ಕರಾವಳಿ

ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ಒದಗಿಸಲು ಕೂಡಲೇ ಕ್ರಮವಹಿಸಿ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿ/ಮ್ಯಾನ್ಯುವಲ್ ಸ್ಕ್ಯಾವೆಂಜರ್‍ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ಮಹಾನಗರ ಪಾಲಿಕೆ ಹಾಗೂ ನಗರ […]

ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ಒದಗಿಸಲು ಕೂಡಲೇ ಕ್ರಮವಹಿಸಿ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಕರಾವಳಿ

ಕನ್ನಡ ಪ್ರವೇಶ, ಕಾವ, ಜಾಣ-ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಕನ್ನಡ ಸಾಹಿತ್ಯ ಪರಿಷತ್ ನಡೆಸುವ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2023ನೇ ಸಾಲಿನ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು 2023ರ ಆಗಸ್ಟ್ 31 ಕೊನೆಯ ದಿನ. 2023ರ ಸೆಪ್ಟೆಂಬರ್ 15ರ ವರೆಗೆ ದಂಡ ಶುಲ್ಕ 50ರೂ. ಗಳನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಪರೀಕ್ಷಾ

ಕನ್ನಡ ಪ್ರವೇಶ, ಕಾವ, ಜಾಣ-ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಇಂದು ವಿಶ್ವ ಜನಸಂಖ್ಯಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ವೈದ್ಯಾಧಿಕಾರಿ ಕಚೇರಿ, ರಾಷ್ಟ್ರೀಯ ಸೇವಾ ಯೋಜನೆ, ಸ್ನಾತಕೋತ್ತರ ವಿಭಾಗಗಳು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ-2023 ಕಾರ್ಯಕ್ರಮ ಇಂದು ಬೆಳಗ್ಗೆ 10 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ

ಇಂದು ವಿಶ್ವ ಜನಸಂಖ್ಯಾ ದಿನಾಚರಣೆ Read More »

ಕರಾವಳಿ

ಇಂದು ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪಿಂಚಣಿದಾರರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ಸಂಬಂಧಿಸಿದ ಪಿಂಚಣಿ ಅದಾಲತ್ ನಡೆಯಲಿದೆ. ಮೂರು ಜಿಲ್ಲೆಗಳಲ್ಲಿ ವಾಸವಿರುವ ಪಿಂಚಣಿದಾರರು ಈ ಅದಾಲತ್‍ನಲ್ಲಿ ಭಾಗವಹಿಸಿ, ತಮ್ಮ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಪಿಂಚಣಿ ಅದಾಲತ್ Read More »

ಕರಾವಳಿ

ಅಟ್ರಾಸಿಟಿ ಪ್ರಕರಣ ವರದಿಯಾದ ಕೂಡಲೇ ಪರಿಶೀಲಿಸಿ ವರದಿ ನೀಡಿ ➤ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಜಿಲ್ಲೆಯಲ್ಲಿ ಜಾತಿ ನಿಂದನೆ ಹಾಗೂ ದೌರ್ಜನ್ಯ ಪ್ರಕರಣ ವರದಿಯಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅಟ್ರಾಸಿಟಿ ಪ್ರಕರಣ ವರದಿಯಾದ

ಅಟ್ರಾಸಿಟಿ ಪ್ರಕರಣ ವರದಿಯಾದ ಕೂಡಲೇ ಪರಿಶೀಲಿಸಿ ವರದಿ ನೀಡಿ ➤ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಕರಾವಳಿ

ಕೆಮ್ಮಾರ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ನೋಟ್ ಪುಸ್ತಕ ಮತ್ತು ಕೊಡೆ ವಿತರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 11. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಕಾರದಿಂದ ಅರ್ಹ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಛತ್ರಿ ವಿತರಿಸಲಾಯಿತು. ದಾನಿಗಳಾದ ಮೈಸೂರು ಎಸ್‌ಎಲ್‌ವಿ ಬುಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಗ್ರೂಪಿನ ಮಾಲೀಕರಾದ ದಿವಾಕರ ದಾಸ್ ಮೈಸೂರು ರವರು ಶಾಲೆಯ 45 ಅರ್ಹ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಸಹಕರಿಸಿದರು. ಮಾತ್ರವಲ್ಲದೇ ಕೆಮ್ಮಾರ ಶಾಲೆಯ ಹಳೇ ವಿದ್ಯಾರ್ಥಿ ಹರಿನಾರಾಯಣ ಮತ್ತು ಅವರ ಧರ್ಮ ಪತ್ನಿ ಮಾಜಿ ಪಂಚಾಯತ್

ಕೆಮ್ಮಾರ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ನೋಟ್ ಪುಸ್ತಕ ಮತ್ತು ಕೊಡೆ ವಿತರಣೆ Read More »

ಕರಾವಳಿ

ಕಡಬ: ಜೈನಮುನಿಯ ಹತ್ಯೆ ಖಂಡಿಸಿ ವಿಹಿಂಪ ಪ್ರತಿಭಟನೆ ➤ ಸೂಕ್ತ ತನಿಖೆಗೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು. 10. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಕಡಬ ತಾಲೂಕು ವಿಶ್ವ ಹಿಂದೂ ಪರಿಷತ್ ವತಿಯಿಂದ ಇಂದು ಸಂಜೆ ಕಡಬ ಪೇಟೆಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ್ ರಂಜಿಲಾಡಿ ಬೀಡು ಅವರು, ಜೈನ ಧರ್ಮ ಹಿಂದಿನಿಂದಲೂ ಅಹಿಂಸಾ ತತ್ವದ ಮೇಲೆ ನೆಲೆ ನಿಂತಿದ್ದು ನಮ್ಮದೇ ಧರ್ಮದ ಮುನಿ

ಕಡಬ: ಜೈನಮುನಿಯ ಹತ್ಯೆ ಖಂಡಿಸಿ ವಿಹಿಂಪ ಪ್ರತಿಭಟನೆ ➤ ಸೂಕ್ತ ತನಿಖೆಗೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ Read More »

ಕರಾವಳಿ

ಕಡಬ: ಗರ್ಭವತಿಯಾದ ಅಪ್ರಾಪ್ತೆ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಜು. 10. ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರಗೈದು ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಪೋಕ್ಸೋ ಪ್ರಕರಣದಡಿ ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಕೋಡಿಂಬಾಳದಿಂದ ತಡವಾಗಿ ವರದಿಯಾಗಿದೆ. ಬಂಧಿತನನ್ನು ಕೋಡಿಂಬಾಳ ಗ್ರಾಮದ ನಿಶಾಂತ್ ಎಂದು ಗುರುತಿಸಲಾಗಿದೆ. ಈತ ತನ್ನ ಸಂಬಂಧಿ 14ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿ ಎಂಟು ತಿಂಗಳ ಗರ್ಭಕ್ಕೆ ಕಾರಣಾಗಿದ್ದ ಎಂದು ಅರೋಪಿಸಲಾಗಿದೆ. ಬಾಲಕಿಯು ತಾಯಿ ಜೊತೆ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾದ ಘಟನೆ ಬೆಳಕಿಗೆ ಬಂದಿದೆ. ಶಾಲಾ ಬಾಲಕಿ ಎಂಟು ತಿಂಗಳ

ಕಡಬ: ಗರ್ಭವತಿಯಾದ ಅಪ್ರಾಪ್ತೆ ➤ ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮಳೆ ಹಿನ್ನೆಲೆ- ನೂಚಿಲದ 8 ಕುಟುಂಬಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 10. ಕುಕ್ಕೇ ಸುಬ್ರಹ್ಮಣ್ಯದಿಂದ ಸ್ವಲ್ ದೂರದ ನೂಚಿಲ ಎಂಬಲ್ಲಿರುವ ಪರ್ವತ ತಪ್ಪಲಿನ 8 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ತಾಲೂಕು ಆಡಳಿತ ಸೂಚಿಸಿದ್ದು, ಅದರಂತೆ ಅವರನ್ನು ಜು. 08ರಂದು ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಆದಿ ಸುಬ್ರಹ್ಮಣ್ಯ ದೇವಸ್ಥಾನ ಬಳಿಯ ನೂಚಿಲ ಗುಡ್ಡದ ಬುಡದಲ್ಲಿ 8 ಕುಟುಂಬಗಳು ಮನೆ ಕಟ್ಟಿಕೊಂಡು ವಾಸವಾಗಿದ್ದು, ಧಾರಾಕಾರ ಮಳೆಯ ನಡುವೆ ಗುಡ್ಡ ಕುಸಿದು ಬೀಳುವ ಅಪಾಯ ಹೆಚ್ಚಾಗಿರುವ ಹಿನ್ನೆಲೆ ಕುಟುಂಬಗಳನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಯ

ಸುಬ್ರಹ್ಮಣ್ಯ: ಮಳೆ ಹಿನ್ನೆಲೆ- ನೂಚಿಲದ 8 ಕುಟುಂಬಗಳ ಸ್ಥಳಾಂತರ Read More »

ಕರಾವಳಿ

ಜೈನಮುನಿ ಹತ್ಯೆ- ಕಠಿಣ ಕ್ರಮಕ್ಕೆ ಒತ್ತಾಯ ➤ ಮಂಗಳೂರಿನಲ್ಲಿ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೈದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮತ್ತು ಜೈನ ಸಮಾಜದ ನೇತೃತ್ವದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೂಡುಬಿದಿರೆಯ ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಕ್ಲಾಕ್‌ ಟವರ್‌ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಜೈನ ಸಮುದಾಯದ ಪ್ರಮುಖರಾದ

ಜೈನಮುನಿ ಹತ್ಯೆ- ಕಠಿಣ ಕ್ರಮಕ್ಕೆ ಒತ್ತಾಯ ➤ ಮಂಗಳೂರಿನಲ್ಲಿ ಮೌನ ಪ್ರತಿಭಟನೆ Read More »

ಕರಾವಳಿ
Scroll to Top