ಕರಾವಳಿ

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ನೀಡಲಾಗಿದೆ. ಇತ್ತೀಚೆಗೆ ನಡೆದ ಸುಲ್ತಾನ್ ಜ್ಯುವೆಲ್ಲರಿ ಹಾಗೂ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರಿಗೆ […]

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ Read More »

ಕರಾವಳಿ

ಎಸ್‌ವೈಎಸ್ ಮಾಣಿ ಸರ್ಕಲ್ ವತಿಯಿಂದ C-ಮೀಟ್ 2k23 ಕ್ಯಾಂಪ್ – ಪರಸ್ಪರ ಕೈಜೋಡಿಸಿ ಕಾರ್ಯಾಚರಿಸಿರಿ ಪರಾಜಯ ಹೊಂದಲಾರಿರಿ- ಬಹು| ಅಬ್ದುಲ್ ಅಝೀಝ್ ಮಿಸ್ಬಾಹಿ

(ನ್ಯೂಸ್ ಕಡಬ) newskadaba.com ಮಾಣಿ, ಜು. 21. ಸಂಘಟನಾ ಚಟುವಟಿಕೆಗಳನ್ನು ಬಲಿಷ್ಠಗೊಳಿಸಲು ಪರಸ್ಪರ ಕೈಜೋಡಿಸಿ ಕಾರ್ಯಾಚರಿಸಿರಿ. ನೀವು ಎಂದಿಗೂ ಪರಾಜಯ ಹೊಂದಲಾರಿರಿ ಎಂದು ಎಸ್‌ವೈಎಸ್ ದಕ ಈಸ್ಟ್ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಹೇಳಿದರು. ಅವರು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ(ರಿ.) ಎಸ್‌ವೈಎಸ್ ಮಾಣಿ ಸರ್ಕಲ್ ವತಿಯಿಂದ ನಡೆದ C-ಮೀಟ್ 2k23 ಎಂಬ ಕ್ಯಾಂಪ್‌ನ ಆಧ್ಯಾತ್ಮಿಕ ತರಗತಿಯಲ್ಲಿ ಮಾತನಾಡಿದರು. ಎಸ್‌ವೈಎಸ್ ಪುತ್ತೂರು ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಸಖಾಫಿ ಅಲ್ ಹಿಕಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್‌ವೈಎಸ್ ಮಾಣಿ ಸರ್ಕಲ್ ವತಿಯಿಂದ C-ಮೀಟ್ 2k23 ಕ್ಯಾಂಪ್ – ಪರಸ್ಪರ ಕೈಜೋಡಿಸಿ ಕಾರ್ಯಾಚರಿಸಿರಿ ಪರಾಜಯ ಹೊಂದಲಾರಿರಿ- ಬಹು| ಅಬ್ದುಲ್ ಅಝೀಝ್ ಮಿಸ್ಬಾಹಿ Read More »

ಕರಾವಳಿ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 21. ಈಗಾಗಲೇ ನೈಜ ಘಟನೆಯಾಧಾರಿತ ಸಿನೆಮಾಗಳು ಮೂಡಿಬಂದಿತ್ತು. ಇದೀಗ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೇ ನೆಪವಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಎಂಬಾಕೆಯನ್ನು 2012ರ ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದು ರಾತ್ರಿ ಮಿಸ್ಸಿಂಗ್ ಕೇಸ್ ಕೂಡಾ ದಾಖಲಾಗಿತ್ತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ Read More »

ಕರಾವಳಿ

ನಂತೂರು ಫ್ಲೈಓವರ್ ನಿರ್ಮಾಣಕ್ಕೆ 600 ಮರಗಳ ಮಾರಣಹೋಮ – ಪರಿಸರ ಪ್ರೇಮಿಗಳಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು. ಜು. 21. ರಸ್ತೆ ಅಗಲೀಕರಣದ ಹೆಸರಿನಲ್ಲಿ ನೂರಾರು ವರ್ಷಗಳಿಂದ ಬೆಳೆದ ಮರಗಳು ಧರೆಗುರುತ್ತಲೇ ಇದ್ದು, ಕಡಿದ ಮರಗಳಿಗೆ ಬದಲಾಗಿ ಮತ್ತೆ ಗಿಡ-ಮರಗಳನ್ನು ನೆಡುವವರು ಯಾರು ಅನ್ನೋದೇ ಪ್ರಶ್ನೆಯಾಗಿ ಉಳಿದಿದೆ. ಪರಿಸರಪ್ರೇಮಿಗಳು ಮರ ಕಡಿಯುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರೂ, ರಾಜ್ಯ ಸರಕಾರ ಹಾಗೂ ಅಧಿಕಾರಿಗಳು ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಬುಡಸಮೇತ ಉರುಳಿಸುತ್ತಲೇ ಇದ್ದಾರೆ. ಇದೀಗ ನ್ಯಾಷನಲ್ ಹೈವೇ ಪ್ರಾಧಿಕಾರವು ವಾಹನ ದಟ್ಟಣೆ ನಿಯಂತ್ರಿಸುವ ಹಿನ್ನೆಲೆ ನಂತೂರು ಜಂಕ್ಷನ್‌ ನಿಂದ ಕೆಪಿಟಿ ಜಂಕ್ಷನ್‍ವೆರೆಗೆ 1.6 ಕಿ.ಮೀ

ನಂತೂರು ಫ್ಲೈಓವರ್ ನಿರ್ಮಾಣಕ್ಕೆ 600 ಮರಗಳ ಮಾರಣಹೋಮ – ಪರಿಸರ ಪ್ರೇಮಿಗಳಿಂದ ತೀವ್ರ ಆಕ್ರೋಶ Read More »

ಕರಾವಳಿ

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.21. ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೆಂಡಿಂಗ್ ಮತ್ತು ಪುತ್ತೂರಿಯಲ್ಲಿರುವ ಅಝರ್ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್ ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ.  

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಾದಕ ವಸ್ತು ಮತ್ತು MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ನಿಯಾಜ್ (28), ನಿಶಾದ್ (28), ಮೊಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್

(ನ್ಯೂಸ್ ಕಡಬ) newskadaba.com ಮಂಗಳೂರು. ಜು. 21. ಇಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ವೊಂದರಲ್ಲಿ ಸಾಂಬಾರ್ ವಿಚಾರವಾಗಿ ಗಲಾಟೆ ನಡೆದು ಸಹಪಾಠಿಯ ಮೇಲೆ ವಿದ್ಯಾರ್ಥಿಯೊಬ್ಬ ಚೂರಿ ಎಸೆದ ಪರಿಣಾಮ ಗಾಯಗೊಂಡ ವಿದ್ಯಾರ್ಥಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಚೂರಿ ಎಸೆದ ವಿದ್ಯಾರ್ಥಿಯನ್ನು ಪೊಲೀಸರು ಬಾಲನ್ಯಾಯ ಮಂಡಳಿಯ ಮುಂದೆ ಗುರುವಾರದಂದು ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಚೂರಿ ಎಸೆದ ವಿದ್ಯಾರ್ಥಿಗೆ ಮೊದಲ ಸುತ್ತಿನ ಆಪ್ತ ಸಮಾಲೋಚನೆಯನ್ನು ಪೊಲೀಸರ ವರದಿ ಆಧಾರದಲ್ಲಿ ನಡೆಸಲಾಗಿದ್ದು, ಘಟನೆಯ ಬಗ್ಗೆ ವಿದ್ಯಾರ್ಥಿ ಪಶ್ಚಾತ್ತಾಪ ಹೊಂದಿರುವಂತೆ ತೋರುತ್ತದೆ.

ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು.20ರಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು ಎನ್ನಲಾಗಿದೆ.

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..! Read More »

ಕರಾವಳಿ

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಮಣಿಪಾಲ, ಜು.21. ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.  

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಗುದ್ದಿ ಜಖಂಗೊಂಡ ಘಟನೆ ಗುರುವಾರದಂದು ನಗರದ ಪಿವಿಎಸ್‌ ಬಳಿಯ ಎಂ.ಜಿ. ರೋಡ್‌ನ‌ಲ್ಲಿ ನಡೆದಿದೆ. ಕಾಸರಗೋಡು- ಮಂಗಳೂರು ನಡುವೆ ಸಂಚರಿಸುತ್ತಿದ್ದ ಬಸ್‌, ಇನ್ನೊಂದು ಕೆಎಸ್‌ಆರ್‌ಟಿಸಿಯ ಬಸ್ ನ್ನು ಹಿಂದಿಕ್ಕುವ ಭರದಲ್ಲಿ ಕಾಂಪಿಟೀಶನ್‌ ಮಾಡಿಕೊಂಡು ಪಿವಿಎಸ್‌ ಜಂಕ್ಷನ್‌ ನಿಂದ ಎಂ.ಜಿ ರಸ್ತೆಗೆ ನಿರ್ಲಕ್ಷ್ಯ ಮತ್ತು ಅತೀ ವೇಗದಿಂದ ಬಂದಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಢಿಕ್ಕಿಯಾಗಿದೆ. ಈ ಸಂದರ್ಭ

ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top