ಕರಾವಳಿ

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯ ಪ್ರಕರಣ – ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಕಡಬ ತಾಲೂಕು ಪತ್ರಕರ್ತರ ಸಂಘ ಖಂಡಿಸಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ನಿಶಾಂತ್ ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್‌ ಹುಡಿ ಮಾಡಿ ಜೀವ ಬೆದರಿಕೆ‌ ಒಡ್ಡಿರುವ ಘಟನೆಯನ್ನು‌ ಕಡಬ ತಾಲೂಕು ಪತ್ರಕರ್ತರ ಸಂಘ […]

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯ ಪ್ರಕರಣ – ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಂಡನೆ Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಎರಡನೇ ಬಾರಿಗೆ ಎನ್‌ಐಎ ಹೊರಡಿಸಿದೆ.   ಇದು ತಲೆಮರೆಸಿಕೊಂಡಿರುವ ಕೊಲೆಗಟುಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದ್ದು, ಈ ಎಚ್ಚರಿಕೆಗೂ ಬಗ್ಗದಿದ್ದಲ್ಲಿ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಅದರಲ್ಲೂ ಶರಣಾಗದೇ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂಬ ಸುಳಿವು ಲಭ್ಯವಾಗಿದೆ. ಅಲ್ಲದೇ ಆಗಸ್ಟ್ 18ರೊಳಗೆ ಶರಣಾಗಲೇಬೇಕು. ಈ ಹಿಂದೆ ಜೂ.30ರೊಳಗೆ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ Read More »

ಕರಾವಳಿ

ಬೆಳ್ಳಾರೆ: ಮನೆಯ ಅಂಗಳದ ಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ- ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಾವಿಯ ಕುಡಿಯುವ ನೀರಿನಲ್ಲಿ ಪೆಟ್ರೋಲ್ ವಾಸನೆ ಬರುತ್ತಿದ್ದ ಹಿನ್ನೆಲೆ ಅಧಿಕಾರಿಗಳು ಭೇಟಿ ನೀಡಿದ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಪಂಜಿಗಾರಿನ ದಯಾನಂದ ಗೌಡ ಎಂಬವರ ಮನೆಯ ಬಾವಿಯ ನೀರಿನಲ್ಲಿ ಜುಲೈ 8ರಂದು ತೈಲ ಬೆರಕೆಯಾದಂತೆ ಕಂಡುಬರುತ್ತಿತ್ತು. ಈ ಕುರಿತು ಗ್ರಾಮ ಪಂಚಾಯತ್‌ಗೆ ದೂರು ನೀಡಲಾಗಿತ್ತು. ಬಳಿಕ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ನೀರಿನಲ್ಲಿ ಕ್ಲೋರೈಡ್ ಅಂಶ ಕಡಿಮೆ ಇದ್ದು ನೀರು ಕುಡಿಯಲು ಯೋಗ್ಯವಲ್ಲ ಎಂದು

ಬೆಳ್ಳಾರೆ: ಮನೆಯ ಅಂಗಳದ ಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ- ಅಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ
crime, arrest, suspected

ಪರವಾನಗಿ ಇಲ್ಲದೇ ಜಾನುವಾರು ಸಾಗಾಟ- ವಾಹನ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 15. ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರು ವಶಕ್ಕೆ ಪಡೆದ ಘಟನೆ ಅರ್ತಾಜೆ ಎಂಬಲ್ಲಿ ನಡೆದಿದೆ. ಪಿಕಪ್ ವಾಹನದಲ್ಲಿ ಬೆಳ್ಳಾರೆಯಿಂದ ಸೋಣಂಗೇರಿ ಮಾರ್ಗವಾಗಿ ಕೇರಳಕ್ಕೆ ಜಾನುವಾರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅರ್ತಾಜೆ ಎಂಬಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಎಮ್ಮೆ ಹಾಗೂ ಎರಡು ಕರುಗಳಿದ್ದವು ಎನ್ನಲಾಗಿದೆ. ಚಾಲಕನನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಿದಾಗ ಪರವಾನಗಿ ಇಲ್ಲದಿರುವುದು ಕಂಡುಬಂದಿದೆ.

ಪರವಾನಗಿ ಇಲ್ಲದೇ ಜಾನುವಾರು ಸಾಗಾಟ- ವಾಹನ ವಶಕ್ಕೆ Read More »

ಕರಾವಳಿ

ಸ್ಮಶಾನಭೂಮಿ ಪ್ರತಿಭಟನೆ ಸುಖಾಂತ್ಯ- ಪಂಚಾಯತ್ ಬಳಿ ಜಾಗ ನಿಗದಿಪಡಿಸಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ ಮೃತಪಟ್ಟ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ನಡೆಸಿದ ಪ್ರತಿಭಟನೆಗೆ ಮಣಿದ ತಹಶೀಲ್ದಾರ್ ಪಂಚಾಯತ್ ಬಳಿಯೇ ಅಂತ್ಯಕ್ರಿಯೆ ನಡೆಸುವ ಮೂಲಕ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ, ನೆರಿಯ ಗ್ರಾಮದ ಜನತಾ ಕಾಲನಿ ನಿವಾಸಿ ಸಂಜೀವ ಗೌಡ ರವರು ಶುಕ್ರವಾರದಂದು ಮೃತಪಟ್ಟಿದ್ದು, ಅವರ ಅಂತ್ಯ ಸಂಸ್ಕಾರ ನಡೆಸಲು ಇಟ್ಟಾಡಿ ಎಂಬಲ್ಲಿ 25 ವರ್ಷಗಳ ಹಿಂದೆ

ಸ್ಮಶಾನಭೂಮಿ ಪ್ರತಿಭಟನೆ ಸುಖಾಂತ್ಯ- ಪಂಚಾಯತ್ ಬಳಿ ಜಾಗ ನಿಗದಿಪಡಿಸಿದ ಅಧಿಕಾರಿಗಳು Read More »

ಕರಾವಳಿ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ  ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಕುರಿತು ವರದಿಯಾಗಿದೆ. ಗ್ರಾಮಸಭೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಜನಪ್ರತಿನಿಧಿಗಳು ಯಾರೂ ಕೂಡಾ ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ. ಜುಲೈ 14 ರಂದು ಜನತಾ ಕಾಲನಿಯ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ Read More »

ಕರಾವಳಿ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.15. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್’ ಮತ್ತು ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 17-01-2018 ರಂದು ಸರ್ಕಾರ ಹೊರಡಿಸಿದ ಆದೇಶದ ಅನುಸಾರ, ಕಡಬ ತಾಲೂಕು ಕಛೇರಿಯಲ್ಲಿ 1 ಬೆರಳಚ್ಚುಗಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು 3 ಡಿ ಗ್ರೂಪ್ ದರ್ಜೆ ನೌಕರರನ್ನು, ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 15. ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ ಘಟನೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿ ನಡೆದಿದೆ. ಘಟನೆಯಿಂದ ಅದೃಷ್ಟವಶಾತ್ ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪಿದೆ. ಈ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ. ಕದ್ರಿ ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.15. ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ. ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.15. ಕೂಲಿ ಕಾರ್ಮಿಕ ಯುವಕನೋರ್ವ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಾರ್ಕಳ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸೌರವ್ ಕುಮಾರ್ (20) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ದಿನಗೂಲಿ ಕಾರ್ಮಿಕನಾಗಿ ನಿಟ್ಟೆಗೆ ಬಂದಿದ್ದು, ನಿಟ್ಟೆ ಕಾಲೇಜಿನ ಎದುರಿನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು. ಈತ ಹಾಗೂ ಈತನ ಸ್ನೇಹಿತರು ವಾಸಿಸುತ್ತಿದ್ದ ಕಟ್ಟಡದ ಆಸುಪಾಸಿನಲ್ಲಿ ಮಂಗಗಳ ಕಾಟ ಹೆಚ್ಚಾಗಿತ್ತು. ಕೆಲವು ವಸ್ತುಗಳು ಕಾಣಿಸುತ್ತಿರಲಿಲ್ಲ. ಹೀಗಾಗಿ, ಯುವಕರು ಕಾಣೆಯಾದ ವಸ್ತುಗಳನ್ನು ಹುಡುಕಲು ಟೆರೇಸ್

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top