ಕರಾವಳಿ

ಜಲಜೀವನ್ ಮಿಷನ್ ಯೋಜನೆಯಲ್ಲಿ ವಿಳಂಬ ಸಹಿಸುವುದಿಲ್ಲ- ಜಿ.ಪಂ. ಸಿಇಓ ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲೆಯ ಗ್ರಾಮೀಣ ಪ್ರದೇಶದ ಮನೆಗಳಿಗೆ 24 ಗಂಟೆಯೂ ಕುಡಿಯುವ ನೀರು ಪೂರೈಕೆಯ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್‍ ನ ಕಾಮಗಾರಿಗಳಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅವರು ಗುರುವಾರದಂದು ನಗರದ ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳ ಪರಿಶೀಲನಾ […]

ಜಲಜೀವನ್ ಮಿಷನ್ ಯೋಜನೆಯಲ್ಲಿ ವಿಳಂಬ ಸಹಿಸುವುದಿಲ್ಲ- ಜಿ.ಪಂ. ಸಿಇಓ ಡಾ. ಆನಂದ್ Read More »

ಕರಾವಳಿ
crime, arrest, suspected

ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್

(ನ್ಯೂಸ್ ಕಡಬ) newskadaba.com ಬೈಂದೂರು, ಜು. 14. ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಎಂದು ನಂಬಿಸಿ ಹಳದಿ ಬಣ್ಣದ ವಸ್ತುವನ್ನು ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೋಲಿಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಶಿವಮೊಗ್ಗದ ನಿರಂಜನ್ ಎಸ್, ಮಿಲನ್ ಮೋನಿಶ್ ಶೆಟ್ಟಿ ಹಾಗೂ ಪೃಥ್ವಿ ಡಾಮ್ಮಿಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ ಗ್ರೀಸ್ ಎಂದು ಹೇಳಿ 10 ಲಕ್ಷ

ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಖಂಡಿಸಿ ಹಾಗೂ ಇದರ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಗುರುವಾರದಂದು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯ ಮೂಲಕ ಮೌನ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು,

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ Read More »

ಕರಾವಳಿ

ನೇರ ನಗದು ವರ್ಗಾವಣೆ- ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14.  ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02ಕೋಟಿ ರೂ.ಗಳು ಬಿಡುಗಡೆಯಾಗಿದೆ. ಜಮೆ ಕುರಿತ ಮಾಹಿತಿಗೆ https://ahara.kar.nic.in/status2/status-of-dbt.aspx ಲಿಂಕ್ ಪರಿಶೀಲಿಸಬಹುದು. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ

ನೇರ ನಗದು ವರ್ಗಾವಣೆ- ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.14. ಕೋಳಿ ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿದ್ದ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ವಿಟ್ಲದಲ್ಲಿ ನಡೆದಿದೆ. ಪೆರಿಯಲ್ತಡ್ಕ – ಸಾರಡ್ಕ ರಸ್ತೆಯ ವಿಟ್ಲ ಸಮೀಪದ ಕೂರೇಲು ಎಂಬಲ್ಲಿ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆಯ ಕೆಳಗಿನ ಪ್ರದೇಶದಲ್ಲಿದ್ದ ಹಂಚಿನ ಮನೆಯ ಮೇಲ್ಛಾವಣಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಮನೆಯೊಳಗೆ ಮಲಗಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಹೊರಬರಲಾರದೆ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ Read More »

ಕರಾವಳಿ, ಕರ್ನಾಟಕ

ಶಾಲೆಯ ಬಳಿ ಬಾರ್ ತೆರೆಯದಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಇಲ್ಲಿನ ಬಾಳೆಪುಣಿ ಗ್ರಾಮದ ಶಾಲೆಯೊಂದರ ಬಳಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯುವುದನ್ನು ವಿರೋಧಿಸಿ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬುಧವಾರದಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಲಾ (ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರ) ಆಡಳಿತ ಮಂಡಳಿ ಅಧ್ಯಕ್ಷ ರಾಜಾರಾಂ ಭಟ್, ರೆಸ್ಟೋರೆಂಟ್ ಮುಚ್ಚುವವರೆಗೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು. ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬಾರ್& ರೆಸ್ಟೋರೆಂಟ್‌ಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸಂಜೆ ಮನೆಗೆ ಹಿಂದಿರುಗುವಾಗ ವಿಶೇಷವಾಗಿ ಹುಡುಗಿಯರಿಗೆ ಅನಾನುಕೂಲವಾಗಿದೆ ಎಂದು ಆರೋಪಿಸಿದರು.

ಶಾಲೆಯ ಬಳಿ ಬಾರ್ ತೆರೆಯದಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕರಾವಳಿ

ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಗೃಹಸಚಿವ ಪರಮೇಶ್ವರ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ಕರ್ನಾಟಕ ಮಾತ್ರವಲ್ಲದೇ ಇಡೀ ದೇಶವೇ ಮಾದಕ ದ್ರವ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣಕ್ಕೆ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಕರ್ನಾಟಕ ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮಾದಕವಸ್ತು ಕಳ್ಳಸಾಗಣೆ ಗಂಭೀರ ಸಮಸ್ಯೆಯಾಗಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ದ್ರವ್ಯಗಳ ಕಳ್ಳಸಾಗಾಣಿಕೆಗೆ ಅನುಮತಿಸಬಾರದು. ಮಾದಕ ದ್ರವ್ಯದ ಬಗ್ಗೆ ಗಮನಹರಿಸಲು ಮತ್ತು ಆಯಾ ಜಿಲ್ಲೆಗಳಲ್ಲಿ ಮಾದಕ ದ್ರವ್ಯ

ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಗೃಹಸಚಿವ ಪರಮೇಶ್ವರ್ ಸೂಚನೆ Read More »

ಕರಾವಳಿ, ಕರ್ನಾಟಕ

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಸುಳ್ಯಕ್ಕೆ ಭೇಟಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 13.  ಸುಳ್ಯ ತಾಲೂಕು ಪಂಚಾಯತ್‍ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಬುಧವಾರದಂದು ಭೇಟಿ ನೀಡಿದರು. ನಂತರ ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕ, ಅಮೃತ ಮುಕ್ತಿಧಾಮ, ಅಮೃತ ಉದ್ಯಾನವನ ಎಎಒ ಕಾಮಗಾರಿ, ಅರಂತೋಡು ಗ್ರಾಮ ಪಂಚಾಯತ್ ಗ್ರಂಥಾಲಯ, ಅಂಗನವಾಡಿ ಹಾಗೂ ಅರಂಬೂರು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿ,

ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಸುಳ್ಯಕ್ಕೆ ಭೇಟಿ- ಪರಿಶೀಲನೆ Read More »

ಕರಾವಳಿ

ಉಚಿತ ಬಸ್ ಪ್ರಯಾಣಕ್ಕೆ ಗುರುತಿನ ಚೀಟಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13.  ರಾಜ್ಯದ ಎಲ್ಲಾ ಮಹಿಳೆಯರಿಗೆ (ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮತ್ತು ತೃತೀಯ ಲಿಂಗಿಗಳು ಒಳಗೊಂಡಿರುವಂತೆ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ, ಸಾಮಾನ್ಯ ಸಾರಿಗೆ ಹಾಗೂ ವೇಗದೂತ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿದೆ. ಜೂನ್11ರಿಂದ ಶಕ್ತಿ ಯೋಜನೆ ಜಾರಿಯಾಗಿರುತ್ತದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ಆಧಾರ್ ಕಾರ್ಡ್, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ವಾಸಸ್ಥಳ

ಉಚಿತ ಬಸ್ ಪ್ರಯಾಣಕ್ಕೆ ಗುರುತಿನ ಚೀಟಿ ಕಡ್ಡಾಯ Read More »

ಕರಾವಳಿ
Scroll to Top