ಕರಾವಳಿ

ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 12. ಇಲ್ಲಿನ ಕಡಬ ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಡಬ ಹಾಗೂ ಪಂಜ ಉಪವಲಯ ಅರಣ್ಯಾಧಿಕಾರಿಗಳಾದ ಅಜಿತ್ ಕುಮಾರ್ ಕೆ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಿಡ ಮರಗಳಿಂದ ಕೂಡಿದ ವನ ಸಂಪತ್ತು ನಮ್ಮ ಉಸಿರಿಗೆ ವರವಿದ್ದಂತೆ, ಯುವ ಪೀಳಿಗೆಯಲ್ಲಿ ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಹವ್ಯಾಸ ಹಾಗೂ ಜವಾಬ್ದಾರಿ ಮೂಡಬೇಕು. ಈ ಮೂಲಕ […]

ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ದಕ್ಷಿಣ ಕನ್ನಡ ಆಪರ ಜಿಲ್ಲಾಧಿಕಾರಿಯಾಗಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದುವರೆಗೆ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದಕ್ಷಿಣ ಕನ್ನಡ ಆಪರ ಜಿಲ್ಲಾಧಿಕಾರಿಯಾಗಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ Read More »

ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ- 21 ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ವಾಟ್ಸಾಪ್, ಫೇಸ್‌ ಬುಕ್, ಇನ್ಸ್ಟಾಗ್ರಾಂ ಹಾಗೂ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳನ್ನು ರವಾನಿಸುವವರ ವಿರುದ್ಧ ಒಂದು ತಿಂಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್‌ ಕುಲದೀಪ್ ಕುಮಾರ್‌ ಆರ್ ಜೈನ್‌ ತಿಳಿಸಿದ್ದಾರೆ. ಯಾವುದೇ ಒಂದು ಧರ್ಮಕ್ಕೆ ಸಂಬಂಧಿಸಿದ ಪರ ಮತ್ತು ವಿರೋಧ ಸಂದೇಶಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಹಾಗೂ ಅವುಗಳ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಗಳ ಮೇಲೆ

ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ- 21 ಎಫ್ಐಆರ್ ದಾಖಲು Read More »

ಕರಾವಳಿ

ಟ್ರೋಲ್ ಪೇಜ್ ಮೂಲಕ ಸಂಘಟನೆಯ ವಿರುದ್ದ ಮಾನಹಾನಿಕರ ಪೋಸ್ಟ್- ಬಜರಂಗದಳದಿಂದ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ನಿರಂತರವಾಗಿ ‘ಕರಾವಳಿ ರಶೀದ್’ ಎಂಬ ಟ್ರೋಲ್ ಪೇಜ್ ಮುಖಾಂತರ ಬಜರಂಗದಳದ ಕುರಿತು ಅಶ್ಲೀಲ, ಮಾನಹಾನಿಕರ ಸುಳ್ಳು ಸುದ್ದಿ ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಜಿಲ್ಲಾ ಘಟಕದ ಸಂಚಾಲಕ ನವೀನ್‌ ಮೂಡುಶೆಡ್ಡೆಯವರು ಮಂಗಳವಾರದಂದು ದೂರು ನೀಡಿದ್ದಾರೆ. ದೂರಿನ ಪ್ರಕಾರ ‘ಬಜರಂಗದಳ ಸಂಘಟನೆಯನ್ನು ಅವಮಾನ ಮಾಡುವುದಲ್ಲದೇ, ಮುಖಂಡರಾದ ಶರಣ್‌ ಪಂಪ್‌ವೆಲ್‌ ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಅವರ ಮಾನಹಾನಿ ಮಾಡಲಾಗುತ್ತಿದೆ. ಇದು ಹಿಂದೂ- ಮುಸ್ಲಿಮರ ನಡುವೆ ದ್ವೇಷ ಬಿತ್ತುವ

ಟ್ರೋಲ್ ಪೇಜ್ ಮೂಲಕ ಸಂಘಟನೆಯ ವಿರುದ್ದ ಮಾನಹಾನಿಕರ ಪೋಸ್ಟ್- ಬಜರಂಗದಳದಿಂದ ದೂರು Read More »

ಕರಾವಳಿ

ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು 12. ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿನಲ್ಲಿ ನಡೆದಿದೆ. ಸಜಿಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದ್ದು, ಈ ಪ್ಯಾಕ್ಟರಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಮೆಷಿನರಿಗಳು, ತಲೆದಿಂಬು ಹಾಗೂ ಹಾಸಿಗೆಗಳು ಇದ್ದವು ಎಂದೆನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಲೋಕ್ ಅದಾಲತ್ 19,666 ಪ್ರಕರಣಗಳು ಇತ್ಯರ್ಥ- 22,19,35,765 ಕೋಟಿ ರೂ.ಪರಿಹಾರ ವಸೂಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 50 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 24,303 ಪ್ರಕರಣಗಳು ಪರಿಗಣಿಸಲಾಗಿತ್ತು. ಅದರಲ್ಲಿ 19,666 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 22,19,35,765 ಕೋಟಿ ರೂ.ಗಳ

ರಾಷ್ಟ್ರೀಯ ಲೋಕ್ ಅದಾಲತ್ 19,666 ಪ್ರಕರಣಗಳು ಇತ್ಯರ್ಥ- 22,19,35,765 ಕೋಟಿ ರೂ.ಪರಿಹಾರ ವಸೂಲು Read More »

ಕರಾವಳಿ

ಅನಧಿಕೃತ ಸಂಪರ್ಕ ಕಡಿತಗೊಳಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ಇಲ್ಲಿನ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಹಲವು ಬಹುಮಹಡಿ ವಸತಿ ಕಟ್ಟಡಗಳು ತಮ್ಮ ಕಟ್ಟಡದಲ್ಲಿ ಶೇಖರಣೆಯಾಗುವ ಮಳೆ ನೀರನ್ನು ಚರಂಡಿಗೆ ಬಿಡದೇ ಪಾಲಿಕೆಯ ಒಳಚರಂಡಿ ಸಂಪರ್ಕ ಜಾಲಕ್ಕೆ ಸಂಪರ್ಕಿಸಿರುವುದು ಕಂಡುಬಂದಿರುತ್ತವೆ. ಇದರಿಂದಾಗಿ ಒಳಚರಂಡಿ ಜಾಲದ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ದೃಶ್ಯ ತ್ಯಾಜ್ಯವು ಹರಿಯುತ್ತಿದ್ದು, ಮ್ಯಾನ್ ಹೋಲ್‍ಗಳಲ್ಲಿ ದ್ರವ್ಯ ತ್ಯಾಜ್ಯವು ಹೊರಸೂಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ ಕಾರಣ ಇದೇ ಜು. 27ರೊಳಗೆ ಅನಧಿಕೃತವಾಗಿ ಮಳೆ ನೀರನ್ನು ಒಳಚರಂಡಿ, ಜಾಲಕ್ಕೆ ಸಂಪರ್ಕಿಸಿರುವುದನ್ನು ತೆರವುಗೊಳಿಸುವಂತೆ ಅಂತಿಮ

ಅನಧಿಕೃತ ಸಂಪರ್ಕ ಕಡಿತಗೊಳಿಸಲು ಸೂಚನೆ Read More »

ಕರಾವಳಿ

ಪಶುಸಂಗೋಪನಾ ಇಲಾಖೆಯಿಂದ ಪರವಾನಗಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12.  ಕರ್ನಾಟಕ ಕುಕ್ಕುಟ ಮತ್ತು ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987ರ ಪ್ರಕಾರ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು, ವಿತರಕರು ಮತ್ತು ಮಾರಾಟಗಾರರು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ ಪಡೆಯುವುದು ಮತ್ತು ನವೀಕರಿಸಿಕೊಳ್ಳುವುದು ಕಡ್ಡಾಯ. ಕುಕ್ಕುಟ ಮತ್ತು ಪಶು ಆಹಾರ ಉತ್ಪಾದನೆ, ಮಾರಾಟ, ವಿತರಣೆ ವ್ಯವಹಾರದಲ್ಲಿ ತೊಡಗಿರುವವರು ಕೂಡಲೇ ಸ್ಥಳೀಯ ಪಶುವೈದ್ಯ ಅಧಿಕಾರಿಗಳು ಹಾಗೂ ಸಹಾಯಕ ಕುಕ್ಕುಟ/ಪಶು ಆಹಾರ ಗುಣನಿಯಂತ್ರಣಾಧಿಕಾರಿಯನ್ನು ಸಂಪರ್ಕಿಸಿ

ಪಶುಸಂಗೋಪನಾ ಇಲಾಖೆಯಿಂದ ಪರವಾನಗಿ ಕಡ್ಡಾಯ Read More »

ಕರಾವಳಿ

ತಾರಸಿ ತೋಟದ ಕುರಿತು ಜು.15ರಂದು ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,  ಜು. 12.  ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) (ಸಂಯೋಜಕರು:ಬ್ಯಾಂಕ್ ಆಫ್ ಬರೋಡ) ಹಾಗೂ ಸಿರಿ ತೋಟಗಾರಿಕೆ ಸಂಘದ (ರಿ) ಜಂಟಿ ಸಹಯೋಗದಲ್ಲಿ ಇದೇ ಜು.15ರ ಗುರುವಾರದಂದು ಬೆಳಿಗ್ಗೆ 10 ಗಂಟೆಯಿಂದ ತಾರಸಿ ತೋಟ, ಕೈತೋಟ ಮತ್ತು ಗ್ರಾಪ್ಟಿಂಗ್ ಕುರಿತು ಉಚಿತ ತರಬೇತಿ ನಗರದ ಜ್ಯೋತಿ ಸರ್ಕಲ್ ಬಳಿಯಿರುವ ಬ್ಯಾಂಕ್ ಆಫ್ ಬರೋಡ ಬಿಲ್ಡಿಂಗ್ ನ, 5ನೇ ಮಹಡಿಯಲ್ಲಿರುವ, ವಿಜಯ ಟವರ್ಸ್ ನಲ್ಲಿ ನಡೆಯಲಿದೆ. ಆಸಕ್ತರು ಜು.14ರೊಳಗೆ ನಗರದ ಬೆಂದೂರ್‍ವೆಲ್ ನಲ್ಲಿರುವ ಸಿರಿ ತೋಟಗಾರಿಕೆ

ತಾರಸಿ ತೋಟದ ಕುರಿತು ಜು.15ರಂದು ಉಚಿತ ತರಬೇತಿ Read More »

ಕರಾವಳಿ

ಪಿಂಚಣಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ- ರಾಜರಾಜೇಶ್ವರಿ

(ನ್ಯೂಸ್ ಕಡಬ) newskadaba.com ಮಂಗಳೂರು,  ಜು. 12. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳ ಸಭೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಅದಾಲತ್‍ನಲ್ಲಿ 50ಕ್ಕೂ ಹೆಚ್ಚಿನ ಪಿಂಚಣಿದಾರರು ಭಾಗವಹಿಸಿದ್ದರು. ಜಿಲ್ಲೆಯ ಹಲವು ಪಿಂಚಣಿದಾರರು ಲಿಖಿತವಾಗಿ ಸಮಸ್ಯೆಗಳನ್ನು ತಿಳಿಸಿದರು. ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಡೆಪ್ಯುಟಿ ಅಕೌಂಟೆಂಟ್ ಜನರಲ್ ಆರ್. ರಾಜರಾಜೇಶ್ವರಿ ಅವರು ಮಾತನಾಡಿ,

ಪಿಂಚಣಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ- ರಾಜರಾಜೇಶ್ವರಿ Read More »

ಕರಾವಳಿ
Scroll to Top