ಕರಾವಳಿ

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 17. ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂ. 15ರ ಗುರುವಾರದಂದು ಮನೆಯೊಡತಿ ಗುಣವತಿ ಎಂಬವರು ಬೆಳಗ್ಗೆ 8-30 ರ ವೇಳೆಗೆ ಮನೆಯ ಹಿಂಬಾಗಿಲನ್ನು ಮುಚ್ಚಿ ಎದುರು ಬಾಗಿಲಿಗೆ ಬೀಗ ಹಾಕಿ ತೋಟದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮಧ್ಯಾಹ್ನ ಸುಮಾರು 1-30ರ ವೇಳೆಗೆ ಊಟಕ್ಕೆಂದು ಮನೆಗೆ ಬಂದಾಗ ಹಿಂಬಾಗಿಲು […]

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೊಹಮ್ಮದ್‌ ನೂಹ್ಮನ್‌ (19) ಎಂದು ಗುರುತಿಸಲಾಗಿದೆ. ಈತ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಆನ್ಸ್ ಶಾಲಾ ಮಂತ್ರಿಮಂಡಲ ರಚನೆ ➤ ಶಾಲಾ ನಾಯಕನಾಗಿ ಅಖಿಲ್, ಉಪನಾಯಕಿಯಾಗಿ ಧೃತಿ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲದ ರಚನೆಗಾಗಿ ಚುನಾವಣೆ ನಡೆಸಿ ವಿದ್ಯಾರ್ಥಿ ನಾಯಕರನ್ನು ಆರಿಸಲಾಯಿತು. ಸೈಂಟ್ ಆನ್ಸ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ಮತದಾರ ವಿದ್ಯಾರ್ಥಿಗಳ ಬೆರಳಿಗೆ ಶಾಯಿ ಗುರುತು ಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದರು. ಶಾಲೆಯ ಮೂರರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳು ಮತ ಚಲಾಯಿಸಿದರು. ಶಾಲಾ ನಾಯಕನಾಗಿ ಅಖಿಲ್, ಉಪಶಾಲಾ ನಾಯಕಿಯಾಗಿ

ಕಡಬ: ಸೈಂಟ್ ಆನ್ಸ್ ಶಾಲಾ ಮಂತ್ರಿಮಂಡಲ ರಚನೆ ➤ ಶಾಲಾ ನಾಯಕನಾಗಿ ಅಖಿಲ್, ಉಪನಾಯಕಿಯಾಗಿ ಧೃತಿ ರೈ ಆಯ್ಕೆ Read More »

ಕರಾವಳಿ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಇಲ್ಲಿನ ಸೈಂಟ್ ಆನ್ಸ್ ಶಾಲೆಯಲ್ಲಿ ಅಬಾಕಸ್ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಗುರುವಾರದಂದು ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಅನ್ಸ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ಧಿಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಅಬಾಕಸ್ ತರಗತಿಯ ಬಗ್ಗೆ ತರಬೇತಿ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಕರಾವಳಿ

ಕಡಬ ತಾಲೂಕಿನ 21 ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದ್ದು, ಕಡಬ ತಾಲೂಕಿನ 21 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯು ಶನಿವಾರದಂದು ನಡೆಯಿತು. ಮೀಸಲಾತಿ ಈ ರೀತಿ ಇದೆ.

ಕಡಬ ತಾಲೂಕಿನ 21 ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ

ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದ ಸರಕಾರಕ್ಕೆ ಬಾರತೀಯ ಕ್ರೈಸ್ತ ಒಕ್ಕೂಟದಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಕಳೆದ ಬಿಜೆಪಿ ಸರಕಾರ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದಿದ್ದನ್ನು ಭಾರತೀಯ ಕ್ರೈಸ್ತ ಒಕ್ಕೂಟ ಸ್ವಾಗತಿಸುತ್ತದೆ ಇದಕ್ಕಾಗಿ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಹೇಳಿದ್ದಾರೆ. ಈ ಜನ ವಿರೋಧಿ ಕಾಯ್ದೆಯನ್ನು ಬಿಜೆಪಿ ಸರಕಾರ ಜಾರಿಗೆ ತರಲು ಮುಂದಾದಾಗ ಈ ಕಾಯ್ದೆ ವಿರುದ್ಧ ಅಧಿವೇಶನ ನಡೆಯುವ ಸಂದರ್ಭ ಬೆಳಗಾವಿಯ ವಿಧಾನಸೌಧದ ಎದುರು ಭಾರತೀಯ ಕ್ರೈಸ್ತ ಒಕ್ಕೂಟ ಈ ಕಾಯ್ದೆ ವಿರುದ್ಧ ಒಂದು

ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದ ಸರಕಾರಕ್ಕೆ ಬಾರತೀಯ ಕ್ರೈಸ್ತ ಒಕ್ಕೂಟದಿಂದ ಅಭಿನಂದನೆ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ರವರಿಗೆ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ ಕುರಿತು ವರದಿಯಾಗಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಫ್ಲೆಕ್ಸ್ ಗಳನ್ನ ಹರಿದು ಹಾಕಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು Read More »

ಕರಾವಳಿ

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17.  ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಧ್ಯಾನ್ ಹಾಗೂ ರಮೇಶ್ ಎಂದು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17. ಖಾಸಗಿ ಬಸ್ ಚಾಲಕರೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದ್ದು, ತಾಲೂಕಿನ 25 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯು ಶನಿವಾರದಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮೀಸಲಾತಿ ಈ ರೀತಿ ಇದೆ. ಕೊಡಿಯಾಲ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ. ಬಾಳಿಲ: ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ ಬೆಳ್ಳಾರೆ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‌ಸಿ ಮಹಿಳೆ, ಪೆರುವಾಜೆ: ಸಾಮಾನ್ಯ, ಉಪಾಧ್ಯಕ್ಷ:

ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ Read More »

ಕರಾವಳಿ
Scroll to Top