ಕರಾವಳಿ

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿಯಷ್ಟು ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಹಾಗೂ ನಗರದ ಫಳ್ನೀರ್ ನ ಗೂಡಂಗಡಿ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತ ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ […]

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ Read More »

ಕರಾವಳಿ

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಚಿನ್ನಾಭರಣ ಅಂಗಡಿ ಮಾಲೀಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ನೊಂದಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರೂ ಆಗಿದ್ದ  ಅವರು ಪತ್ನಿಯನ್ನು ಅಗಲಿದ್ದಾರೆ.

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ನೀರಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಇಪ್ಪತ್ತು ತಿಂಗಳ ಹಸುಗೂಸೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿಂದ ವರದಿಯಾಗಿದೆ. ಮೃತ ಮಗುವನ್ನು ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು ಕಿತಾಬುನ್ ದಂಪತಿಯ ಪುತ್ರಿ ಆಯಿಶಾ ಎಂದು ತಿಳಿದು ಬಂದಿದೆ. ಬುಧವಾರದಂದು ಸಂಜೆ ಅರ್ಧ ನೀರು ತುಂಬಿಸಿಟ್ಟಿದ್ದ ಬಕೆಟ್ ಬಳಿ ಆಟವಾಡುತ್ತಿದ್ದ ಮಗು ಬಕೆಟ್ ಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ

ನೀರಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲಾ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು ಫಲಾನುಭವಿಯು ನೋಂದಣಿಯನ್ನು

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ Read More »

ಕರಾವಳಿ

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಬೆಂಗಳೂರಿಗೆ ಬಾಡಿಗೆಗೆ ಗೊತ್ತುಪಡಿಸಿ, ಚಾಲಕರಿಂದಲೇ ಹಣ ಪಡೆದು ವಂಚಿಸಿ ಅಪರಿಚಿತ ವ್ಯಕ್ತಿ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಗಾಂಧಿನಗರ ಪಾರ್ಕಿಂಗ್‌ನಲ್ಲಿರುವ ಗೂಡ್ಸ್‌ ಟೆಂಪೋ ಚಾಲಕರೊಬ್ಬರಲ್ಲಿ ಅಪರಿಚಿತನೋರ್ವ ಬೆಂಗಳೂರಿನ ಕನಕಪುರಕ್ಕೆ ಬಾಡಿಗೆ ಇದೆ. ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ವಿದ್ಯುತ್ ಉಪಕರಣಗಳನ್ನು ಸಾಗಿಸಲು ಮೂರು ಗೂಡ್ಸ್‌ ಗಾಡಿ ಬೇಕು. ಅಲ್ಲದೇ ಕನಕಪುರದಿಂದ ಹಿಂದಿರುಗುವಾಗ ವಿದ್ಯುತ್‌ ಟ್ರಾನ್ಸ್‌ಫ‌ರ್‌ ಕೂಡಾ ತರಲಿಕ್ಕಿದೆ. ಅದಕ್ಕೆ (407) ಗೂಡ್ಸ್‌ ಟೆಂಪೋ ಬೇಕು. ನನ್ನಲ್ಲಿ ಕೇಂದ್ರ ಸರಕಾರದ

ಸುಳ್ಯ: ಬಾಡಿಗೆಗೆ ವಾಹನ ಗೊತ್ತುಪಡಿಸಿ ಅಪರಿಚಿತ ಪರಾರಿ- ಮೂವರು ಗೂಡ್ಸ್ ಚಾಲಕರಿಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.   ಮನೆ ಮಾಲಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಈತ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ, ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಡುರಸ್ತೆಯಲ್ಲೇ ಕಾಡುಕೋಣ ತಿರುಗಾಟ – ವಾಹನ ಸವಾರರ ಪರದಾಟ

(ನ್ಯೂಸ್ ಕಡಬ) newskadaba.com ಬೆಳ್ಮಣ್, ಜು. 19. ಕಾಡುಕೋಣವೊಂದು ರಸ್ತೆಗೆ ಅಡ್ಡಲಾಗಿ ಬಂದಿದ್ದು, ವಾಹನ ಸವಾರರು ಭಯಭಿತಗೊಂಡ ಘಟನೆ ಪಿಲಾರುಖಾನ ಕಾಡು ಪ್ರದೇಶದಲ್ಲಿ ನಡೆದಿದೆ. ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತಲೂ ತಂತಿ ಬೇಲಿಯನ್ನು ಅಳವಡಿಸಲಾಗಿದ್ದು, ಆದರೂ ಇದರ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ಬೃಹತ್ ಕಾಡುಕೋಣವೊಂದು ರಸ್ತೆಗೆ ಬಂದು ಮತ್ತೊಂದು ಬದಿಯ ಕಾಡಿಗೆ ಹೋಗಲು ಪರದಾಡಿತು. ಈ ಸಂದರ್ಭ ಬೆಳ್ಮಣ್ ಶಿರ್ವ ಸಾಗುವ ವಾಹನ ಸವಾರರು ಕೆಲಕಾಲ ರಸ್ತೆಯಲ್ಲಿ ವಾಹನವನ್ನು ನಿಲ್ಲಿಸುವಂತಾಗಿತ್ತು. ಸುಮಾರು ಸಮಯದ

ನಡುರಸ್ತೆಯಲ್ಲೇ ಕಾಡುಕೋಣ ತಿರುಗಾಟ – ವಾಹನ ಸವಾರರ ಪರದಾಟ Read More »

ಕರಾವಳಿ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 19. ಬೀಚ್ ನಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದ ಗದಗ ಮೂಲದ ಯುವಕ ಪೀರ್ ಸಾಬ್ ನ ಮೃತದೇಹ ಕಂಚುಗೋಡಯ ಎಂಬಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿಯಾಗಿರುವ ಪೀರ್ ಸಾಬ್(21), 2 ತಿಂಗಳ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದು ಕಾಪು ತಾಲ್ಲೂಕಿನ ಮುದರಂಗಡಿಯಲ್ಲಿ ವಾಸವಾಗಿದ್ದನು. ಮಂಗಳವಾರ ಸಿರಾಜ್ ಎಂಬವರ ಜೊತೆ ಲಾರಿಯಲ್ಲಿ ಪೀರ್ ಸಾಬ್ ಹಾಗೂ ಸ್ನೇಹಿತ ಸಿದ್ಧಪ್ಪ ಊರಿಗೆ ಹೊರಟಿದ್ದರು. ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top