ಕರಾವಳಿ

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್

(ನ್ಯೂಸ್ ಕಡಬ)newskadaba.com ಸುಳ್ಯ, ಜು.19. ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಮರ ಸಮೇತ ಗುಡ್ಡ ಜರಿದು ರಸ್ತೆ ಬಂದ್ ಆಗಿರುವ ಘಟನೆ ಸುಳ್ಯ-ಕಲ್ಲಪ್ಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ನಡೆದಿದೆ. ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು ಮತ್ತು ನಡೆದು ಹೋಗಲು ಸಾಧ್ಯವಿಲ್ಲದ‌ ರೀತಿಯಲ್ಲಿ ರಸ್ತೆ ಬಂದ್ ಆಗಿದೆ ಎನ್ನಲಾಗಿದೆ. ರಸ್ತೆಯಲ್ಲಿ ತಾತ್ಕಾಲಿಕವಾಗಿ ಬಡ್ಡಡ್ಕ-ರಂಗತ್ತಮಲೆ-ಕಲ್ಲಪಳ್ಳಿ ವಾಹನ ಪ್ರಯಾಣಿಸಬಹುದು ಎಂದು ವರದಿ ತಿಳಿಸಿದೆ.

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್ Read More »

ಕರಾವಳಿ
crime, arrest, suspected

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ. ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್ Read More »

ಕರಾವಳಿ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.17. ಮರವಂತೆ ಬೀಚ್ ನಲ್ಲಿ ಯುವಕನೋರ್ವ ಸಮುದ್ರಪಾಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಮುದ್ರಪಾಲಾದ ಯುವಕನನ್ನು ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಬೀಚ್‌ ನಲ್ಲಿ ಈಜಲು ಹೋದಾಗ ಘಟನೆ ಸಂಭವಿಸಿದೆ. ನೀರಿಗೆ ಈಜಲು ಇಳಿದಿದ್ದು, ಈ ವೇಳೆ ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳೀಯರ ತಂಡ ಹಾಗೂ ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್‌ ಕೂಡ ಧ್ವನಿಗೂಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್‌ ಕುಮಾರ್‌ ರೈ, 1994ರಲ್ಲಿ ಡಾ. ಎಂ. ವೀರಪ್ಪ ಮೊಯಿಲಿ ಅವರು ಸಿಎಂ ಆಗಿದ್ದಾಗ ತುಳು ಅಕಾಡೆಮಿ ಸ್ಥಾಪಿಸಿದ್ದು, ಕೇರಳದಲ್ಲಿ ಕೂಡಾ ತುಳು ಭಾಷಾ ಅಕಾಡೆಮಿ ಇದೆ. ಅಮೆರಿಕ ವಿಶ್ವವಿದ್ಯಾಲಯದಲ್ಲಿಯೂ ತುಳು ಭಾಷೆಯಲ್ಲಿ ಅರ್ಜಿ

‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ Read More »

ಕರಾವಳಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..! Read More »

ಕರಾವಳಿ

ಕೃಷಿ ಇಲಾಖೆ ವತಿಯಿಂದ ಬೆಳೆ ಸ್ಪರ್ಧೆ- ಅರ್ಹ ರೈತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.19. ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಮತ್ತು ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಮಟ್ಟಗಳಿಗೆ ಅನ್ವಯಿಸುವಂತೆ ಸಾಮಾನ್ಯ ರೈತರು 100ರೂ. ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರು 25 ರೂ.ಗಳ ನೋಂದಣಿ ಶುಲ್ಕ ಪಾವತಿಸಬೇಕು. ನಿಬಂಧನೆಗಳು: ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ

ಕೃಷಿ ಇಲಾಖೆ ವತಿಯಿಂದ ಬೆಳೆ ಸ್ಪರ್ಧೆ- ಅರ್ಹ ರೈತರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕೃಷಿ ಪಂಡಿತ ಪ್ರಶಸ್ತಿ- ರೈತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ

ಕೃಷಿ ಪಂಡಿತ ಪ್ರಶಸ್ತಿ- ರೈತರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. 2023ನೇ ವರ್ಷದಲ್ಲಿ ಪ್ರಥಮವಾಗಿ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ದಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಬಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವ ಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ ಹಾಗೂ ಇಂಗ್ಲಿಷ್ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳನ್ನು ಸ್ವೀಕರಿಸಲು

ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.    

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top