ಕರಾವಳಿ

ವಕೀಲರ ತರಬೇತಿ ಅವಧಿಯ ಶಿಷ್ಯವೇತನದ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿಗೆ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನಕ್ಕಾಗಿ ವೆಬ್‍ಸೈಟ್ www.sw.kar.nic.in ಮೂಲಕ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಜು. 31ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ಉರ್ವಸ್ಟೋರ್ಸ್‍ ನಲ್ಲಿರುವ ಜಿಲ್ಲಾ ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಕೀಲರ ತರಬೇತಿ ಅವಧಿಯ ಶಿಷ್ಯವೇತನದ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐನ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರೀಷಿಯನ್, ಮಷಿನಿಷ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆ. 25ರೊಳಗೆ ನಗರದ ಬಿಜೈನಲ್ಲಿರುವ ಕರಾರಸಾನಿ, ಮಂಗಳೂರು ವಿಭಾಗದ, ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸಿ,

ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಆಗಸ್ಟ್ 15 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿರುವ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳಬೇಕು, ಅದರಲ್ಲಿ  ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ, ಜಿಲ್ಲಾಡಳಿತಕ್ಕೆ ಮುಜುಗರ ಉಂಟಾಗದಂತೆ ಎಚ್ಚರಿಕಾ ಕ್ರಮವನ್ನು ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ತಿಳಿಸಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ದತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ

ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ವಿಮಾನ ದುರಂತದ ಅಣಕು ಕಾರ್ಯಾಚರಣೆ- ಸುರಕ್ಷತಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಅಣಕು ಕಾರ್ಯಚರಣೆಯಲ್ಲಿ ಯಾವುದೇ ರೀತಿಯ ಆಪತ್ತುಗಳು ಎದುರಾಗದಂತೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಸೋಮವಾರದಂದು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ತಿಂಗಳ 31ರಂದು ನಿಗದಿಪಡಿಸಲಾಗಿರುವ ವಿಮಾನ ದುರಂತದ ಜಂಟಿ ಅಣಕು ಪ್ರದರ್ಶನದ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಡಳಿತ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹಾಗೂ ಅದಾನಿ ವಿಮಾನ

ವಿಮಾನ ದುರಂತದ ಅಣಕು ಕಾರ್ಯಾಚರಣೆ- ಸುರಕ್ಷತಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಗೃಹರಕ್ಷಕ ಹೂವಪ್ಪರಿಗೆ ಸಾಂತ್ವನ ಹೇಳಿದ ಸಮಾದೇಷ್ಟ ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 25. ಕಳೆದ ಆರು ತಿಂಗಳಿಂದ ನರ ಸಂಬಂಧಿ ಕಾಯಿಲೆಗಳಿಂದ  ಬಳಲುತ್ತಿರುವ ಮುಖ್ಯಮಂತ್ರಿ ಗಳ ಚಿನ್ನದ ಪದಕ ಪುರಸ್ಕೃತ ಬೆಳ್ಳಾರೆ ಘಟಕದ ಗೃಹರಕ್ಷಕ ಶ್ರೀ ಹೂವಪ್ಪ ಅವರನ್ನು ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ|ಮುರಲಿ ಮೋಹನ್ ಚೂಂತಾರು ಅವರು, ಮನೆಗೆ ಭೇಟಿ ನೀಡಿ ಸಾಂತ್ವನ ನುಡಿದರು. ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಘಟಕದ ಘಟಕಾಧಿಕಾರಿ ಶ್ರೀ ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು.

ಗೃಹರಕ್ಷಕ ಹೂವಪ್ಪರಿಗೆ ಸಾಂತ್ವನ ಹೇಳಿದ ಸಮಾದೇಷ್ಟ ಡಾ. ಚೂಂತಾರು Read More »

ಕರಾವಳಿ

ಇಂದು(ಜು. 25) ನಡೆಯಬೇಕಿದ್ದ ವಿವಿ ಪರೀಕ್ಷೆಗಳು ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ದ.ಕ. ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಈ ನಡುವೆ ಇಂದು (ಜು.25) ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ. ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ

ಇಂದು(ಜು. 25) ನಡೆಯಬೇಕಿದ್ದ ವಿವಿ ಪರೀಕ್ಷೆಗಳು ಮುಂದೂಡಿಕೆ Read More »

ಕರಾವಳಿ

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ ಗೆ ಕರೆ ಮಾಡಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆಗ ಅಪರಿಚಿತ ವ್ಯಕ್ತಿಯೋರ್ವ ಬಂದು 10 ರೂ. ನೋಟನ್ನು ಅವರ ಕಾರಿನ ಎಡಭಾಗದಲ್ಲಿ ಹಾಕಿ ನಿಮ್ಮ ಹಣ ಬಿದ್ದಿದೆ ಎಂದು ಹೇಳಿದ್ದು, ಮಹಿಳೆ ಅದನ್ನು ಹೆಕ್ಕುತ್ತಿದ್ದಾಗ ಅಪರಿಚಿತ ವ್ಯಕ್ತಿಯು ಕಾರಿನ ಬಲಬದಿಯಲ್ಲಿಯೂ ನೋಟು

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 25. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್ ನಲ್ಲಿ ಸೋಮವಾರದಂದು ರಾತ್ರಿ ವೇಳೆ ಸಂಭವಿಸಿದೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ ನಲ್ಲಿ ತಿರುಗುವ ಸಂದರ್ಭ, ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್

(ನ್ಯೂಸ್ ಕಡಬ) newskadaba.com ಅರಂತೋಡು, ಜು. 25. ಜಾತ್ಯಾತೀತ ತತ್ವ ಭಾಷೆ ಸಂಸ್ಕ್ರತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರ ಕೋವಿಲ್ ಹೇಳಿದರು. ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವ್ರದ್ದಿ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ತೆಕ್ಕಿಲ್ ಮೊಹಮ್ಮದ್

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್ Read More »

ಕರಾವಳಿ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ 9 ವರ್ಷಗಳಿಂದ ಐಐಸಿಟಿ ವಿದ್ಯಾಸಂಸ್ಥೆಯ ಮೂಲಕ  ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಗತಿ, ಟ್ಯುಟೋರಿಯಲ್ ಹಾಗೂ ಟ್ಯೂಷನ್ ತರಗತಿ, ನವೋದಯ ತರಬೇತಿ, ಅಬಾಕಸ್  ಶಿಕ್ಷಣವನ್ನು ನೀಡುತ್ತಿದ್ದು, ಇದೀಗ ಅತ್ಯಂತ ಬೇಡಿಕೆಯಲ್ಲಿರುವ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿ ತರಬೇತಿಯನ್ನು ಆರಂಭಿಸಿದ್ದು, ಜು.22ರಂದು ಕೊಕ್ಕಡ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ವಿಶ್ವನಾಥ ರೈ ಅವರು ದೀಪ ಬೆಳಗಿಸಿ ನೂತನವಾಗಿ ಆರಂಭಗೊಂಡ ನರ್ಸರಿ ಶಿಕ್ಷಕರ ತರಬೇತಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಒಂದು ದೇಶದ ಭವಿಷ್ಯವು ತರಗತಿ

ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ Read More »

ಕರಾವಳಿ
Scroll to Top