ಕರಾವಳಿ

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ಹಣ ಪಡೆದು ಬಳಿಕ ವಂಚಿಸಿರುವ ಕುರಿತು ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತನ್ನ ಹೆಸರು ನಿಹಾರಿಕಾ (nihari-kaaa) ಎಂದು ಪರಿಚಯಿಸಿಕೊಂಡಿದ್ದು, ಬೇಕರಿಯಲ್ಲಿ ತಾಯಿಯ ಬ್ಯಾಂಕ್ ಖಾತೆಯಿಂದ ಹಣ ಪಾವತಿಸಲು ಅಸಾಧ್ಯವಾಗಿರುವುರಿಂದ 3800 ರೂ. ವರ್ಗಾಯಿಸುವಂತೆ ಕ್ಯೂಆರ್‌ ಕೋಡ್ ಕಳುಹಿಸಿದ್ದ. ಅದನ್ನು ನಂಬಿದ ಫಿರ್ಯಾದಿದಾರರು ಹಣ ಪಾವತಿಸಿದ್ದರು. ಬಳಿಕ ತಾನು […]

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 05. ಮನೆ ಸಂಪರ್ಕದ ಮೋರಿ ದಾಟುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಇವರು, ಮಂಗಳವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ (ಜು. 05) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು. 05) ದ.ಕ‌ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ನಾಳೆ (ಜು. 05) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯ ➤ ಮೈಸೂರಿನ ಒಡನಾಡಿ ಸಂಸ್ಥೆ ಸಾಥ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 04. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮರು ತನಿಖೆಗೆ ಒತ್ತಾಯಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಮೈಸೂರಿನ ಒಡನಾಡಿ ಸಂಸ್ಥೆಯೊಂದು ಸೌಜನ್ಯಾಳಿಗೆ ನ್ಯಾಯ ಕೊಡಿಸಲು ಕಾನೂನು ಹೋರಾಟವನ್ನು ಕೈಗಳ್ಳುವುದಾಗಿ ಹೇಳಿದೆ. ಇದಕ್ಕೆ ಸಂಬಂಧಿಸಿ, ಧರ್ಮಸ್ಥಳ ಪಾಂಗಳ ಎಂಬಲ್ಲಿನ ಸೌಜನ್ಯಾಳ ಮನೆಗೆ ಭೇಟಿ ನೀಡಿದ ಒಡನಾಡಿ ಸಂಸ್ಥೆಯ ಕೆ.ವಿ.ಸ್ಟಾನ್ಲಿ ಹಾಗೂ ಪರಶುರಾಮ್, ಕುಟುಂಬಿಕರು ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಇತರ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿ, ನ್ಯಾಯಾಲಯದಲ್ಲಿ ಕಾನೂನು ರೀತಿಯ ಹೋರಾಟಗಳನ್ನು

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯ ➤ ಮೈಸೂರಿನ ಒಡನಾಡಿ ಸಂಸ್ಥೆ ಸಾಥ್ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಭಾರೀ ಮಳೆ- ರೆಡ್ ಅಲರ್ಟ್ ➤ ನಾಳೆ (ಜು. 05) ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 04. ಕಾಸರಗೋಡು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯ ಇಂದಿನ ಎಚ್ಚರಿಕೆಯ ಪ್ರಕಾರ, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಳೆಯೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಈ ಪರಿಸ್ಥಿತಿಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ರಾಜ್ಯ, ಸಿಬಿಎಸ್‌ಇ ಮತ್ತು ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳಂತಹ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜು. 05) ರಜೆ ಘೋಷಿಸಿದೆ.

ಕಾಸರಗೋಡು: ಭಾರೀ ಮಳೆ- ರೆಡ್ ಅಲರ್ಟ್ ➤ ನಾಳೆ (ಜು. 05) ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ

ಭಾರೀ ಮಳೆ ಸಾಧ್ಯತೆ ➤ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮುಂದಿನ ಕೆಲವು ಗಂಟೆಗಳ ಕಾಲ ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು. 04ರ ಮಧ್ಯಾಹ್ನದಿಂದ ಜು. 05ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು. 04ರ ಮಧ್ಯಾಹ್ನದ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು

ಭಾರೀ ಮಳೆ ಸಾಧ್ಯತೆ ➤ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಕರಾವಳಿ

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಬೈಂದೂರು, ಜು. 04. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮೆಸ್ಕಾಂ ಲೈನ್ ಮ್ಯಾನ್ ಓರ್ವರನ್ನು ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬಂಧಿತರನ್ನು ರಮೇಶ್ ಬಡಿಗೇರ ಎಂದು ಗುರುತಿಸಲಾಗಿದೆ. ಕುಸುಮಾ ಎಂಬವರು ಲೈನ್ ಮ್ಯಾನ್ ರಮೇಶ್ ಅವರೊಂದಿಗೆ ಮರ ಕಡಿಯಲು ಲೈನ್ ನಿಷ್ಕ್ರಿಯಗೊಳಿಸುವಂತೆ ಮನವಿ ಮಾಡಿದ್ದು, ಈ ಸಂದರ್ಭ ರಮೇಶ್ 2,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ. ಈ ವೇಳೆ ಡಿವೈಎಸ್ ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಜಯರಾಮ್ ಗೌಡ

ಲೈನ್ ನಿಷ್ಕ್ರಿಯಗೊಳಿಸಲು ಲಂಚ ಪಡೆದ ಲೈನ್ ಮ್ಯಾನ್- ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಕಡಬ, ಜು. 04. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಟಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಕೊನೆಗೆ ದೈವದ ಮೊರೆ ಹೋಗಿದ್ದಾರೆ. ಜು. 04ರಂದು ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು Read More »

ಕರಾವಳಿ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ➤ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮುಂದಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿರುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ. ಈ ಬಾರಿ ಜೂನ್ ನಲ್ಲಿ ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಜುಲೈ ಪ್ರಾರಂಭದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಯಾವುದೇ ಅನಾಹುತಗಳು ಸಂಭವಿಸುವ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ➤ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ Read More »

ಕರಾವಳಿ

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಕಿಲ್ಲೆ ಮೈದಾನದ ಪುರಭವನದ ಬಳಿ ಸಂಭವಿಸಿದೆ. ಬಂಧಿತನನ್ನು ಕೆಯ್ಯೂರು ಕಟ್ಟತ್ತಾರು ನಿವಾಸಿ ಮಹಮ್ಮದ್ ಅಶ್ರಫ್(31) ಎಂದು ಗುರುತಿಸಲಾಗಿದೆ. ಈತ ಕಿಲ್ಲೆ ಮೈದಾನದ ಪುರಭವನದ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿರುವ ಕುರಿತು ಬಂದ ಮಾಹಿತಿಯಂತೆ ಪುತ್ತೂರು ನಗರ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಆರೋಪಿಯನ್ನು ವಿಚಾರಿಸಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top