ಕರಾವಳಿ

ಮೃತದೇಹವನ್ನು ಪಡೆಯಲು ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಇಲ್ಲಿನ ವೆನ್‍ಲಾಕ್ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ವಾರಸುದಾರಿಲ್ಲದೇ ವಿಲೇವಾರಿಯಾಗದ 2 ಮೃತದೇಹಗಳಿದ್ದು, ಈ ಮೃತದೇಹದ ವಾರಸುದಾರರು ಯಾರಾದರೂ ಇದ್ದಲ್ಲಿ ಗುರುತು ಚೀಟಿಯನ್ನು ಕಚೇರಿಗೆ ಸಲ್ಲಿಸಿ 7 ದಿನಗಳೊಳಗೆ ಮೃತ ದೇಹಗಳನ್ನು ಪಡೆಯಬಹುದೆಂದು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತದೇಹವನ್ನು ಪಡೆಯಲು ಕೋರಿಕೆ Read More »

ಕರಾವಳಿ

ಮೊಗೇರ್ ಜಾತಿಯನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸುವ ಹಿನ್ನೆಲೆ – ಆಕ್ಷೇಪಣೆಗಳಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಮೊಗೇರ್ ಜಾತಿಯನ್ನು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸುವ ಹಿನ್ನೆಲೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸರ್ಕಾರದ ಆದೇಶ ಸಂಖ್ಯೆ: ಸಕಇ 225 ಬಿಸಿಎ 2000, ದಿನಾಂಕ: 30-03-2002 ರ ಪ್ರವರ್ಗ-1 ಅನುಕ್ರಮ ಸಂಖ್ಯೆ 6 (ae)ರಲ್ಲಿ ಮೊಗೇರ್ (Moger) ಜಾತಿಯನ್ನು ಕೈಬಿಡುವ ಬಗ್ಗೆ ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ ಆಕ್ಷೇಪಣೆ/ತಕರಾರುಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ 10 ದಿನಗಳೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ

ಮೊಗೇರ್ ಜಾತಿಯನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸುವ ಹಿನ್ನೆಲೆ – ಆಕ್ಷೇಪಣೆಗಳಿಗೆ ಆಹ್ವಾನ Read More »

ಕರಾವಳಿ

ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಮಿಲಿಟರಿ ಪಿಂಚಣಿ ಇಲ್ಲದ ರಾಜ್ಯದ ಮಾಜಿ ಸೈನಿಕರ ಹಾಗೂ ರಾಜ್ಯದಲ್ಲಿ ನೆಲೆಸಿರುವ ಪಿಂಚಣಿ ಪಡೆಯುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆಓಸಿ, ಪ್ರೊಫೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಕಚೇರಿಯಿಂದ ಅರ್ಜಿ ಪಡೆದು, 2023ರ ಅಕ್ಟೋಬರ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ

ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ. ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04.  ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳಾರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ಉಜಿರೆಯಲ್ಲಿ ನಡೆಯಿತು. ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆಯ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆಯು, ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರ ಜೊತೆ ಶಿಸ್ತು ಬದ್ಧವಾಗಿ ಸಾಗಿಬಂದಿತ್ತು. ಎಲ್ಲರ ಕೈಯಲ್ಲೂ ಕ್ಷೇತ್ರದ ಮತ್ತು

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ Read More »

ಕರಾವಳಿ

ಬೆಳ್ಳಾರೆ ಝಕರಿಯ್ಯ ಜುಮಾ ಮಸೀದಿ ಆಡಳಿತ ಮಂಡಳಿಗೆ ಸೆ. 09ರಂದು ಚುನಾವಣೆ – ನಾಮಪತ್ರ ಸಲ್ಲಿಕೆಗೆ ಆ. 17ರಂದು ಲಾಸ್ಟ್ ಡೇಟ್..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 04. ಇಲ್ಲಿನ ಝಕರಿಯ್ಯ ಮಸೀದಿಯ ಆಡಳಿತ ಮಂಡಳಿಯಲ್ಲಿ ವಿವಾದವಿದ್ದ ಕಾರಣ ಸುಮಾರು 3 ವರ್ಷಗಳಿಂದ ಮಸೀದಿಗೆ ಆಡಳಿತಾಧಿಕಾರಿಯ ನೇಮಕ ಮಾಡಲಾಗಿತ್ತು. ಇದೀಗ ವಕ್ಫ್ ಮಂಡಳಿಯು ಮಸೀದಿಯ ಆಡಳಿತ ಮಂಡಳಿ ರಚನೆಗೆ ಚುನಾವಣೆಯನ್ನು ಘೋಷಿಸಿದ್ದು, ಸೆ. 09 ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವವರು ಆ. 08 ರಿಂದ ಆ.17 ರವರೆಗೆ ಸಾರ್ವತ್ರಿಕ ರಜೆ ಹೊರತುಪಡಿಸಿ ಉಳಿದ ದಿನದಲ್ಲಿ ದ.ಕ.ಜಿಲ್ಲಾ ವಕ್ಫ್ ಕಚೇರಿ ಮಂಗಳೂರು ಇಲ್ಲಿ ನಾಮಪತ್ರ ಸಲ್ಲಿಸಬಹುದು. ನಾಮಪತ್ರ

ಬೆಳ್ಳಾರೆ ಝಕರಿಯ್ಯ ಜುಮಾ ಮಸೀದಿ ಆಡಳಿತ ಮಂಡಳಿಗೆ ಸೆ. 09ರಂದು ಚುನಾವಣೆ – ನಾಮಪತ್ರ ಸಲ್ಲಿಕೆಗೆ ಆ. 17ರಂದು ಲಾಸ್ಟ್ ಡೇಟ್..! Read More »

ಕರಾವಳಿ

ಮಳೆಯ ರಜೆ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್ – ಆದೇಶ ಹಿಂಪಡೆದ ಶಿಕ್ಷಣಾಧಿಕಾರಿ ಕಛೇರಿ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 04. ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಕಾರಣ ವಿದ್ಯಾರ್ಥಿಗಳಿಗೆ ಮುಂಜಾಗೃತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ರಜಾದಿನಗಳನ್ನು ಸರಿದೂಗಿಸಲು ಶನಿವಾರದಂದು ಮಧ್ಯಾಹ್ನದ ಬಳಿಕವೂ ತರಗತಿ ನಡೆಸಿ ಪಾಠಗಳನ್ನು ಸರಿದೂಗಿಸಲು ಶಿಕ್ಷಣ ಲಾಖೆ ನಿರ್ಧರಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವವಿರುವುದರಿಂದ ಮಳೆ ಸಂದರ್ಭ ನೀಡಿರುವ ರಜೆಯನ್ನು ಸರಿದೂಗಿಸುವ ಸಲುವಾಗಿ ಮುಂದಿನ ಜಿಲ್ಲಾಮಟ್ಟದ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಆಗಸ್ಟ್ 05ರಿಂದ ತರಗತಿ ನಡೆಸುವಂತೆ ಶಿಕ್ಷಣ

ಮಳೆಯ ರಜೆ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್ – ಆದೇಶ ಹಿಂಪಡೆದ ಶಿಕ್ಷಣಾಧಿಕಾರಿ ಕಛೇರಿ Read More »

ಕರಾವಳಿ

ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ- ತರಗತಿ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್

(ನ್ಯೂಸ್ ಕಡಬ) newskadaba.com  ಸುಳ್ಯ, ಆ. 04. ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಕಾರಣ ವಿದ್ಯಾರ್ಥಿಗಳಿಗೆ ಮುಂಜಾಗೃತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ರಜಾದಿನಗಳನ್ನು ಸರಿದೂಗಿಸಲು ಶನಿವಾರದಂದು ಮಧ್ಯಾಹ್ನದ ಬಳಿಕವೂ ತರಗತಿ ನಡೆಸಿ ಪಾಠಗಳನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಒಂದು ದಿನದ ರಜೆಗೆ ಎರಡು ಶನಿವಾರಗಳಂದು ತರಗತಿ ನಡೆಸಿ ಸರಿದೂಗಿಸಲು ಇಲಾಖೆ ಸೂಚಿಸಿದೆ. ಇದಕ್ಕೆ ಸಂಬಂಧಿಸಿ ವೇಳಾಪಟ್ಟಿಯನ್ನು ರಚಿಸಲಾಗಿದ್ದು, ವೇಳಾಪಟ್ಟಿ ನವೆಂಬರ್ 04ರ ವರೆಗೆ ಅನ್ವಯವಾಗಲಿದೆ.

ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ- ತರಗತಿ ಸರಿದೂಗಿಸಲು ಶನಿವಾರದಂದು ಫುಲ್ ಕ್ಲಾಸ್ Read More »

ಕರಾವಳಿ

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಪಲ್ಟಿ – 9 ಮಂದಿ ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಬೈಂದೂರು, ಆ. 04. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೃಹತ್ ಅಲೆಗೆ ಸಿಲುಕಿದ ದೋಣಿಯೊಂದು ಪಲ್ಟಿಯಾದ ಘಟನೆ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರದಂದು ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲೀಕ ಎಂಬವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಕೊಡೇರಿ ಸಮುದ್ರ ತೀರದ ಸುಮಾರು 5 ನಾಟಿಕಲ್ ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ತಕ್ಷಣ ಇತರೆ ದೋಣಿಗಳ ಸಹಾಯದಿಂದ

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಪಲ್ಟಿ – 9 ಮಂದಿ ಮೀನುಗಾರರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಮಬದ್ಧ ಜೀವನಶೈಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ – ಪ್ರಾಂಶುಪಾಲ ದಾಮೋದರ ಕಣಜಾಲು..!

(ನ್ಯೂಸ್ ಕಡಬ) newskadaba.com ಅರಂತೋಡು, ಆ. 04. ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ|| ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಸಂಚಾಲಕರಾದ ರಾಷ್ಟ್ರ ಪ್ರಶಸ್ತಿ ಪುರಸ್ಕತ ಶಿಕ್ಷಕರಾದ  ಶ್ರೀ ಕೆ. ಆರ್ ಗಂಗಾಧರ್ ಮಾತನಾಡಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರೊಂದಿಗೆ, ಚಲನಾಶೀಲರಾಗಿರಬೇಕು.

ಕ್ರಮಬದ್ಧ ಜೀವನಶೈಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ – ಪ್ರಾಂಶುಪಾಲ ದಾಮೋದರ ಕಣಜಾಲು..! Read More »

ಕರಾವಳಿ
Scroll to Top