ಕರಾವಳಿ

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 03. ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದ ಸಂದೀಪ್ ಜೈನ್ ಅವರು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು. ಆದರೆ, ಜು.31 […]

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 03. ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಭಾಷನಗರದ ಸುಶಾಂತ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯ ಮುಗಿಸಿದ್ದ ಸುಶಾಂತ್ ಬಳಿಕ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆತನನ್ನು ಸೇರಿಸಿದ್ದರು. ಈ ವೇಳೆ ರೂ. 500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಇಚ್ಲಂಪಾಡಿ: ಕಾಡಾನೆ ದಾಳಿ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡರ ಭೇಟಿ; ಪರಿಶೀಲನೆ

(ನ್ಯೂಸ್ ಕಡಬ)newskadaba.com  ನೆಲ್ಯಾಡಿ, ಆ.03. ಕೆಲ ದಿನದ ಹಿಂದೆ ಆನೆ ದಾಳಿಯಿಂದ ಹಾನಿಗೊಂಡ ಇಚ್ಲಂಪಾಡಿಯ ಗುಂಡಿಕಂಡ, ಬಿಜೇರು, ನಡುಮನೆ ಕ್ರಾಸ್ ಪ್ರದೇಶಕ್ಕೆ ಕೆಪಿಸಿಸಿ ಸಂಯೋಜಕ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರ ನಿಯೋಗವೊಂದು ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಕಾಡಾನೆ ದಾಳಿಯಿಂದ ಆಗಿರುವ ನಷ್ಟದ ಕುರಿತಂತೆ  ವಲಯಾರಣ್ಯಧಿಕಾರಿಯವರಿಂದ ಮಾಹಿತಿ ಪಡೆದುಕೊಂಡ ಜಿ.ಕೃಷ್ಣಪ್ಪ, ಪರಿಹಾರ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.  

ಇಚ್ಲಂಪಾಡಿ: ಕಾಡಾನೆ ದಾಳಿ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡರ ಭೇಟಿ; ಪರಿಶೀಲನೆ Read More »

ಕರಾವಳಿ

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 03. ಪತಿಯೋರ್ವ ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿರುವ ಕುರಿತು ತಾಲೂಕಿನ ಅಜ್ಜಾವರ ಗ್ರಾಮದಿಂದ ವರದಿಯಾಗಿದೆ. ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ ನವಾಝ್ ಎಂಬಾತ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಇವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಈ ಕುರಿತು ಪತ್ನಿ, ಪತಿಯು ತನಗೆ ಕಿರುಕುಳ ನೀಡುವುದಲ್ಲದೇ, ಕೊಲೆಗೆ ಯತ್ನಿಸಿದ್ದಾರೆಂದು ಗಂಡನ ವಿರುದ್ಧ ಮಹಿಳಾ ಪೋಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ವರದಕ್ಷಿಣೆ ಕಿರುಕುಳ, ದಿನನಿತ್ಯ ಹಲ್ಲೆ, ದಿಂಬನ್ನು ಮುಖಕ್ಕೆ

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ- ಮಂಗಳೂರು ನಡುವೆ ಹೊಸ ರೈಲು ಸಂಚಾರ – ಕೇಂದ್ರ ರೈಲ್ವೇ ಸಚಿವರಿಗೆ ಕಟೀಲ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ರೈಲ್ವೇ ಇಲಾಖೆಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ, ಬೆಂಗಳೂರು – ಮಂಗಳೂರು ರೈಲ್ವೇ ಲೈನ್ ಮೇಲ್ದರ್ಜೆಗೆ ಮತ್ತು ವಿದ್ಯುದೀಕರಣ, ಮಂಗಳೂರಿನಿಂದ ವಾರಣಾಸಿ- ಮಂಗಳೂರು-ರಾಮೇಶ್ವರಂ ಹಾಗೂ ಮಂಗಳೂರು- ಬೀದರ್ ಮಧ್ಯೆ ಹೊಸ ರೈಲುಗಳನ್ನು ಸ್ಥಾಪಿಸುವಂತೆ ತಿಳಿಸಲಾಗಿತ್ತು. ಅಲ್ಲದೇ

ಸುಬ್ರಹ್ಮಣ್ಯ- ಮಂಗಳೂರು ನಡುವೆ ಹೊಸ ರೈಲು ಸಂಚಾರ – ಕೇಂದ್ರ ರೈಲ್ವೇ ಸಚಿವರಿಗೆ ಕಟೀಲ್ ಮನವಿ Read More »

ಕರಾವಳಿ

ಬೆಳೆ ವಿಮೆ ಪ್ರೀಮಿಯಂ ಪಾವತಿಸಿದವರಿಗೆ ಆ. 14 ರವರೆಗೆ ದಾಖಲೆ ಸಲ್ಲಿಕೆಗೆ ಅವಕಾಶ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಮೊತ್ತವನ್ನು ಸಹಕಾರಿ ಸಂಘ ಹಾಗೂ ಬ್ಯಾಂಕ್‌ಗಳಲ್ಲಿ ಪಾವತಿಸಿರುವ ರೈತರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಆ.14ರವರೆಗೆ ಅವಕಾಶ ನೀಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಈ ಬಾರಿ ಪ್ರೀಮಿಯಂ ಪಾವತಿಗೆ ಫ್ರೂಟ್ಸ್‌ ಐಡಿ ಕಡ್ಡಾಯವಾಗಿದ್ದು, ಇದನ್ನು ಪಡೆಯಲು ರೈತರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ವಿರಳ ಕಾಲಾವಕಾಶದಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಫಲರಾದ ರೈತರ ಅನುಕೂಲಕ್ಕಾಗಿ ದಾಖಲೆಗಳನ್ನು ಸಲ್ಲಿಸುವುದಕ್ಕೆ ಈಗ ಕಾಲಾವಕಾಶ ಕಲ್ಪಿಸಲಾಗಿದೆ.

ಬೆಳೆ ವಿಮೆ ಪ್ರೀಮಿಯಂ ಪಾವತಿಸಿದವರಿಗೆ ಆ. 14 ರವರೆಗೆ ದಾಖಲೆ ಸಲ್ಲಿಕೆಗೆ ಅವಕಾಶ ! Read More »

ಕರಾವಳಿ

ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣ – ಓರ್ವ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 03. ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಜೈಲು ಸೇರಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ ಎಂಬಾತನಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ. 2022ರ ಜು. 19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡವೊಂದು ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ‌ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿದ್ದರು. ಪ್ರಕರಣದ 8ನೇ ಆರೋಪಿ

ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣ – ಓರ್ವ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು Read More »

ಕರಾವಳಿ

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಬಜಪೆ, ಆ.03. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ತತ್ ಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಅಬ್ದುಲ್ ಅಝೀಜ್(34) ನ್ನು ವಶಕ್ಕೆ

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಆ. 03. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ  ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ  ‘ಉದ್ಯೋಗ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್‌ ಸೆಂಟರ್‌ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು. ಕಡಬದಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಮೋಹನ್ ಕೋಡಿಂಬಾಳ

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ Read More »

ಕರಾವಳಿ

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.03. ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top