ಕರಾವಳಿ

ಬಾಲಕರ ವಿದ್ಯಾರ್ಥಿ ನಿಲಯಗಳ ಅರ್ಜಿ ಆಹ್ವಾನಕ್ಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಮುಲ್ಕಿ, ಮೂಡಬಿದ್ರೆ, ಸುಂಕದಕಟ್ಟೆ, ದರೆಗುಡ್ಡೆ, ಕಡಂದಲೆ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ಗುರುಪುರ, ಅಶೋಕನಗರದಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಟಾಟ್ಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವೆಬ್ ಸೈಟ್: […]

ಬಾಲಕರ ವಿದ್ಯಾರ್ಥಿ ನಿಲಯಗಳ ಅರ್ಜಿ ಆಹ್ವಾನಕ್ಕೆ ಅವಧಿ ವಿಸ್ತರಣೆ Read More »

ಕರಾವಳಿ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸ್‍ನ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದೆ. ಪ್ರವೇಶ ಬಯಸುವವರು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು 2023ರ ಜುಲೈ 7ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ಪೋಷಕರ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ನಾಳೆಯಿಂದ ಹಣ್ಣುಗಳ ಉತ್ಸವ-ಹಲಸು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಇದೇ ಜೂ.24 ಹಾಗೂ 25ರಂದು ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ವನ್ನು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಉಮನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ

ನಾಳೆಯಿಂದ ಹಣ್ಣುಗಳ ಉತ್ಸವ-ಹಲಸು ಮೇಳ Read More »

ಕರಾವಳಿ

ಇಂದು ಕೆಡಿಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. 2023-24ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ಇಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಕೆಡಿಪಿ ಸಭೆ Read More »

ಕರಾವಳಿ

ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಜೂ. 23ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಬಂದರಿನಲ್ಲಿ ಮಂಗಳೂರು ಕೆನರಾ ಛೇಂಬರ್ ಆಫ್ ಕಾಮರ್ಸ್ ಮತ್ತು ವಾಣಿಜ್ಯ ನಿಯೋಗಗಳೊಂದಿಗೆ ಭೇಟಿ ಮಾಡಿ ಉಪಹಾರ ಸೇವಿಸುವರು. 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ ನ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30ಕ್ಕೆ

ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ Read More »

ಕರಾವಳಿ

ಪತ್ರಿಕಾ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಜೂ.23ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ನಗರದ ಪತ್ರಕರ್ತರು ನೇರವಾಗಿ ಆಗಮಿಸಲು ಕೋರಲಾಗಿದೆ.

ಪತ್ರಿಕಾ ಆಹ್ವಾನ Read More »

ಕರಾವಳಿ

ಉಪ್ಪಿನಂಗಡಿ: ಬಸ್ ನಿಂದ ಬಿದ್ದು ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ಬಸ್ಸಿನಿಂದ ಬಿದ್ದು ಮಹಿಳೆಯೋರ್ವರು ಗಾಯಗೊಂಡ ಘಟನೆ ಇಲ್ಲಿನ ಸಮೀಪದ ಉರುವಾಲು ಗ್ರಾಮದ ಮಚ್ಚೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಉರುವಾಲು ಪದವು ನಿವಾಸಿ ಮುಸ್ತಫಾ ಎಂಬವರ ಪತ್ನಿ ಹಸೀನಾ (24) ಎಂದು ಗುರುತಿಸಲಾಗಿದೆ. ಇವರು ಬಸ್ಸಿನಿಂದ ಇಳಿಯುತ್ತಿದ್ದಂತೆಯೇ ಬಸ್ಸು ಮುಂದಕ್ಕೆ ಚಲಾಯಿಸಿದ್ದರಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು

ಉಪ್ಪಿನಂಗಡಿ: ಬಸ್ ನಿಂದ ಬಿದ್ದು ಮಹಿಳೆಗೆ ಗಾಯ Read More »

ಕರಾವಳಿ

ಹೆರಿಗೆ ವೇಳೆ ತೀವ್ರ ರಕ್ತಸ್ರಾವ- ತಾಯಿ ಮೃತಪಟ್ಟ ಪ್ರಕರಣ ➤ ಒಂದೇ ದಿನದೊಳಗೆ ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಉಂಟಾಗಿ ಬಾಣಂತಿ ಆಶಾ ಕಾರ್ಯಕರ್ತೆ ಮೃತಪಟ್ಟ ಬೆನ್ನಲ್ಲೇ ಇದೀಗ ಅವರ ಹಸುಗೂಸು ಕೂಡ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆಶಾ ಕಾರ್ಯಕರ್ತೆ ಭವ್ಯರವರು ತನ್ನ ಮೂರನೇ ಹೆರಿಗೆಗಾಗಿ ಜೂ. 20ರಂದು ದಾಖಲಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂದರ್ಭ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದರು. ಕಳೆದ ಮಂಗಳವಾರ ರಾತ್ರಿ ಮಗುವನ್ನು ಮಂಗಳೂರಿನ ವೆನ್‍ ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಹೆರಿಗೆ ವೇಳೆ ತೀವ್ರ ರಕ್ತಸ್ರಾವ- ತಾಯಿ ಮೃತಪಟ್ಟ ಪ್ರಕರಣ ➤ ಒಂದೇ ದಿನದೊಳಗೆ ಹಸುಗೂಸು ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಇಳಂತಿಲ ಗ್ರಾಮದ ಬನ್ನೆಂಗಳ ನಿವಾಸಿ, ಸೆಲ್ವದಾರ್ ಫೆರ್ನಾಂಡೀಸ್ (63) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ನಿತಿನ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವ್ಯಕ್ತಿ ಯಾವುದೋ ಕಾರ್ಯ ನಿಮಿತ್ತ ಉಪ್ಪಿನಂಗಡಿಯ ಎಚ್.ಎಂ ಹಾಲ್ ಬಳಿ ತನ್ನ

ಉಪ್ಪಿನಂಗಡಿ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಚಿನ್ನದಂಗಡಿ ಶುಭಾರಂಭಕ್ಕೂ ಮುನ್ನ ನಾಗಪ್ರಸಾದ್ ಸಾವು ಪ್ರಕರಣ ➤ ಅನುಮಾನಗಳಿಗೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್..!

(ನ್ಯೂಸ್ ಕಡಬ) newskadaba.com ಕಡಬ, ಜೂ. 23. ಚಿನ್ನದ ಅಂಗಡಿಯ ಉದ್ಘಾಟನೆಯ ದಿನವೇ ಗುಂಡ್ಯದ ಕೆಂಪು ಹೊಳೆ ಸಮೀಪ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಮರ್ಧಾಳದಲ್ಲಿ ಉದ್ಘಾಟನೆಗೆ ಸಜ್ಜಾಗಿದ್ದ ಐಶ್ವರ್ಯ ಗೋಲ್ಡ್ ಮಾಲಕ ಕಡಬ ನಿವಾಸಿ ದಯಾನಂದ ಆಚಾರ್ಯ ಎಂಬವರ ಪುತ್ರ ನಾಗಪ್ರಸಾದ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಬಗ್ಗೆ ಸಾರ್ವಜನಿಕವಾಗಿ ಹಲವು ಅನುಮಾನಗಳಿದ್ದ ಕಾರಣ ಪೊಲೀಸರು ಕೂಡ ಪೋಸ್ಟ್ ಮಾರ್ಟಮ್ ವರದಿಗಾಗಿ ಕಾಯುತ್ತಿದ್ದರು. ಇದೀಗ

ಕಡಬ: ಚಿನ್ನದಂಗಡಿ ಶುಭಾರಂಭಕ್ಕೂ ಮುನ್ನ ನಾಗಪ್ರಸಾದ್ ಸಾವು ಪ್ರಕರಣ ➤ ಅನುಮಾನಗಳಿಗೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top