ಕರಾವಳಿ

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು

(ನ್ಯೂಸ್ ಕಡಬ)newskadaba.com  ಪುತ್ತೂರು, ಜು.25. ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೇಜ್ಜೇನು ಕಡಿದು ಗಂಭೀರ ಗಾಯಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಗುರುವ(55) ಎಂದು ಗುರುತಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಳೆಗೆ ಧ್ವಂಸಗೊಂಡ ಮನೆ – ಅದೃಷ್ಟವಶಾತ್ ಯಜಮಾನಿ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com  ಬೆಟ್ಟಂಪಾಡಿ, ಜು.25. ನಿರಂತರ ಸುರಿಯುತ್ತಿರುವ ಮಳೆಗೆ ಇಲ್ಲಿನ ಇರ್ದೆ ಅರಂಬ್ಯ ಸುಶೀಲ ಎಂಬವರ ಮನೆ ಬಿದ್ದು ಸಂಪೂರ್ಣ ಧ್ವಂಸಗೊಂಡಿರುವ ಘಟನೆ ಸಂಭವಿಸಿದೆ. ಹಂಚಿನ ಛಾವಣಿ ಸಂಪೂರ್ಣ ಕುಸಿದು, ಇಟ್ಟಿಗೆ ಗೋಡೆ ಹಾನಿಗೊಳಗಾಗಿದೆ. ಮನೆ ಬೀಳುವ ವೇಳೆಗೆ ಸುಶೀಲರವರು ಮಗಳ ಹೋಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಟ್ಟಂಪಾಡಿ ಪಂಚಾಯತ್ ಪಿಡಿಒ ಸೌಮ್ಯ, ಸಿಬ್ಬಂದಿ ಸಂದೀಪ್. ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.  

ಮಳೆಗೆ ಧ್ವಂಸಗೊಂಡ ಮನೆ – ಅದೃಷ್ಟವಶಾತ್ ಯಜಮಾನಿ ಅಪಾಯದಿಂದ ಪಾರು Read More »

ಕರಾವಳಿ

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ತೊಂದರೆಯಾಗಿಲ್ಲ.

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ Read More »

ಕರಾವಳಿ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿದೆ ಎನ್ನಲಾಗಿದೆ. ಪುತ್ತೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿ ತಿಳಿಸಿದೆ.

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ Read More »

ಕರಾವಳಿ

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಜು.25. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಕುರಿತು ಪ್ರತಿಕ್ರಿಯಿಸಿ, ತಪ್ಪಿತಸ್ಥ ಬಸ್ ಚಾಲಕನ ವಿರುದ್ಧ ದಕ್ಷಿಣ ಟ್ರಾಫಿಕ್ ಠಾಣೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಅಲ್ಲದೆ ಚಾಲಕನ ಡಿಎಲ್ ಅನ್ನು ರದ್ದುಗೊಳಿಸುವಂತೆ ಆರ್ ಟಿಒಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ದಡಾರ ರುಬೆಲ್ಲಾ ನಿರ್ಮೂಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25.  ಇಂದ್ರಧನುಷ್ ಮತ್ತು ದಡಾರ ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯು ಜು. 25ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ 2ನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಡಾರ ರುಬೆಲ್ಲಾ ನಿರ್ಮೂಲನಾ ಸಭೆ Read More »

ಕರಾವಳಿ

ಜು.26ರಂದು ಜೋಕಟ್ಟೆ ಗ್ರಾಮ ಪಂಚಾಯತ್ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಜೋಕಟ್ಟೆ ಗ್ರಾಮ ಪಂಚಾಯತ್‍ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ನಾಳೆ (ಜು.26 ಬುಧವಾರ) ಬೆಳಿಗ್ಗೆ 11 ಗಂಟೆಗೆ ಜೋಕಟ್ಟೆ ವಿಜಯ ವಿಠಲ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು.26ರಂದು ಜೋಕಟ್ಟೆ ಗ್ರಾಮ ಪಂಚಾಯತ್ ಸಭೆ Read More »

ಕರಾವಳಿ

ಭಾರಿ ಧಾರಾಕಾರ ಮಳೆ…!- ಸಂಚಾರ ವ್ಯತ್ಯಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಡಗಿನ ಮರ ಸಹಿತ ಭೂಕುಸಿತ ಉಂಟಾಗಿ ಮಾಣಿ- ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತ ಸಾಧ್ಯತೆ ಎದುರಾಗಿದ್ದು, ಆತಂಕ ಸೃಷ್ಟಿಸಿದೆ.

ಭಾರಿ ಧಾರಾಕಾರ ಮಳೆ…!- ಸಂಚಾರ ವ್ಯತ್ಯಯ Read More »

ಕರಾವಳಿ

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ

(ನ್ಯೂಸ್ ಕಡಬ)newskadaba.com ಕಡಬ, ಜು.25. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗ್ಯಾರಂಟಿ ಯೋಜನೆಗೆ ಉಚಿತವಾಗಿ ನೋಂದಣಿಗೆ ಸರಕಾರ ಆದೇಶ ನೀಡಿರುವುದರಿಂದ ಗ್ರಾಮ ಒನ್ ಕೇಂದ್ರಗಳು ಸಂಕಷ್ಟಕ್ಕೆ ಒಳಗಾಗಿದೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಕಡಬ ತಾಲೂಕಿನ ಗ್ರಾಮ ಒನ್ ಫ್ರಾಂಚೈಸಿನ ನಿರ್ವಾಹಕರು ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಡಬ ತಾಲೂಕಿನ ಸುಮಾರು 20 ಗ್ರಾಮ ಒನ್ ಫ್ರಾಂಚೈಸಿ ನಿರ್ವಾಹಕರು ಮನವಿ ನೀಡಿದ್ದು, ನಾವು ಒಂದು ವರುಷದ ಹಿಂದೆ ಗ್ರಾಮ ಒನ್ ಕೇಂದ್ರಗಳನ್ನು ಬಂಡವಾಳ ಹೂಡಿಕೆ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ Read More »

ಕರಾವಳಿ
Scroll to Top