಹವನ್ನು ಪಡೆಯಲು ಕೋರಿಕೆ Read More »

ಕರಾವಳಿ
Scroll to Top