ಕರಾವಳಿ

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 23. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣದಡಿ ದೂರು ದಾಖಲಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಬಂಧಿತನನ್ನು ಕಲ್ಮಡ್ಕದ ಕಾಪಡ್ಕ ಚಿದಾನಂದ ಎಂದು ಗುರುತಿಸಲಾಗಿದೆ. ಈತ ಕೊಡಿಯಾಲದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಮನೆಯವರು ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ-ಮಗಳನ್ನು ಹಿಂಬಾಲಿಸಿಕೊಂಡು ಬಂದ ಯುವಕರು ➤ ಓರ್ವ ವಶಕ್ಕೆ..?

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 23. ಮಹಿಳೆಯೊಬ್ಬರು ತನ್ನ ಮಗಳ ಜೊತೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರಿಬ್ಬರು ಬೆನ್ನಟ್ಟಿಸಿಕೊಂಡು ಬಂದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ನೆಕ್ಕೆಗುಡ್ಡೆ ಎಂಬಲ್ಲಿ ಸಂಭವಿಸಿದೆ. ಗುರುವಾರದಂದು ಸಂಜೆ ಮಹಿಳೆ ತನ್ನ ಮಗಳನ್ನು ಶಾಲೆಯಿಂದ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ಯುವಕರಿಬ್ಬರು ನೆಕ್ಕೆಗುಡ್ಡೆ ಎಂಬಲ್ಲಿ ಕಾರು ನಿಲ್ಲಿಸಿ, ಮಹಿಳೆ ಮತ್ತು ಮಗಳನ್ನು ಬೆನ್ನಟ್ಟಿಸಿಕೊಂಡು ಬಂದಿದ್ದಾರೆ. ಇದರಿಂದ ಹೆದರಿದ ಮಹಿಳೆ ಅಂಗಡಿಯೊಂದರ ಬಳಿ ರಕ್ಷಣೆ ಪಡೆದಿದ್ದು, ಈ ವೇಳೆ

ತಾಯಿ-ಮಗಳನ್ನು ಹಿಂಬಾಲಿಸಿಕೊಂಡು ಬಂದ ಯುವಕರು ➤ ಓರ್ವ ವಶಕ್ಕೆ..? Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 23. ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಎಂದು ಗುರುತಿಸಲಾಗಿದೆ. ಎಲಿಮಲೆಯ ರಬ್ಬರ್ ಪ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದೆನ್ನಲಾಗಿದ್ದು, ಇದೀಗ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಕಳ್ಳರ ಕೈಚಳಕ, ನಗ-ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜೂ. 23. ಮನೆಗೆ ನುಗ್ಗಿದ ಕಳ್ಳರು ಸುಮಾರು 60 ಪವನ್ ಚಿನ್ನಾಭರಣ ಮತ್ತು 50 ಸಾವಿರ ರೂ.ನಗದು ಕಳವು ಮಾಡಿರುವ ಕುರಿತು ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಜೇಶ್ವರ ರಾಗಂ ಜಂಕ್ಷನ್ ನ ಹಮೀದ್ ರವರ ಕುಟುಂಬ ಸಮೇತ ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಏರ್ವಾಡಿಗೆ ತೆರಳಿದ್ದು, ಗುರುವಾರದಂದು ಸಂಜೆ ಮರಳಿ ಬಂದಾಗ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಪಾಟನ್ನು ಮುರಿದು

ಮನೆಗೆ ನುಗ್ಗಿ ಕಳ್ಳರ ಕೈಚಳಕ, ನಗ-ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನಾಗರಹಾವಿನ ಉದರದಲ್ಲಿ ಸುಣ್ಣದ ಡಬ್ಬಿ ಪತ್ತೆ ➤ ಶಸ್ತ್ರಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 23. ತಾಲೂಕಿನ ವಗ್ಗ ಸಮೀಪದ ಆಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ. ಅಲಂಪುರಿ ನಿವಾಸಿ ವಸಂತಿ ಅವರ ಮನೆ ಬಳಿಯ ಬಿಲವೊಂದರಲ್ಲಿ ಜೂ. 06ರಂದು ನಾಗರ ಹಾವೊಂದು ಪತ್ತೆಯಾಗಿದ್ದು, ಹೊರಗೆ ಬರಲು ಸಾಧ್ಯವಾಗದೆ ಒದ್ದಾಡುತ್ತಿತ್ತು. ಈ ಕುರಿತು ಅವರು ಉರಗ ಪ್ರೇಮಿ ಸ್ನೇಕ್ ಕಿರಣ್ ಗೆ ತಿಳಿಸಿದ್ದು, ಬಳಿಕ ಅವರು

ಬಂಟ್ವಾಳ: ನಾಗರಹಾವಿನ ಉದರದಲ್ಲಿ ಸುಣ್ಣದ ಡಬ್ಬಿ ಪತ್ತೆ ➤ ಶಸ್ತ್ರಚಿಕಿತ್ಸೆ ಯಶಸ್ವಿ Read More »

ಕರಾವಳಿ

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ವ್ಯಕ್ತಿಯೊಬ್ಬರು ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯಪದವು ಕಜೆಮೂಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಮೃತರನ್ನು ನೆಟ್ಟಣಿಗೆ ಗ್ರಾಮದ ಆದೂರು ಬೀರಮೂಲೆ ನಿವಾಸಿ ನಾರಾಯಣ ನಾಯ್ಕ(75) ಎಂದು ಗುರುತಿಸಲಾಗಿದೆ ಇವರು ಸುಳ್ಯಪದವು ಕಜೆಮೂಲೆ ವೆಂಕಟೇಶ್ವರ ಭಟ್ ಎಂಬವರ ತೋಟದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮನೆಯಿಂದ ಹೋದ ಅವರು ನಾಪತ್ತೆಯಾಗಿದ್ದ ಕುರಿತು ಅವರ ಮನೆ ಮಂದಿ ದೂರು ನೀಡಿದ್ದರು. ಜೂ. 22ರಂದು ವೆಂಕಟೇಶ್ವರ ಭಟ್

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಇನ್ ಸ್ಟಾಗ್ರಾಮ್ ಖಾತೆಗೆ ಬಂದ ಪಾರ್ಟ್ ಟೈಮ್ ಉದ್ಯೋಗದ ಮೆಸೇಜ್ ನಂಬಿ ವ್ಯಕ್ತಿಯೊಬ್ಬರು 1,73,190 ರೂ. ಕಳೆದುಕೊಂಡಿರುವ ವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರದಾರನ ಹೆಂಡತಿಯ ಇನ್ಸ್ಟಾಗ್ರಾಮ್ ಖಾತೆಗೆ ಅಪರಿಚಿತನೊಬ್ಬ ಪಾರ್ಟ್‌ಟೈಮ್ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಇದನ್ನು ವಿಚಾರಿಸಿದಾಗ ಅಪರಚಿತ ವ್ಯಕ್ತಿ ವಾಟ್ಸ್‌ ಆಪ್ ಮೂಲಕ ಮೆಸೇಜ್ ಮಾಡುವಂತೆ ಸೂಚಿಸಿದ್ದ. ಅದರಂತೆ ತಾನು ಮೆಸೇಜ್ ಕಳುಹಿಸಿದಾಗ ಆತ ಟೆಲಿಗ್ರಾಮ್ ವೆಬ್‌ಸೈಟ್ ಲಿಂಕ್ ಕಳುಹಿಸಿ

ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣ ➤ ಬಸ್ ತಡೆದು ಸ್ಥಳೀಯರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23.  ಬುಧವಾರದಂದು (ಜೂ. 22) ಗುರುಪುರ ಜಂಕ್ಷನ್ ಬಳಿ ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಮೃತಪಟ್ಟಿದ್ದು, ಈ ಘಟನೆಯನ್ನು ಖಂಡಿಸಿ ಇಂದು ಬಸ್‌ ಗಳನ್ನು ತಡೆದು ಸ್ಥಳೀಯರು ಕೈಕಂಬ ಜಂಕ್ಷನ್‌ ‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಿಂದಾಗಿ ಕೈಕಂಬದಲ್ಲಿ ಸಂಪೂರ್ಣ ಬ್ಲಾಕ್ ಆಗಿದ್ದು, ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಜಪೆ ಠಾಣಾ

ಬಂಟ್ವಾಳ: ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣ ➤ ಬಸ್ ತಡೆದು ಸ್ಥಳೀಯರ ಪ್ರತಿಭಟನೆ Read More »

ಕರಾವಳಿ

ಇಂದು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಹತ್ತಿರದ ಬೆಂಗರೆ-ತಣ್ಣೀರು ಬಾವಿಯಲ್ಲಿರುವ ಟ್ರೀ ಪಾರ್ಕ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ ಇಂದು (ಜೂ.23) ಸಂಜೆ 4.30ಕ್ಕೆ ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ Read More »

ಕರಾವಳಿ

ಜೂ. 28ರಂದು ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಇಲ್ಲಿನ ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆ ಇದೇ ಜೂ.28ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 28ರಂದು ಸಾಮಾನ್ಯ ಸಭೆ Read More »

ಕರಾವಳಿ
Scroll to Top