ಕರಾವಳಿ

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಪಂಚಾಯತ್ ವತಿಯಿಂದ ಅನಂತಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಶುಚಿತ್ವ ಮಾಡುತ್ತಿದ್ದ ವೇಳೆ ತಂಡವೊಂದರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದ್ದು, ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿ ತಂಡ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಗಣೇಶ್ ಪುತ್ತೂರು […]

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದುಬಂದಿದೆ. ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ಕುಕ್ಕುಂಜೆಯಿಂದ ಅಳಂಬ, ಬರೆಂಬಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಕುಸಿದಿದೆ ಎನ್ನಲಾಗಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕ ಸಂಚಾರ ಮಾಡುತ್ತಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಕುತ್ಲೂರು- ಕಾಡಬಾಗಿಲು ಸೇತುವೆ ಕುಸಿತ – ಸಂಕಷ್ಟದಲ್ಲಿ ಸಿಲುಕಿದ ಅರಣ್ಯವಾಸಿಗಳು Read More »

ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 26. ನಗರದ ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಕಾಲೇಜು ನಿರ್ದೇಶಕಿ, ಮೂವರು ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದು, ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿಯ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು

(ನ್ಯೂಸ್ ಕಡಬ)newskadaba.com ಪುತ್ತೂರು,ಜು.26. ಉಪ್ಪಿನಂಗಡಿ ಭಾಗದ ವಿದ್ಯುತ್ ಸುಧಾರಣೆಗೆ ರೂಪಿಸಿರುವ 34 ನೆಕ್ಕಿಲಾಡಿ ಗ್ರಾಮದ ಕರುವೇಲುವಿನಲ್ಲಿ 110 ಕೆ.ವಿ ಉಪಕೇಂದ್ರ ಸ್ಥಾಪನೆಗೆ ಯೋಜನೆ ರೂಪಿಸಿದೆ. ಇದರ ಅನುಮೋದನೆ ನೀಡುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಜಮೀನಿಗೆ ಹಣ ಪಾವತಿಯಾಗಿ ಜಿಲ್ಲಾಧಿಕಾರಿಯಿಂದ ಮಂಜೂರಾತಿ ಕ್ರಮವು ದೊರಕಿದೆ ಎನ್ನಲಾಗಿದೆ. 40 ವರ್ಷಗಳ ಬಳಿಕ ಪುತ್ತೂರು ತಾಲೂಕಿಗೆ 2ನೇ 110 ಕೆವಿ ಉಪಕೇಂದ್ರ ಮಂಜೂರು ಆಗಿದ್ದು, ಕಳೆದ

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು Read More »

ಕರಾವಳಿ

15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜು. 26. ಕಳೆ 15 ವರ್ಷಗಳಿಂದ ನವಮಂಗಳೂರು ಬಂದರಿನ ಯಾರ್ಡ್‌ನಲ್ಲಿ ಪೇರಿಸಿಡಲಾದ ರಕ್ತಚಂದನ ದಿಮ್ಮಿಗಳ ವಿಲೇವಾರಿಗೆ ಅರಣ್ಯ ಇಲಾಖೆ ನಿರ್ಧರಿಸಿದೆ. 2008 ರಿಂದ  ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ- ಡಿಆರ್‌ಐ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಅವುಗಳನ್ನು ಬಂದರಿನ ಯಾರ್ಡ್‌ನಲ್ಲಿ ಸಂಗ್ರಹಿಸಲಾಗಿದೆ. ಸಂಗ್ರಹಿಸಿಡಲಾದ ಮರದ ದಿಮ್ಮಿಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಗ್ಲೋಬಲ್‌ ಟೆಂಡರ್‌ ಮೂಲಕ ವಿಲೇವಾರಿ ಮಾಡಬಹುದು. ಪೂರ್ವಭಾವಿ ಅನುಮೋದನೆ ಹಾಗೂ ಪತ್ರ ವ್ಯವಹಾರಗಳನ್ನು ಈಗಾಗಲೇ

15 ವರ್ಷಗಳಿಂದ ಸಂಗ್ರಸಿಡಲಾದ ರಕ್ತ ಚಂದನಕ್ಕೆ ಕೊನೆಗೂ ಮುಕ್ತಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ…! – ಕೃಷಿ ನಾಶ

(ನ್ಯೂಸ್ ಕಡಬ)newskadaba.com ಮಂಡೆಕೋಲು, ಜು.26. ಮಂಡೆಕೋಲು ಗ್ರಾಮದಲ್ಲಿ ದಾಳಿ ಮುಂದುವರಿಸಿರುವ ಕಾಡಾನೆಗಳ ಹಿಂಡು ಬೊಳುಗಲ್ಲು ಭಾಗದಲ್ಲಿ ಕೃಷಿ ನಾಶ ಪಡಿಸಿದೆ ಎಂದು ವರದಿ ತಿಳಿಸಿದೆ. ಬೊಳುಗಲ್ಲು ಭಾಗದಲ್ಲಿ ದಾಳಿ ನಡೆಸಿದ ಆನೆಗಳ ಹಿಂಡು ಶುಭಕರ ಬೊಳುಗಲ್ಲು ಅವರ ತೋಟಕ್ಕೆ ನುಗ್ಗಿ ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಪಡಿಸಿದ್ದು, ನೂರಕ್ಕೂ ಅಧಿಕ ಬಾಳೆ ಗಿಡಗಳನ್ನು ನಾಶಪಡಿಸಿವೆ ಎಂದು ಶುಭಕರ ಬೊಳುಗಲ್ಲು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಗಡಿಪ್ರದೇಶವಾದ ಮಂಡೆಕೋಲಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಕನ್ಯಾನ, ಚಾಕೋಟೆ, ಬೊಳುಗಲ್ಲು

ಕಾಡಾನೆ ದಾಳಿ…! – ಕೃಷಿ ನಾಶ Read More »

ಕರಾವಳಿ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಘಟನೆಯ ಕೆಪಿಸಿಸಿ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತ ಗಟ್ಟಿ ನೇಮಕಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಹಾಗೂ ಕಡಬ ಬ್ಲಾಕ್ ಒಳಗೊಂಡ ಸುಳ್ಯ ವಿಧಾನಸಭಾ ಕ್ಷೇತ್ತದ ಕೆಪಿಸಿಸಿ ಉಸ್ತುವಾರಿಯಾಗಿ ಮಮತ ಗಟ್ಟಿ ಅವರನ್ನುನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಅವರಿಗೆ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ Read More »

ಕರಾವಳಿ

ಜು.27ರಿಂದ ಸುಳ್ಯ-ಪಾಣತ್ತೂರು ಅಂತಾರಾಜ್ಯ ಮಾರ್ಗದಲ್ಲಿ ಮತ್ತೊಂದು ಬಸ್ ಸರ್ವೀಸ್ ಆರಂಭ

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಅಂತಾರಾಜ್ಯ ರಸ್ತೆಯಲ್ಲಿ ಕಾಂಞಂಗಾಡ್-ಪಾಣತ್ತೂರು- ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಜು.27ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಇನ್ನೊಂದು ಬಸ್ ಸಂಚಾರ ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಪಾಣತ್ತೂರಿನಿಂದ ಬೆಳಿಗ್ಗೆ 5:50 ಹೊರಟು ಸುಳ್ಯ6:40ಕ್ಕೆ ತಲುಪಲಿದೆ. ಸುಳ್ಯದಿಂದ ಬೆಳಿಗ್ಗೆ 6:50ಕ್ಕೆ ಹೊರಟು ಪಾಣತ್ತೂರಿಗೆ 7:40ಕ್ಕೆ ತಲುಪಲಿದೆ. ಬೆಳಿಗ್ಗೆ ಪಾಣತ್ತೂರಿನಿಂದ 7:50ಕ್ಕೆ ಹೊರಟು 9.20ಕ್ಕೆ ಕಾಂಞಂಗಾಡು 9: 30ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ. ಸುಳ್ಯ-ಪಾಣತ್ತೂರು- ಕಾಞಂಗಾಡ್ ರಸ್ತೆಯಲ್ಲಿ ಈಗಾಗಲೇ ಒಂದು ಬಸ್ ಓಡಾಟ ನಡೆಸುತಿದೆ ಎಂದು ತಿಳಿದುಬಂದಿದೆ.

ಜು.27ರಿಂದ ಸುಳ್ಯ-ಪಾಣತ್ತೂರು ಅಂತಾರಾಜ್ಯ ಮಾರ್ಗದಲ್ಲಿ ಮತ್ತೊಂದು ಬಸ್ ಸರ್ವೀಸ್ ಆರಂಭ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಗಳು ಇನ್ನೂ ಮುಂದೆ SMSಗೆ ಕಾಯದೇ ನೇರವಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬಹುದಾಗಿದೆ. ಇನ್ನು ಮುಂದೆ ಫಲಾನುಭವಿಗಳ ಮೊಬೈಲ್‌ಗೆ ಯಾವುದೇ ಎಸ್‌ಎಂಎಸ್‌ಗಳನ್ನು ಕಳುಹಿಸುವುದಿಲ್ಲ. ಅವರು ತಮ್ಮ ಹತ್ತಿರದ ಗ್ರಾಮ ಒನ್, ಗ್ರಾಮ ಪಂಚಾಯತ್‌ನ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ನಗರದ ವಾರ್ಡ್ ಕಚೇರಿ ಹೀಗೆ ಯಾವುದಾದರು ಒಂದು ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಉಡುಪಿ

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ Read More »

ಕರಾವಳಿ, ಕರ್ನಾಟಕ
Scroll to Top