ಕರಾವಳಿ

crime, arrest, suspected

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ಮಟ್ಕಾ ಆಟವಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಗರದ ಬರ್ಕೆ ಕಂಬಳದ ಬಳಿ ನಡೆದಿದೆ. ಬಂಧಿತರನ್ನು ಮಣ್ಣಗುಡ್ಡದ ಪ್ರಶಾಂತ್, ಅಶೋಕನಗರದ ದಿನೇಶ್ ಕುಮಾರ್, ಉರ್ವ ಹೊಯ್ಗೆಬೈಲ್‌ನ ಅನಿಲ್ ಹಾಗೂ ಮಡಿಕೇರಿಯ ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು ಸಹಿತ 12,480 ರೂಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ನೂತನ ಡಿಸಿ ಆಗಿ ವಿದ್ಯಾಕುಮಾರಿ ನೇಮಕ| ಕೂರ್ಮಾರಾವ್ ಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜು. 13. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೂರ್ಮಾರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೊದಲು ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ನೂತನ ಡಿಸಿ ಆಗಿ ವಿದ್ಯಾಕುಮಾರಿ ನೇಮಕ| ಕೂರ್ಮಾರಾವ್ ಗೆ ವರ್ಗಾವಣೆ Read More »

ಕರಾವಳಿ
crime, arrest, suspected

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ- ಓರ್ವ ಅಂದರ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಕೊರಗಕಲ್ಲು

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ- ಓರ್ವ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿಯನ್ನಿ ಬಂಟ್ವಾಳ ತಾಲೂಕಿನ ಗೋಳ್ತಮಜಲುವಿನ ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ. ಈತ 2019ರ ಆ. 30ರಂದು ಸಂಜೆ ಬಾಲಕಿಯು ವಿಟ್ಲದಿಂದ ಬಸ್‌ನಲ್ಲಿ ತೆರಳಿ ಕೆದುವಾರು ಬಸ್ ತಂಗುದಾಣದ ಬಳಿ ಇಳಿದು

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕುಂಬಳೆ, ಜು. 13. ಸಾಯುವುದಾಗಿ ಗೆಳೆಯರಿಗೆ ಹೇಳಿ ಬಳಿಕ ಮೊಬೈಲ್ ಸ್ವಿಚ್ಢ್ ಆಫ್ ಮಾಡಿದ್ದ ಬಂಬ್ರಾಣ ನಿವಾಸಿ ಯುವಕ‌ನ ಮೃತದೇಹ ಮಂಗಳೂರಿನ‌ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬಂಬ್ರಾಣ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಶ್‌ ಕುಮಾರ್‌(28) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಮನೆಯವರು ಆಸ್ಪತ್ರೆಗೆ ತೆರಳಿ ಗುರುತು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಮೃತರು ತಂದೆ, ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಜು. 13. ಆನೆ ದಾಳಿಯಿಂದಾಗಿ ಬೃಹತ್ ಮರವೊಂದು ವಿದ್ಯುತ್ ತಂತಿಯ ಮೇಲೆ ಉರುಳಿಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಹಾನಿಗೊಂಡಿರುವ ಘಟನೆ ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕ ಬಾಂತಾಜೆ ಸಂಪರ್ಕ ರಸ್ತೆಯ ಬಾಂತಾಜೆ ಸಮೀಪ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿನ ಬೃಹತ್ ಈನ್ದ್ ಮರವನ್ನು ಕಾಡಾನೆ ಉರುಳಿಸಿ ಹಾಕಿ ಪುಡಿಗೈದಿದೆ. ಮರವು ವಿದ್ಯುತ್ ತಂತಿಯ ಮೇಲೆಯೇ ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮೂಡುಶೆಡ್ಡೆ ಎಂಬಲ್ಲಿ ವರದಿಯಾಗಿದೆ. ಬಂಧಿತರನ್ನು ಪಿಲಿಕುಳ ಸಮೀಪದ ನಿವಾಸಿ ಶಾರೂಕ್ ಮತ್ತು ತೋಕೂರಿನ ಜಗದೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕಾಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಜಿಲ್ಲಾಧಿಕಾರಿ ಭೇಟಿ; ಇಲಾಖಾಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪ ತಡೆಗೆ ಗ್ರಾಮ ಮಟ್ಟದಲ್ಲೇ ತಯಾರಿ ನಡೆಸಿ- ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಕಡಬ, ಜು. 13. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ರವರು ಬುಧವಾರದಂದು ಕಡಬ ತಾಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಇಲಾಖಾಧಿಕಾರಿಗಳ ಜೊತೆ ಪ್ರಾಕೃತಿಕ ವಿಕೋಪಗಳ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅಲ್ಲಿ ಸಮಸ್ಯೆಗಳು ಉದ್ಭವವಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು. ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಮುಂದೆ ಅನಾಹುತ

ಕಡಬ: ಜಿಲ್ಲಾಧಿಕಾರಿ ಭೇಟಿ; ಇಲಾಖಾಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪ ತಡೆಗೆ ಗ್ರಾಮ ಮಟ್ಟದಲ್ಲೇ ತಯಾರಿ ನಡೆಸಿ- ಮುಲ್ಲೈ ಮುಗಿಲನ್ Read More »

ಕರಾವಳಿ

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 12. ಅನಾರೋಗ್ಯದಿಂದಾಗಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜೆ ರವರು ಬುಧವಾರದಂದು ನಿಧನರಾದರು.   ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಅನಾರೋಗ್ಯದಿಂದಾಗಿ ಕಳೆದ ಒಂದು ವರ್ಷದಿಂದ ರಜೆಯಲ್ಲಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಕೃಷ್ಣಪ್ಪ

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊರಗಜ್ಜನ ಕಟ್ಟೆಗೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ- ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಸಂಘಟನೆಗಳ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 12. ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ದೇಗುಲಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಇದರ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಹೆಗ್ಡೆ ಅವರು ನೀಡಿದ ದೂರಿನಂತೆ ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮೊದಲು ಕೊರಗಜ್ಜ ಕಟ್ಟೆಯು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಸರಕಾರಿ ಜಮೀನಿನಲ್ಲಿ ಇದ್ದು, ಅದನ್ನು ಊರಿನ ಹಿರಿಯರು ಸೇರಿಕೊಂಡು

ಕೊರಗಜ್ಜನ ಕಟ್ಟೆಗೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ- ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಸಂಘಟನೆಗಳ ಆಗ್ರಹ Read More »

ಕರಾವಳಿ
Scroll to Top