ಕರಾವಳಿ

ಉಳ್ಳಾಲ: ಭಾರಿ ಮಳೆಗೆ ಖಾಸಗಿ ಎಸ್ಟೇಟ್ ಕಾಂಪೌಂಡ್ ಗೋಡೆ ಕುಸಿದು ಮನೆ ನೆಲಸಮ; ಪ್ರಾಣಹಾನಿ ಮುಂಜಾಗ್ರತೆಯಿಂದ ಮುಕ್ತಿ

(ನ್ಯೂಸ್‌ ಕಡಬ) newskadaba.com,   ಜು.01 ಮಂಗಳೂರು: ಉಳ್ಳಾಲದ ತೊಕ್ಕೊಟ್ಟು ಬಳಿಯ ಕೆರೆಬೈಲ್‌ನಲ್ಲಿ ಖಾಸಗಿ ಎಸ್ಟೇಟ್‌ವೊಂದರ ಬೃಹತ್ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಪಕ್ಕದ ಕಿಶೋರ್ ಎಂಬುವವರ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಕಳೆದ ವರ್ಷ ಸುರಿದ ಭಾರಿ ಮಳೆಗೆ ಈ ಗೋಡೆ ಕಿಶೋರ್ ಅವರ ಮನೆಯತ್ತ ವಾಲಿತ್ತು. ಅಪಾಯವನ್ನು ಅರಿತ ಉಳ್ಳಾಲ ನಗರ ಪುರಸಭೆ ಅಧಿಕಾರಿಗಳು, ಎರಡು ವಾರಗಳ ಹಿಂದಷ್ಟೇ ಕಿಶೋರ್ ಅವರ ಕುಟುಂಬ ಸೇರಿದಂತೆ ಸುತ್ತಮುತ್ತಲಿನ 10 ಮನೆಗಳ ನಿವಾಸಿಗಳನ್ನು […]

ಉಳ್ಳಾಲ: ಭಾರಿ ಮಳೆಗೆ ಖಾಸಗಿ ಎಸ್ಟೇಟ್ ಕಾಂಪೌಂಡ್ ಗೋಡೆ ಕುಸಿದು ಮನೆ ನೆಲಸಮ; ಪ್ರಾಣಹಾನಿ ಮುಂಜಾಗ್ರತೆಯಿಂದ ಮುಕ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಇಂದಿನಿಂದ ಭೌತಿಕ ತಪಾಸಣೆ, ಈ ದಾಖಲೆಗಳು ಕಡ್ಡಾಯ

(ನ್ಯೂಸ್‌ ಕಡಬ) newskadaba.com,   ಜು.01: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಮರುಪರಿಶೀಲನಾ ಪ್ರಕ್ರಿಯೆ ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ರಾಜ್ಯದ 5 ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮತ್ತು ಸೆಸ್ಕ್ ವ್ಯಾಪ್ತಿಯಲ್ಲಿ ಈ ಮನೆ-ಮನೆ ತಪಾಸಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ಸಂಪೂರ್ಣ ವರದಿ ಇಲ್ಲಿದೆ:2023ರ ಜುಲೈನಲ್ಲಿ ಜಾರಿಗೆ ಬಂದ ಈ ಯೋಜನೆಯ ಫಲಾನುಭವಿಗಳ ಮನೆಗಳಿಗೆ ಎಸ್ಕಾಂಗಳ ಮೀಟರ್ ರೀಡರ್‌ಗಳು ಹಾಗೂ

ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಇಂದಿನಿಂದ ಭೌತಿಕ ತಪಾಸಣೆ, ಈ ದಾಖಲೆಗಳು ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋ ಸರಣಿ ವ್ಯತ್ಯಯ: ಬಿಎಂಆರ್‌ಸಿಎಲ್‌ಗೆ ಸಮಗ್ರ ತನಿಖೆ ನಡೆಸಲು ರೈಲ್ವೆ ಸುರಕ್ಷತಾ ಆಯುಕ್ತರ ಆದೇಶ

(ನ್ಯೂಸ್‌ ಕಡಬ) newskadaba.com,   ಜು.01: ಬೆಂಗಳೂರು ಮೆಟ್ರೋ ಜಾಲದಲ್ಲಿ ಇತ್ತೀಚೆಗೆ ಪದೇ ಪದೇ ಸಂಭವಿಸುತ್ತಿರುವ ತಾಂತ್ರಿಕ ದೋಷ ಹಾಗೂ ಸೇವಾ ವ್ಯತ್ಯಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು,ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬಿಎಂಆರ್‌ಸಿಎಲ್‌ಗೆ ಆದೇಶಿಸಿದ್ದಾರೆ. ಜೂನ್ 23 ರಂದು ಪರ್ಪಲ್ ಲೈನ್‌ನಲ್ಲಿ ಉಂಟಾಗಿದ್ದ ತಾಂತ್ರಿಕ ದೋಷದ ಕುರಿತು ತನಿಖೆ ನಡೆಸುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಜೂನ್ 25 ರಂದು ರೈಲ್ವೆ ಸುರಕ್ಷತಾ ಆಯುಕ್ತರಿಗೆ

ನಮ್ಮ ಮೆಟ್ರೋ ಸರಣಿ ವ್ಯತ್ಯಯ: ಬಿಎಂಆರ್‌ಸಿಎಲ್‌ಗೆ ಸಮಗ್ರ ತನಿಖೆ ನಡೆಸಲು ರೈಲ್ವೆ ಸುರಕ್ಷತಾ ಆಯುಕ್ತರ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು-ಮಂಗಳೂರು ನಡುವೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿ: ಕೇಂದ್ರ ಸಚಿವ ವಿ. ಸೋಮಣ್ಣ ಪ್ರಕಟಣೆ

(ನ್ಯೂಸ್‌ ಕಡಬ) newskadaba.com,   ಜು.01: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತಲಿನ ನಗರಗಳಿಗೆ ಹಾಗೂ ಕರಾವಳಿಯ ಮಂಗಳೂರಿಗೆ ಚತುಷ್ಪಥ ರೈಲ್ವೆ ಮಾರ್ಗವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಪ್ರಕಟಿಸಿದ್ದಾರೆ. ಚನ್ನಪಟ್ಟಣದ ಎಲೆಕೇರಿ ಬಳಿ ನೂತನ ರಸ್ತೆ ಮೇಲ್ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು. ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಮಂಡಿಸಿದ ಕರ್ನಾಟಕದ ರೈಲ್ವೆ ಬೇಡಿಕೆಗಳಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಚತುಷ್ಪಥ ಮಾರ್ಗದ ಸರ್ವೆ

ಬೆಂಗಳೂರು-ಮಂಗಳೂರು ನಡುವೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿ: ಕೇಂದ್ರ ಸಚಿವ ವಿ. ಸೋಮಣ್ಣ ಪ್ರಕಟಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾಜಿ ಪಿಎ ಸಂದೀಪ್ ಸಾಲಿಯನ್ ಗೋವಾದಲ್ಲಿ ಅನುಮಾನಾಸ್ಪದ ಮೃತ್ಯು!

(ನ್ಯೂಸ್‌ ಕಡಬ) newskadaba.com,   ಜು.01: ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ (PA) ಸಂದೀಪ್ ಸಾಲಿಯನ್ (40) ಅವರು ಗೋವಾದ ಕಲ್ಲಂಗೂಟ್‌ ಬೀಚ್ ಬಳಿಯ ಅತಿಥಿ ಗೃಹವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಮೂಲದವರಾದ ಸಂದೀಪ್ ಸಾಲಿಯನ್, ಹಲವು ವರ್ಷಗಳ ಹಿಂದೆಯೇ ಆಪ್ತ ಸಹಾಯಕ ಕೆಲಸವನ್ನು ತೊರೆದಿದ್ದರು. ಪ್ರಸ್ತುತ ಅವರು ಪ್ರವಾಸೋದ್ಯಮ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದು, ಮಲ್ಪೆಯಲ್ಲಿ ಪ್ರವಾಸಿ ದೋಣಿಯೊಂದನ್ನು ಹೊಂದಿದ್ದರು. ಮೂರು ದಿನಗಳ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾಜಿ ಪಿಎ ಸಂದೀಪ್ ಸಾಲಿಯನ್ ಗೋವಾದಲ್ಲಿ ಅನುಮಾನಾಸ್ಪದ ಮೃತ್ಯು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಜುಲೈ ಆರಂಭದಲ್ಲೇ ಭಾರೀ ಕುಸಿದ ಚಿನ್ನದ ಬೆಲೆ!

(ನ್ಯೂಸ್‌ ಕಡಬ) newskadaba.com,   ಜು.01 24 ಕ್ಯಾರಟ್ ಚಿನ್ನ: ಜುಲೈ 1ರಂದು 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಸುಮಾರು ₹1,260 ಇಳಿಕೆಯಾಗಿದ್ದು, ಪ್ರತಿ ಗ್ರಾಮ್ ದರ ₹14,078 ಕ್ಕೆ ತಲುಪಿದೆ. 22 ಕ್ಯಾರಟ್ ಆಭರಣ ಚಿನ್ನ: ಇಂದು 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹1,150 ಇಳಿಕೆಯಾಗಿದ್ದು, ಪ್ರತಿ ಗ್ರಾಮ್ ದರ ₹12,905 ಆಗಿದೆ.

ಚಿನ್ನದ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಜುಲೈ ಆರಂಭದಲ್ಲೇ ಭಾರೀ ಕುಸಿದ ಚಿನ್ನದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಸೌಮ್ಯ ಶೆಟ್ಟಿ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 01. ಕಳೆದ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ನವ ವಿವಾಹಿತ ಸುದೀಪ್ ರೈ ನೆಲ್ಯಾಡಿ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಸೌಮ್ಯ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿದ್ದ ಕಡಬ ತಾಲೂಕಿನ ನೆಲ್ಯಾಡಿಯ ಸುದೀಪ್ ರೈ ಆತ್ಮಹತ್ಯೆ ಗೆ ಪತ್ನಿ ಸೌಮ್ಯ ಶೆಟ್ಟಿ ನೀಡಿರುವ ಮಾನಸಿಕ ಕಿರುಕುಳ ಹಾಗೂ ಆತ್ಮಹತ್ಯೆ ಪ್ರಚೋದನೆಯೇ ಕಾರಣ ಎಂದು ಪ್ರಕರಣ ದಾಖಲಾಗಿತ್ತು. ಸುದೀಪ್ ರೈ ಅವರ ತಂದೆ ಬಿ.ದಾಮೋದರ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಸೌಮ್ಯ ಶೆಟ್ಟಿ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ವಹಣಾ ವೆಚ್ಚದ ಹಿನ್ನೆಲೆ: ನೈಸ್ ರಸ್ತೆ ಟೋಲ್ ದರ ಹೆಚ್ಚಳ; ಬಿಎಂಟಿಸಿ ಪ್ರಯಾಣಿಕರಿಗೂ ತಟ್ಟಲಿದೆಯೇ ಬಿಸಿ?

(ನ್ಯೂಸ್‌ ಕಡಬ) newskadaba.com,   ಜು.01:ನಿರ್ವಹಣಾ ವೆಚ್ಚಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ನೈಸ್‌ ರಸ್ತೆ ಹಾಗೂ ಎಲೆಕ್ಟ್ರಾನಿಕ್ಸ್‌ ಸಿಟಿ ಫ್ಲೈಓವರ್‌ ಟೋಲ್‌ ದರಗಳನ್ನು ಇಂದಿನಿಂದ ಜಾರಿಗೆ ಬರುವಂತೆ ಏರಿಕೆ ಮಾಡಲಾಗಿದೆ. ಪ್ರಯಾಣದ ದೂರ ಹಾಗೂ ವಾಹನಗಳ ಪ್ರಕಾರಕ್ಕೆ ಅನುಗುಣವಾಗಿ ದರ ಪರಿಷ್ಕರಣೆ ನಡೆದಿದೆ. ಹೊಸೂರು ರಸ್ತೆ – ಬನ್ನೇರುಘಟ್ಟ ರಸ್ತೆ: ಕಾರುಗಳು: ₹65 ರಿಂದ ₹72 ಕ್ಕೆ ಏರಿಕೆ. ದ್ವಿಚಕ್ರ ವಾಹನಗಳು: ₹30 ರಿಂದ ₹33 ಕ್ಕೆ ಏರಿಕೆ. ಬಸ್‌ಗಳು: ₹195 ರಿಂದ ₹215 ಕ್ಕೆ ಹೆಚ್ಚಳ.

ನಿರ್ವಹಣಾ ವೆಚ್ಚದ ಹಿನ್ನೆಲೆ: ನೈಸ್ ರಸ್ತೆ ಟೋಲ್ ದರ ಹೆಚ್ಚಳ; ಬಿಎಂಟಿಸಿ ಪ್ರಯಾಣಿಕರಿಗೂ ತಟ್ಟಲಿದೆಯೇ ಬಿಸಿ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬಕ: ತಡರಾತ್ರಿ ನಿಯಮ ಮೀರಿ ತೆರೆದಿದ್ದ ಹೋಟೆಲ್ ಬಂದ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಗ್ರಾಹಕನ ವಿರುದ್ಧ ಕಾನೂನು ಕ್ರಮ

(ನ್ಯೂಸ್‌ ಕಡಬ) newskadaba.com,   ಜು.01: ಕಬಕ ಜಂಕ್ಷನ್ ಬಳಿ ನಿಯಮಬಾಹಿರವಾಗಿ ತಡರಾತ್ರಿವರೆಗೆ ತೆರೆದಿದ್ದ ಹೋಟೆಲ್ ಮುಚ್ಚುವಂತೆ ಸೂಚಿಸಿದ ಗಸ್ತು ಪೊಲೀಸರೊಂದಿಗೆ ಗ್ರಾಹಕರೊಬ್ಬರು ವಾಗ್ವಾದ ನಡೆಸಿದ ಘಟನೆಗೆ ಸಂಬಂಧಿಸಿ, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಜೂನ್ 18ರ ತಡರಾತ್ರಿ 1:30ರ ಸುಮಾರಿಗೆ ಮೊಹಮ್ಮದ್ ಆಸಿಫ್ ಮಾಲೀಕತ್ವದ ‘ಕೆಎಸ್ ಅಲ್ಫಾ ಕಾರ್ನರ್’ ಹೋಟೆಲ್ ನಿಯಮ ಮೀರಿ ತೆರೆದಿರುವುದನ್ನು ಗಮನಿಸಿದ ಪೊಲೀಸರು ಅದನ್ನು ಮುಚ್ಚಲು ಸೂಚಿಸಿದರು. ಈ ವೇಳೆ ಹೋಟೆಲ್‌ನಲ್ಲಿದ್ದ ಗ್ರಾಹಕ, ಕಬಕ ನಿವಾಸಿ ಉಜ್ವಲ್ ಕುಮಾರ್ ಪ್ರಭು (45)

ಕಬಕ: ತಡರಾತ್ರಿ ನಿಯಮ ಮೀರಿ ತೆರೆದಿದ್ದ ಹೋಟೆಲ್ ಬಂದ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಗ್ರಾಹಕನ ವಿರುದ್ಧ ಕಾನೂನು ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ

(ನ್ಯೂಸ್‌ ಕಡಬ) newskadaba.com,   ಜು.01:: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ ಬೆನ್ನಲ್ಲೇ, ಬೆಲೆಯಲ್ಲಿ ಭಾರಿ ಇಳಿಕೆ ಮಾಡಿದೆ. ಜುಲೈ 1ರಿಂದ ಜಾರಿಗೆ ಬರುವಂತೆ 19 ಕೆ.ಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹183.50 ಕಡಿತಗೊಳಿಸಲಾಗಿದೆ.ಈ ಇಳಿಕೆಯಿಂದಾಗಿ ₹3,113.50 ಇದ್ದ ಸಿಲಿಂಡರ್ ಬೆಲೆ ಈಗ ₹2,930 ಕ್ಕೆ ತಲುಪಿದೆ. 14.2 ಕೆ.ಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top