ಕರಾವಳಿ

ಕಡಬ: ಅರುಣ್ ಕುಮಾರ್ ಪುತ್ತಿಲ ಭೇಟಿ ➤ ಅಭಿಮಾನಿಗಳಿಂದ ಸ್ವಾಗತ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ನಾವು ಧರ್ಮವನ್ನು ಬಿಟ್ಟಿರಲು ಸಾಧ್ಯವಿಲ್ಲ, ಧರ್ಮಾಧರಿತ ರಾಜಕೀಯದಿಂದ ಸಮಸ್ತ ಹಿಂದೂ ಸಮಾಜವನ್ನು ರಕ್ಷಣೆ ಮಾಡಲು ಎಲ್ಲಾ ಕಡೆ ಪ್ರವಾಸ ಮಾಡುತ್ತಿರುವುದಾಗಿ ಅರುಣ್ ಪುತ್ತಿಲ ಹೇಳಿದ್ದಾರೆ. ಭಾನುವಾರದಂದು ಕಡಬ ತಾಲೂಕಿನ ಪ್ರವಾಸ ಕೈಗೊಂಡ ಅವರು, ಬೆಳಗ್ಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರಕ್ಕೆ ಆಗಮಿಸಿ, ಸ್ಟಿಕ್ಕರ್ ಬಿಡುಗಡೆ ಮಾಡಿ ಮಾತನಾಡಿದರು. ಬಳಿಕ ಕಳೆದ ವಾರ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗಿರೀಶ್, […]

ಕಡಬ: ಅರುಣ್ ಕುಮಾರ್ ಪುತ್ತಿಲ ಭೇಟಿ ➤ ಅಭಿಮಾನಿಗಳಿಂದ ಸ್ವಾಗತ Read More »

ಕರಾವಳಿ

ತಾ.ಪಂ, ಜಿ.ಪಂ. ಚುನಾವಣೆ- ಮತದಾರರ ಕರಡುಪಟ್ಟಿ ಪ್ರಕಟ ➤ ಜು.4ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಮುಂಬರುವ ತಾ.ಪಂ ಹಾಗೂ ಜಿ.ಪಂ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 04ರಂದು ಕೊನೆಯ ದಿನಾಂಕ ನಿಗದಿಗೊಳಿಸಿ ಆದೇಶಿಸಲಾಗಿದೆ. ದ.ಕ ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ಕಛೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಛೇರಿಗಳಲ್ಲಿ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 4 ಕೊನೆಯ ದಿನವಾಗಿದ್ದು, ಜುಲೈ

ತಾ.ಪಂ, ಜಿ.ಪಂ. ಚುನಾವಣೆ- ಮತದಾರರ ಕರಡುಪಟ್ಟಿ ಪ್ರಕಟ ➤ ಜು.4ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ Read More »

ಕರಾವಳಿ

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ‘ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ನರೇಂದ್ರ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ‘ನಾ ಖಾವೂಂಗ, ನಾ ಖಾನೆ ದೂಂಗ’ ಎಂದು ಹೇಳಿದ್ದರು. ಆದರೆ ಕರ್ನಾಟಕದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ರಾರಾಜಿಸಿತು. ಮೋದಿಯವರ ಆ ಮಾತು ಏನಾಯಿತು ಎಂದು ಪ್ರಶ್ನಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿ ವಿರುದ್ಧ ಹೋರಾಡಿ

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಹೃದಯಾಘಾತ- ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 26. ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ ಭಾಸ್ಕರ ಗೌಡ ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ರಾತ್ರಿ10 ಗಂಟೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಹೃದಯಾಘಾತ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 26. ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ ರವರು ಧರ್ಮಸ್ಥಳ ಕ್ಷೇತ್ರದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನ ಪಡೆದು ಸೇವೆ ನೆರವೇರಿಸಿ ಬಳಿಕ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪ್ರಸಾದ ಸ್ವೀಕರಿಸಿ, ನಂತರ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಬಳಿಕ ಆಡಳಿತ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ Read More »

ಕರಾವಳಿ, ಕ್ರೀಡಾ ನ್ಯೂಸ್

ಮಂಗಳೂರು: ತುಂಬೆ ಡ್ಯಾಂ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ತುಂಬೆ ವೆಂಟೆಡ್ ಡ್ಯಾಂ ನಲ್ಲಿ 5 ಮೀ. ನೀರಿನ ಮಟ್ಟ ಏರಿಕೆಯಾಗಿದ್ದು, ಸದ್ಯ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಅಭಾವ ದೂರವಾಗಿದೆ. ಸದ್ಯ ನೀರಿನ ಅಭಾವ ಹಿನ್ನಲೆ ಮಂಗಳೂರಿನಲ್ಲಿ ಮೇ. 04ರಿಂದ ನೀರಿನ ರೇಷನಿಂಗ್ ಆರಂಭ ಮಾಡಲಾಗಿತ್ತು. ಮಂಗಳೂರು ನಗರ ಪ್ರದೇಶ, ಸುರತ್ಕಲ್ ಪ್ರದೇಶಕ್ಕೆ ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು

ಮಂಗಳೂರು: ತುಂಬೆ ಡ್ಯಾಂ ನೀರಿನ ಮಟ್ಟ ಹೆಚ್ಚಳ Read More »

ಕರಾವಳಿ

ಹಸಿರೇ ಉಸಿರು ➤ ವನಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ರಷ್ಣಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಪದವಿನಂಗಡಿ, ಮಂಗಳೂರು ಇಲ್ಲಿ ಪ್ರಥ್ವಿ  ಚಾರಿಟೇಬಲ್ ಟ್ರಸ್ಟ್ ಇವರ ಸಹಕಾರದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದ. ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಚಾಲನೆ ನೀಡಿದರು. ಸುಮಾರು 25 ಹಣ್ಣಿನ ಗಿಡಗಳನ್ನು ಪದವಿನಂಗಡಿ ಪರಿಸರದ ಕೆ ಹೆಚ್ ಬಿ ಕಾಲೋನಿ  ಬೊಂದೆಲ್ ಇಲ್ಲಿನ ಮೈದಾನದ ಸುತ್ತ  ನೆಡಲಾಯಿತು. ಪರಿಸರ ಪ್ರೇಮಿ ಕ್ರಷ್ಣಪ್ಪ ಅವರು ಮಾತನಾಡಿ,

ಹಸಿರೇ ಉಸಿರು ➤ ವನಮಹೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ರಷ್ಣಪ್ಪ Read More »

ಕರಾವಳಿ

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 25. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯ ಮೇರೆಗೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೊಡಿಯಾಲದ ಚೇತನ್ ಕಾಯರ್ತಡ್ಕ ಹಾಗೂ ದರ್ಶನ್ ಕಾಯರ್ತಡ್ಕ ಎಂದು ಗುರುತಿಸಲಾಗಿದೆ. ಕೊಡಿಯಾಲ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಕಲ್ಮಡ್ಕದ ಚಿದಾನಂದ ಎಂಬಾತನನ್ನು ಬಂಧಿಸಿದ್ದರು. ಇದೀಗ ವಿಚಾರಣೆ ಮುಂದುವರಿಸಿದ ಪೊಲೀಸರು ಬಾಲಕಿಯಿಂದ ಹೇಳಿಕೆ

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಟಿವಿ ಮಾರಾಟದ ವಿಚಾರದಲ್ಲಿ ದಂಪತಿ ಆತ್ಮಹತ್ಯೆ ➤ ತಂದೆ ತಾಯಿಯ ದುಡುಕಿನ ನಿರ್ಧಾರಕ್ಕೆ ತಬ್ಬಲಿಯಾದ ಮಕ್ಕಳು

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ.25. ಟಿವಿ ಮಾರಾಟದ ವಿಚಾರದಲ್ಲಿ ಆರಂಭವಾದ ಜಗಳ ದಂಪತಿಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ಭಾನುವಾರದಂದು ಕಾರ್ಕಳದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಾರ್ಕಳ ತಾಲೂಕಿನ ನಲ್ಲೂರು ಹುರ್ಲಾಡಿ ನಿವಾಸಿ ಮುಂಬಯಿ ಹೊಟೇಲ್ ಉದ್ಯಮಿಯ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ದಂಪತಿ ಇಮ್ಯಾನುಲ್ ಸಿದ್ಧಿ (40) ಹಾಗೂ ಯಶೋಧಾ (32) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ ದಂಪತಿಯ ನಡುವೆ ಟಿವಿ ಮಾರಾಟದ ವಿಚಾರದಲ್ಲಿ ಜಗಳ ಉಂಟಾಗಿದೆ. ಅನ್ಯೋನ್ಯತೆಯಿಂದಿದ್ದ ದಂಪತಿಗಳ ನಡುವೆ

ಟಿವಿ ಮಾರಾಟದ ವಿಚಾರದಲ್ಲಿ ದಂಪತಿ ಆತ್ಮಹತ್ಯೆ ➤ ತಂದೆ ತಾಯಿಯ ದುಡುಕಿನ ನಿರ್ಧಾರಕ್ಕೆ ತಬ್ಬಲಿಯಾದ ಮಕ್ಕಳು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ- ಶಾಂತಿಮೊಗರು- ಪುತ್ತೂರು ಹೆಚ್ಚುವರಿ ಬಸ್ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 24. ಈಗಾಗಲೇ ಕಡಬ- ಶಾಂತಿಮೊಗರು ಮೂಲಕ ಪುತ್ತೂರಿಗೆ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲಕರವಾಗಿದೆ. ಆದರೆ ಇದೀಗ ಈ ಬಸ್ಸನ್ನು ಅವಲಂಬಿಸಿರುವವರ ಸಂಖ್ಯೆ ಜಾಸ್ತಿಯಾಗಿದ್ದು ಬಸ್ಸಿನ ಓಡಾಟದ ಸಮಯದಲ್ಲಿ ವ್ಯತ್ಯಾಸವಾಗಿದೆ. ಇದರಿಂದ ಬಸ್ಸು ಸಮಯಕ್ಕೆ ಬಾರದೇ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ರೂಟ್ ನಲ್ಲಿ ಎರಡು ಹೆಚ್ಚುವರಿ ಬಸ್ಸನ್ನು ನಿಯೋಜನೆ ಮಾಡುವಂತೆ ಡಿಪೋ

ಕಡಬ- ಶಾಂತಿಮೊಗರು- ಪುತ್ತೂರು ಹೆಚ್ಚುವರಿ ಬಸ್ ಗೆ ಮನವಿ Read More »

ಕರಾವಳಿ
Scroll to Top