ಕರಾವಳಿ

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಕಾರವಾರ, ಆ.03. ಕರ್ನಾಟಕ ಪಬ್ಲಿಕ್ ಶಾಲೆಯ ಸಹಾಯಕಿ ಆನಂದಿ ಎಂಬ ಮಹಿಳೆಗೆ ಹಾವು ಕಡಿದ ಘಟನೆ ಕಾರವಾರದಲ್ಲಿ ವರದಿ ತಿಳಿಸಿದೆ. ಶಾಲಾ ಸಮಯದಲ್ಲಿ ನೀರಿನ ಪಂಪ್ ಸ್ಟಾರ್ಟ್ ಮಾಡಲು ತೆರಳುವ ವೇಳೆ ಆನಂದಿ ಅವರಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥರಾದ ಅವರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದರು ಎಂದು ತಿಳಿದುಬಂದಿದೆ. ಇವರ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಆ.03. ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ನೇತೃತ್ವದಲ್ಲಿ ೭೬ ನೇ ಸ್ವಾತಂತ್ರೋತ್ಸವವನ್ನು   ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಚರಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ರಮೇಶ್ ಬಾಬು  ಅಧ್ಯಕ್ಷತೆಯಲ್ಲಿ ಕಡಬದ ಮಿನಿ ವಿಧಾನಸೌಧ  ಸಭಾಂಗಣದಲ್ಲಿ ಮಂಗಳವಾರ  ಪೂರ್ವಭಾವಿ ಸಭೆ  ನಡೆಯಿತು. ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಸ ಅಧ್ಯಕ್ಷತೆವಹಿಸಲಿದ್ದು   ಈಗ ತಾ.ಪಂ, ಪಟ್ಟಣ ಪಂಚಾಯಿತಿ, ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತ ಮಂಡಳಿ ಅಸ್ಥಿತ್ವ ಇಲ್ಲದ ಕಾರಣ ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೀತಾ

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.06 ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿದುಬಂದಿದೆ.

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ Read More »

ಕರಾವಳಿ

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಆ.03. ಬೆಂಗಳೂರು ಗ್ರಾಮಾಂತರದ ನಿವಾಸಿ ರಾಜಶೇಖರ್ ಎಂಬವರ ಪತ್ನಿ ಹರ್ಷಿತ(28) ಹಾಗೂ ಪುತ್ರ ಭಗತ್(3) ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಜಶೇಖರ್, ಪತ್ನಿ, ಮಗ, ಹಾಗೂ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಅಧೀ ಸುಬ್ರಮಣ್ಯಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.                                           

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಪುತ್ತೂರು, ಆ.03. 9 ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಕೃಷ್ಣಪ್ರಸಾದ್ ಗುಪ್ತ ಎಂಬವರ ಮಗ ಸತೀಶ್ ಗುಪ್ತ(33) ಎಂದು ಗುರುತಿಸಲಾಗಿದೆ. ಈತ ವಿಚಾರಣೆಗೆ ಹಾಜರಾಗದೇ ಇದ್ದ, ಆತನ ವಿರುದ್ದ ನ್ಯಾಯಾಲಯ ವಾರಂಟ್ ಜಾರಿ ಮಾಡಲಾಗಿತ್ತು ಎಂದು ವರದಿಯಾಗಿದೆ.

9 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ಸಹಿತ ಹೊಸ ತಾಲೂಕುಗಳಿಗೆ ಮೂಲಭೂತ ಸೌಕರ್ಯ ಲಭ್ಯ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ದ.ಕ ಜಿಲ್ಲೆಯಲ್ಲಿ ರಚನೆಗೊಂಡ ಹೊಸ ತಾಲೂಕುಗಳಿಗೆ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಕಡಬ ತಾಲೂಕಿಗೆ ಅಗತ್ಯ ಕಚೇರಿಗೆ ಸ್ಥಳಾಂತರ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎನ್ನಲಾಗಿದೆ. ಸಿಬ್ಬಂದಿ ಕೊರತೆ ಹೋಗಲಾಡಿಸಲು ನಿಯೋಜಿತರಿಗೆ ವೇಳಾಪಟ್ಟಿ ಪ್ರಕಾರ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗುವುದು. ಸರ್ಕಾರಿ ಹಂತದಲ್ಲಿ ನೇಮಕಾತಿ, ಅನುದಾನ ಇತ್ಯಾದಿಗಳ ಕುರಿತು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಹೇಲಿದರು ಎಂದು ವರದಿ ತಿಳಿಸಿದೆ. ಕಡಬ, ಮುಲ್ಕಿ, ಉಳ್ಳಾಲ, ಮೂಡಬಿದ್ರೆ ಮೊದಲಾದ ಹೊಸ

ಕಡಬ ಸಹಿತ ಹೊಸ ತಾಲೂಕುಗಳಿಗೆ ಮೂಲಭೂತ ಸೌಕರ್ಯ ಲಭ್ಯ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಕರಾವಳಿ

ಕಲ್ಲಡ್ಕ ಡಾ| ಪ್ರಭಾಕರ್ ಹೆಸರಲ್ಲಿ ನಕಲಿ ಖಾತೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.03. RSS ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಹೆಸರಲ್ಲಿ ನಕಲಿ ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಪೋಸ್ಟ್ ಮಾಡಿದ  ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಲ್ಲಡ್ಕ ಡಾ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ, ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು

ಕಲ್ಲಡ್ಕ ಡಾ| ಪ್ರಭಾಕರ್ ಹೆಸರಲ್ಲಿ ನಕಲಿ ಖಾತೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ – ಪೊಲೀಸ್ ರ ನಿಯೋಜನೆ

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಆ.03. ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ದಾವಣಗೆರೆಯ ಶರತ್ ಮೃತಪಟ್ಟ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ ಸೆಲ್ಫಿ, ರೀಲ್ಸ್ ಮಾಡುವುದು ಕಂಡುಬಂದಿದೆ ಎನ್ನಲಾಗಿದೆ. ಅಲ್ಲದೆ ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಫಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಚಾರ್ಮಾಡಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ

ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ – ಪೊಲೀಸ್ ರ ನಿಯೋಜನೆ Read More »

ಕರಾವಳಿ, ಕರ್ನಾಟಕ

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಮೇಲ್ಮನವಿ ಹೋಗಬೇಕು..! – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಮಳೆ ಪೀಡಿತ ಕರಾವಳಿ ಜಿಲ್ಲೆಗಳ ವೀಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ್ದರು.  ಸುದ್ದಿಗಾರರೊಂದಿಗೆ ಮಾತಾಡಿದ ಅವರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸೌಜನ್ಯ ಹತ್ಯೆ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದೆ. ಅದರೆ ಸೌಜನ್ಯಳ ಪೋಷಕರು ತನಿಖೆಯಿಂದ ಸಂತುಷ್ಟರಾಗಿಲ್ಲ, ಹಾಗಾಗಿ ಅವರು ಮರುತನಿಖೆ ಕೋರಿದ್ದಾರೆ.

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಮೇಲ್ಮನವಿ ಹೋಗಬೇಕು..! – ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಶಾಲಾ ವಿದ್ಯಾರ್ಥಿಗೆ ಸೀನಿಯರ್ ವಿದ್ಯಾರ್ಥಿಗಳ ತಂಡದಿಂದ ಹಲ್ಲೆ..!

(ನ್ಯೂಸ್ ಕಡಬ)newskadaba.com ಬೇಕೂರು, ಆ.03. ಶಾಲಾ ವಿದ್ಯಾರ್ಥಿಯ ಮೇಲೆ ಸೀನಿಯರ್ ವಿದ್ಯಾರ್ಥಿಗಳ ತಂಡವೊಂದು ರ‍್ಯಾಗಿಂಗ್ ನಡೆಸಿದ ಆರೋಪ ಕೇಳಿಬಂದಿದೆ. ಗಾಯಗೊಂಡ ಪ್ಲಸ್ ವನ್‌ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ ಶಾಲೆ ಬಿಟ್ಟ ಬಳಿಕ ಸಮೀಪದ ಬಸ್‌ ತಂಗುದಾಣದಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಅದೇ ಶಾಲೆಯ ಪ್ಲಸ್‌ ಟು ವಿದ್ಯಾರ್ಥಿಗಳ ತಂಡವೊಂದು ಶೂ ಧರಿಸಿರುವುದಕ್ಕೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗೆ ಹಲ್ಲೆಯಿಂದ ಕಿವಿ ತಮ್ಮಟೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಶಾಲಾ ವಿದ್ಯಾರ್ಥಿಗೆ ಸೀನಿಯರ್ ವಿದ್ಯಾರ್ಥಿಗಳ ತಂಡದಿಂದ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top