ಕರಾವಳಿ

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಗುರುಪುರದಲ್ಲಿ ನಡೆದಿದೆ. ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ್ ಪೂಜಾರಿ (38) ಎಂದು ಗುರುತಿಸಲಾಗಿದೆ. ವಾಮಜೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಗುರುಪುರ ಶಾಖೆಯ ಉದ್ಯೋಗಿಯಾಗಿದ್ದ ಇವರು, ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. […]

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೈನುಗಾರರಿಗೆ ತಲಾ ಎರಡು ರಬ್ಬರ್ ನೆಲಹಾಸು ವಿತರಣೆ ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಶೇ.50ರ ಸಹಾಯದಲ್ಲಿ ಪ್ರತಿ ಹೈನುಗಾರರಿಗೆ ತಲಾ ಎರಡು ರಬ್ಬರ್ ನೆಲಹಾಸು (COW MAT) ವಿತರಿಸಲು ಅರ್ಹ ಹೈನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕ ವೆಚ್ಚ 5,598 ರೂ.ಗಳು ಕನಿಷ್ಠ ಎರಡು ಜಾನುವಾರುಗಳನ್ನು ಹೊಂದಿರುವ ಆಸಕ್ತ ಹೈನುಗಾರರು ಪಶುಪಾಲನಾ ಇಲಾಖೆಯ ತಾಲೂಕಾ ಮುಖ್ಯ ಪಶುವೈದ್ಯ ಅಧಿಕಾರಿ (ಆಡಳಿತ) ಸಂಪರ್ಕಿಸಿ 2023ರ ಜು. 05ರೊಳಗೆ ಅರ್ಜಿ ಸಲ್ಲಿಸಬಹುದು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೈನುಗಾರರಿಗೆ ತಲಾ ಎರಡು ರಬ್ಬರ್ ನೆಲಹಾಸು ವಿತರಣೆ ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಜೂ. 24ರಿಂದ ಹಲಸು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಹತ್ತಿರದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಇದೇ ಜೂ.24 ಹಾಗೂ 25ರಂದು ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಪ್ರಾದೇಶಿಕ ಹಲಸು, ಮಾವು ಹಾಗೂ ಇತರೆ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ಧಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಔಷಧೀಯ ಸಸಿಗಳು, ಕಸಿ ಗಿಡಗಳು, ಬೀಜಗಳು, ಸಾವಯವ ಬಳಗದ ವಿವಿಧ ಆಹಾರ ಮತ್ತಿತರ ಪದಾರ್ಥಗಳು,

ಮಂಗಳೂರು: ಜೂ. 24ರಿಂದ ಹಲಸು ಮೇಳ Read More »

ಕರಾವಳಿ

ಯೋಗದಿಂದ ರೋಗ ದೂರವಾಗುತ್ತದೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ದಿನವಿಡೀ ನಿಂತುಕೊಂಡು 8ರಿಂದ 12 ಗಂಟೆಯ ಕಾಲ ಕೆಲಸ ಮಾಡುವ ಗೃಹರಕ್ಷಕರಿಗೆ ದೈಹಿಕ ಆರೋಗ್ಯ ಅತೀ ಅಗತ್ಯ. ಟ್ರಾಫಿಕ್ ನಿಯಂತ್ರಣ, ನೆರೆ ನಿಯಂತ್ರಣ ಮತ್ತು ಬೆಂಕಿ ಅವಘಡ ಮುಂತಾದ ಒತ್ತಡದ ಸಂದರ್ಭದಲ್ಲಿ ಕೆಲಸ ನಿರ್ವಹಿಸುವಾಗ ಗೃಹರಕ್ಷಕರಿಗೆ ವಿಪರೀತ ಮಾನಸಿಕ ಒತ್ತಡದ ಸನ್ನಿವೇಶ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಅತೀ ಅವಶ್ಯಕ. ನಿರಂತರ ಯೋಗ ಮಾಡುವುದರಿಂದ ಜೀವನ

ಯೋಗದಿಂದ ರೋಗ ದೂರವಾಗುತ್ತದೆ ➤ ಡಾ|| ಚೂಂತಾರು Read More »

ಕರಾವಳಿ

ನಿತ್ಯ ನಿರಂತರವಾಗಿ ಯೋಗ ಮಾಡಿದರೆ ಆರೋಗ್ಯವಂತರಾಗಬಹುದು ➤ ಕಿರಣ್ ಗೋಗಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಸುಖವಾಗಿ ಬಾಳಬೇಕಾದರೆ ಆರೋಗ್ಯ ಮುಖ್ಯ ಅದಕ್ಕಾಗಿ ಯೋಗ ಪೂರಕವಾಗಿದೆ. ಭಾರತದಲ್ಲಿ ಎಲ್ಲವೂ ಇದೆ ಆದರೆ, ಅದನ್ನು ಬಳಸಿಕೊಳ್ಳುವುದಿಲ್ಲ. ನಿತ್ಯ ನಿರಂತರವಾಗಿ ಯೋಗ ಮಾಡಿದರೆ, ಆರೋಗ್ಯವಂತರಾಗಬಹುದು. ಈ ಕಾರ್ಯಕ್ರಮಕ್ಕೆ ಆಗಮಿಸಿ ಮಾನಸಿಕ ನೆಮ್ಮದಿ ಸಿಕ್ಕಿತು ಎಂದು ಅಧ್ಯಕ್ಷರು ಹಾಲು ಉತ್ಪಾದಕರ ಒಕ್ಕೂಟ, ಕುಟ್ರುಪ್ಪಾಡಿ ಹಾಗೂ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕಿರಣ್ ಗೋಗಟೆ ಹೇಳಿದರು. ಅವರು ಕಡಬದ ಕೇವಳ ಹನುಮಾನ್ ನಗರದ ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತಿ

ನಿತ್ಯ ನಿರಂತರವಾಗಿ ಯೋಗ ಮಾಡಿದರೆ ಆರೋಗ್ಯವಂತರಾಗಬಹುದು ➤ ಕಿರಣ್ ಗೋಗಟೆ Read More »

ಕರಾವಳಿ

ಬಿಳಿನೆಲೆ: ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ರಿಜಿಸ್ಟರ್ ಸುಬ್ರಮಣ್ಯ ಇದರ ಅಂಗಸಂಸ್ಥೆಯಾದ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಬುಧವಾರದಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಕೃಷ್ಣ ಶರ್ಮ ಕಾರ್ಯದರ್ಶಿಗಳು, ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ (ರಿ) ಇವರು ಮಾತನಾಡಿ, ಯೋಗವು ಮಾನವನ ಸರ್ವಾಂಗೀಣ ಬೆಳವಣಿಗೆಗೆ ಹಾಗೂ ಆರೋಗ್ಯಕರ ಜೀವನವನ್ನು ನೀಡುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಯೋಗದ

ಬಿಳಿನೆಲೆ: ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 22. ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿಶ್ವನಾಥ ನಡುತೋಟ, ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಯೋಗದ ಮಹತ್ವದ ಮಕ್ಕಳಿಗೆ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಯೋಗ ಪ್ರದರ್ಶನಗಳು ನಡೆದವು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂರ್ಕೀತ್ ಹೆಬ್ಬಾರ್ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ Read More »

ಕರಾವಳಿ

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ಕೌಕ್ರಾಡಿ ಗ್ರಾಮ ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಿಡಿಒ ವಿರುದ್ಧ ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಪಿಡಿಒ ಅವರನ್ನು ಕಚೇರಿಯಲ್ಲಿಯೇ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ..! Read More »

ಕರಾವಳಿ

ಅರಂತೋಡು: ಆರೋಗ್ಯಯುತ ಜೀವನಕ್ಕೆ ಯೋಗ ಸಹಕಾರಿ ➤ ಕೆ.ಆರ್ ಗಂಗಾಧರ್

(ನ್ಯೂಸ್ ಕಡಬ) newskadaba.com ಅರಂತೋಡು, ಜೂ. 22. ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕತ ಹಾಗೂ ಕಾಲೇಜಿನ ಸಂಚಾಲಕರಾದ ಕೆ. ಆರ್. ಗಂಗಾಧರ್ ಗಿಡಕ್ಕೆ ನೀರು ಹಾಕುವ ಮೂಲಕ ನೆರವೇರಿಸಿ ಮಾತನಾಡಿ, ಜಗತ್ತಿಗೆ ಭಾರತದ ಪ್ರಮುಖ ಕೊಡುಗೆಗಲ್ಲಿ ಯೋಗ ಪ್ರಮುಖವಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಗ ಪರಂಪರೆಗೆ ಅಂತಾರಾಷ್ಟ್ರೀಯ ಮಾನ್ಯತೆಯನ್ನು ತಂದು ಕೊಟ್ಟಿದ್ದಾರೆಂದು ಉಲ್ಲೇಖಿಸಿದರು. ಬಾಲ್ಯದಿಂದ ನಿರಂತರವಾಗಿ ಯೋಗವನ್ನು ಅಭ್ಯಾಸ ಮಾಡಿದಾಗ ಆರೋಗ್ಯಯುತ

ಅರಂತೋಡು: ಆರೋಗ್ಯಯುತ ಜೀವನಕ್ಕೆ ಯೋಗ ಸಹಕಾರಿ ➤ ಕೆ.ಆರ್ ಗಂಗಾಧರ್ Read More »

ಕರಾವಳಿ

ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ FTSC || (POCSO) ನ್ಯಾಯಾಲಯವು ಆರೋಪಿ ಮಲತಂದೆಗೆ 20 ವರ್ಷ ಜೈಲುಶಿಕ್ಷೆ ಪ್ರಕಟಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಅಶ್ವತ್ಥ್ ಎಂದು ಗುರುತಿಸಲಾಗಿದೆ. ಈತ ತನ್ನ ಮೊದಲ ಪತ್ನಿ ಹೆರಿಗೆಗೆ ಹೋಗಿದ್ದ  ವೇಳೆ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದಿದಲ್ಲದೇ, ಈ ವಿಷಯವನ್ನು ಯಾರಲ್ಲಾದರೂ ಹೇಳಿದರೆ ಕೊಲ್ಲುವುದಾಗಿಯೂ ಬೆದರಿಸಿದ್ದ ಎಂಬುವುದಾಗಿ ಮಂಗಳೂರು ಮಹಿಳಾ ಠಾಣೆಯಲ್ಲಿ

ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top