ಕರಾವಳಿ

ಫ್ಲ್ಯಾಟ್‌ ನ ಕಿಟಕಿಯಲ್ಲಿ ಸಿಲುಕಿದ್ದ ವಿಶೇಷ ಚೇತನ ಬಾಲಕನ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜು. 10. ವಸತಿ ಸಮುಚ್ಚಯದ ಪ್ಲ್ಯಾಟ್ ನ ಕಿಟಕಿಯೊಂದರಲ್ಲಿ ವಿಶೇಷಚೇತನ ಬಾಲಕನೋರ್ವ ಸಿಲುಕಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಇಂದು ನಡೆದಿದೆ. ವಿಶೇಷಚೇತನನಾಗಿದ್ದ ಎಂಟು ವರ್ಷದ ಬಾಲಕ ಆರುಷ್ ಅಪಾರ್ಟ್ಮೆಂಟ್‌ ನ ಹನ್ನೊಂದನೇ ಮಹಡಿಯ ಬಾಲ್ಕನಿ ಮೂಲಕ ಹೊರ ಹೋಗಿ ಹತ್ತನೇ ಪ್ಲೋರ್‌ ನ ಕಿಟಕಿ ಫೋರಂ‌ನಲ್ಲಿ ಸಿಕ್ಕಿ ಅಪಾಯದಲ್ಲಿ ಸಿಲುಕಿದ್ದ. ಈ ಕುರಿತು ಮಾಹಿತಿ ದೊರೆತ ತಕ್ಷಣ ಸಕಾಲಕ್ಕೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ […]

ಫ್ಲ್ಯಾಟ್‌ ನ ಕಿಟಕಿಯಲ್ಲಿ ಸಿಲುಕಿದ್ದ ವಿಶೇಷ ಚೇತನ ಬಾಲಕನ ರಕ್ಷಣೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

(ನ್ಯೂಸ್ ಕಡಬ) newskadaba.com ಬೆಳ್ಮಣ್, ಜು. 10.ಚಾಲಕನ ನಿಯಂತ್ರಣ ತಪ್ಪಿದ ಕಾರೊಂರು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ಭಾನುವಾರದಂದು ತಡರಾತ್ರಿ ನಡೆದಿದೆ. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು Read More »

ಕರಾವಳಿ

ಪುತ್ತಿಲ ಪರಿವಾರದಿಂದ ನಿಡ್ಪಳ್ಳಿ ಗ್ರಾ.ಪಂ. ಅಭ್ಯರ್ಥಿಯಾಗಿ ಜಗನ್ನಾಥ್ ರೈ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಜು. 10. ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ಅವರು ನಿಡ್ಪಳ್ಳಿ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕುಮಾರ್ ನರಸಿಂಹ ಭಟ್, ದೇವಸ್ಯ ಶ್ರೀನಿವಾಸ್

ಪುತ್ತಿಲ ಪರಿವಾರದಿಂದ ನಿಡ್ಪಳ್ಳಿ ಗ್ರಾ.ಪಂ. ಅಭ್ಯರ್ಥಿಯಾಗಿ ಜಗನ್ನಾಥ್ ರೈ ನಾಮಪತ್ರ ಸಲ್ಲಿಕೆ Read More »

ಕರಾವಳಿ

ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಅಮೃತ್ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಜುಲೈ 14ರಂದು ನಡೆಯಲಿರುವ ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯ (ಬ್ಯಾಸ್ಟಿಲ್‌ ಡೇ) ಕವಾಯತಿನಲ್ಲಿ ಭಾರತೀಯ ನೌಕಾಪಡೆ ತುಕಡಿಯ ಭಾಗವಾಗಿ ಮಂಗಳೂರು ಮೂಲದ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ದಿಶಾ ಅಮೃತ್‌ ಪಾಲ್ಗೊಳ್ಳಲಿರುವರು. ಜು. 14ರಂದು ನಡೆಯಲಿರುವ ಬಾಸ್ಟಿಲ್‌ ಪರೇಡ್‌ ನಲ್ಲಿ ಭಾಗವಹಿಸಲು ಈಗಾಗಲೇ ನೌಕಾಪಡೆಯ ನಾಲ್ವರು ಅಧಿಕಾರಿಗಳು ಹಾಗೂ 64 ನಾವಿಕರ ತಂಡ ಪ್ಯಾರಿಸ್‌ ತಲುಪಿದ್ದು, ಈ 4 ಅಧಿಕಾರಿಗಳ ಪೈಕಿ ದಿಶಾಕೂಡ ಒಬ್ಬರು. ನೌಕಾ ತುಕಡಿಯನ್ನು ಕಮಾಂಡರ್‌ ವ್ರತ್‌ ಬಘೇಲ್‌

ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಅಮೃತ್ ಭಾಗಿ Read More »

ಕರಾವಳಿ

SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ ➤ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10.  ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ಕ್ಷೇತ್ರ ಸಮಿತಿಯ ವತಿಯಿಂದ ಎಸ್‌ಡಿಪಿಐ ಪಕ್ಷದ ಸಮಾವೇಶವು ಭಾನುವಾರದಂದು ದೇರಳಕಟ್ಟೆಯ ಬಿಸಿಸಿ ಆಡಿಟೋರಿಯಂನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಮಂಗಳೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ ವಹಿಸಿದರು. ಸಮಾವೇಶದ ಪ್ರಾಸ್ತಾವಿಕ ಭಾಷಣವನ್ನು ಮಾಡಿದ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಶೋಷಿತ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳನ್ನು ರಾಜಕೀಯ ಹಾಗೂ ಸಾಮಾಜಿಕವಾಗಿ ದೇಶದ ಮುಖ್ಯವಾಹಿನಿಗೆ ತಂದು

SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ ➤ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭಾಗಿ Read More »

ಕರಾವಳಿ

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಯುವಕ ಅರೆಸ್ಟ್, ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 10. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೋಕ್ಸೋ ಪ್ರಕರಣವನ್ನು ದಾಖಲಿಸಿ, ಆತನನ್ನು ಬಂಧಿಸಲಾಗಿದೆ. ಬಂಧಿತನನ್ನು ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಎಂದು ಗುರುತಿಸಲಾಗಿದೆ. ಈತ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿಯು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಯುವಕ ಅರೆಸ್ಟ್, ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 10. ಹೊಳೆನೀರಿಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಎಂದು ಗುರುತಿಸಲಾಗಿದೆ. ಇವರು ಜು. 09ರಂದು ಮಧ್ಯಾಹ್ನ ಇಚ್ಲಂಪಾಡಿಯ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ. ಇದೀಗ ಜು.10ರಂದು

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ಸುಳ್ಯ: ನೀರುಪಾಲಾಗಿದ್ದ ಕಾರ್ಮಿಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಅರಂತೋಡು, ಜು. 09. ನಾಲ್ಕು ದಿನಗಳ ಹಿಂದೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯ ತಪ್ಪಿ ಹೊಳೆಗೆ ಬಿದ್ದಿದ್ದ ಕೂಲಿ ಕಾರ್ಮಿಕನ ಮೃತದೇಹವು ಇಂದು ಪತ್ತೆಯಾಗಿದೆ. ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ನಾಲ್ಕು ದಿನಗಳ ಹಿಂದೆ ನೀರು ಪಾಲಾಗಿದ್ದು, ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು. ಸುಳ್ಯ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ, ಪೋಲಿಸ್ ಇಲಾಖೆಯೊಂದಿಗೆ ಅರಂತೋಡು ಕಲ್ಲುಗುಂಡಿ ವಿಖಾಯ ತಂಡ ಹಾಗೂ

ಸುಳ್ಯ: ನೀರುಪಾಲಾಗಿದ್ದ ಕಾರ್ಮಿಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾನುವಾರುಗಳ ಮೇಲೆ ಹರಿದ ಕಾರು- ಮೂರು ಜಾನುವಾರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 09. ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ತೆರಳುತ್ತಿದ್ದ ಕಾರು ನಸುಕಿನ 3.30 ರ ಸುಮಾರಿಗೆ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳ ಮೇಲೆ ಹರಿದಿದ್ದು, ಪರಿಣಾಮ ಮೂರು ಜಾನುವಾರುಗಳು ಸಾವನ್ನಪ್ಪಿವೆ.

ಜಾನುವಾರುಗಳ ಮೇಲೆ ಹರಿದ ಕಾರು- ಮೂರು ಜಾನುವಾರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top