ಕರಾವಳಿ

ನಾಳೆ (ಜು. 06) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು.06) ದ.ಕ‌ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ನಾಳೆ (ಜು. 06) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ವಿಟ್ಲ: ಭಾರೀ ಗಾಳಿ ಮಳೆಗೆ ಓಮ್ನಿ ಕಾರಿನ ಮೇಲೆ ಬಿದ್ದ ಮರ ➤ ವಾಹನ ಸಂಪೂರ್ಣ ಜಖಂ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 05. ಭಾರೀ ಗಾಳಿ ಮಳೆಗೆ ಮನೆ ಮುಂಭಾಗ ನಿಲ್ಲಿಸಲಾಗಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.‌ ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಭಾರೀ ಗಾಳಿ ಮಳೆಗೆ ಬೃಹತ್ ಮಾವಿನ ಮರ ಅದರ ಮೇಲೆ ಉರುಳಿ ಬಿದ್ದಿದೆ.‌ ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ವಿಟ್ಲ: ಭಾರೀ ಗಾಳಿ ಮಳೆಗೆ ಓಮ್ನಿ ಕಾರಿನ ಮೇಲೆ ಬಿದ್ದ ಮರ ➤ ವಾಹನ ಸಂಪೂರ್ಣ ಜಖಂ Read More »

ಕರಾವಳಿ

ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 05. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸ್ಥಳೀಯ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ತಡರಾತ್ರಿ ಬೀಸಿದ ಭಾರೀ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಆದರೆ ಇದರ ಅರಿವಿಲ್ಲದೇ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಆಕಸ್ಮಿಕವಾಗಿ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಂಟರಗಾಳಿಗೆ ವಿವಿಧೆಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ.

ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮನೆಗೋಡೆ ಕುಸಿತ. ➤ ಮನೆಮಂದಿ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 05. ಮನೆ ಗೋಡೆ ಕುಸಿದು ಮನೆಮಂದಿ ಪವಾಡಸದೃಶವಾಗಿ ಪಾರಾದ ಘಟನೆ ಉಳ್ಳಾಲದ ಕೋಟೆಪುರದಲ್ಲಿ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಮರಬ್ಬ ಎಂಬವರ ಮನೆಮಂದಿ ಮನೆಯೊಳಗಿರುವಾಗಲೇ ಗೋಡೆ ಕುಸಿದಿದೆ. ತಕ್ಷಣವೇ ಮನೆಮಂದಿ ಹೊರ ನಡೆದಿದ್ದು, ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಉಳ್ಳಾಲ: ಮನೆಗೋಡೆ ಕುಸಿತ. ➤ ಮನೆಮಂದಿ ಅಪಾಯದಿಂದ ಪಾರು Read More »

ಕರಾವಳಿ

ಪುತ್ತೂರು, ವಿಟ್ಲ, ಸುಳ್ಯ, ಬೆಳ್ಳಾರೆ ಹಾಗೂ ಬಂಟ್ವಾಳ ಠಾಣೆಗಳ ಎಸ್ಐ ಗಳ ವರ್ಗಾವಣೆ

(ಮ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಮಹಿಳಾ ಪೊಲೀಸ್ ಠಾಣೆ, ವಿಟ್ಲ, ಸುಳ್ಯ, ಬಂಟ್ವಾಳ ಸಹಿತ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಎಸ್.ಐ ಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಸರಸ್ವತಿ ಬಿ.ಟಿ.ಅವರನ್ನು ಸುಳ್ಯಕ್ಕೆ, ಪುತ್ತೂರು ಮಹಿಳಾ ಠಾಣೆಯ ಎಸ್.ಐ ಸೇಸಮ್ಮ ಕೆ.ಎಸ್ ಅವರನ್ನು ಪುತ್ತೂರು ನಗರ ಠಾಣೆಗೆ, ವಿಟ್ಲ ಠಾಣೆಯ ಎಸ್.ಐ ರುಕ್ಮ

ಪುತ್ತೂರು, ವಿಟ್ಲ, ಸುಳ್ಯ, ಬೆಳ್ಳಾರೆ ಹಾಗೂ ಬಂಟ್ವಾಳ ಠಾಣೆಗಳ ಎಸ್ಐ ಗಳ ವರ್ಗಾವಣೆ Read More »

ಕರಾವಳಿ

ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 05. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ಬುಧವಾರದಂದು ನಡೆದಿದೆ. ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ತುಂಬೆ ಎಂಬಲ್ಲಿ ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೇ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದ್ದು, ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ

ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪರವಾನಿಗೆ ರಹಿತ ಓಡಾಟ. ➤ ಖಾಸಗಿ ಬಸ್ ಗಳನ್ನು ಸೀಝ್ ಮಾಡಿದ ಆರ್ ಟಿಒ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಅತೀ ಹಳೆಯ ಪರ್ಮಿಟ್ ಹೊಂದಿದ್ದ ಸುಳ್ಯ ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ. ಈ ಹಿಂದಿನಿಂದಲೂ ಅಜ್ಜಾವರ-ಮಂಡೆಕೋಲು-ಅಡೂರುಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ ಅನಿಲ್ ಛಾತ್ರ ಎಂಬವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿದೆ. ಇನ್ನೊಂದು ಕೆಎ-19-ಸಿ-0329 ಎಂಬ ಸಂಖ್ಯೆಯ

ಸುಳ್ಯ: ಪರವಾನಿಗೆ ರಹಿತ ಓಡಾಟ. ➤ ಖಾಸಗಿ ಬಸ್ ಗಳನ್ನು ಸೀಝ್ ಮಾಡಿದ ಆರ್ ಟಿಒ Read More »

ಕರಾವಳಿ

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. 2022ರಲ್ಲಿ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡಿನ ರಾಜೀವ್ ಗಾಂಧಿ ನಗರದ ಅಬ್ದುಲ್ ನಿಸಾರ್ ಎಂಬಾತನನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಆರೋಪಿಯು ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ವಾರಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ಜುಲೈ 4ರಂದು ಕಾಸರಗೋಡು ಕುಂಬಳೆಯಲ್ಲಿ ಸಂಪ್ಯ

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಕಾಂಪೌಂಡ್ ಕುಸಿದು ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ವಿಟ್ಲ , ಜು. 05. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು, ಅಪಾರ ನಷ್ಟ ಉಂಟಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಕೃಷ್ಣಪ್ಪ ಮಡಿವಾಳ ಎಂಬವರ ಮನೆಗೆ ಕಾಂಪೌಂಡ್ ಕುಸಿದು ಬಿದ್ದಿದ್ದು, ಕೂಡಲೇ ಅವರು ವಿಟ್ಲ ಪಟ್ಟಣ ಪಂಚಾಯತ್ ವಿಕೋಪ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್ ವಿ.ಕೆ. ಹಾಗೂ

ವಿಟ್ಲ: ಕಾಂಪೌಂಡ್ ಕುಸಿದು ಮನೆಗೆ ಹಾನಿ Read More »

ಕರಾವಳಿ

ಮಂಗಳೂರು: ಕಟ್ಟಡದ ಮೇಲಿದ್ದ ಬೃಹತ್ ಹೋರ್ಡಿಂಗ್ ಬಿದ್ದು ವಾಹನಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಭಾರೀ ಗಾಳಿಮಳೆಗೆ ಕಟ್ಟಡವೊಂದರ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು ಪರಿಣಾಮ ಕಟ್ಟಡದ ಕೆಳಗಡೆ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಬುಧವಾರದಂದು ಬಿಕರ್ನಕಟ್ಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವು ಅಂಗಡಿಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಹೋರ್ಡಿಂಗ್ ತೆರವುಗೊಳಿಸಿದ್ದಾರೆ. ಘಟನೆಯಿಂದ ನಂತೂರು-ಪಡೀಲ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮಂಗಳೂರು: ಕಟ್ಟಡದ ಮೇಲಿದ್ದ ಬೃಹತ್ ಹೋರ್ಡಿಂಗ್ ಬಿದ್ದು ವಾಹನಗಳಿಗೆ ಹಾನಿ Read More »

ಕರಾವಳಿ
Scroll to Top