ಕರಾವಳಿ

ಕಡಬ ತಾಲೂಕಿನ 21 ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದ್ದು, ಕಡಬ ತಾಲೂಕಿನ 21 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯು ಶನಿವಾರದಂದು ನಡೆಯಿತು. ಮೀಸಲಾತಿ ಈ ರೀತಿ ಇದೆ.

ಕಡಬ ತಾಲೂಕಿನ 21 ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ

ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದ ಸರಕಾರಕ್ಕೆ ಬಾರತೀಯ ಕ್ರೈಸ್ತ ಒಕ್ಕೂಟದಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಕಳೆದ ಬಿಜೆಪಿ ಸರಕಾರ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದಿದ್ದನ್ನು ಭಾರತೀಯ ಕ್ರೈಸ್ತ ಒಕ್ಕೂಟ ಸ್ವಾಗತಿಸುತ್ತದೆ ಇದಕ್ಕಾಗಿ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಹೇಳಿದ್ದಾರೆ. ಈ ಜನ ವಿರೋಧಿ ಕಾಯ್ದೆಯನ್ನು ಬಿಜೆಪಿ ಸರಕಾರ ಜಾರಿಗೆ ತರಲು ಮುಂದಾದಾಗ ಈ ಕಾಯ್ದೆ ವಿರುದ್ಧ ಅಧಿವೇಶನ ನಡೆಯುವ ಸಂದರ್ಭ ಬೆಳಗಾವಿಯ ವಿಧಾನಸೌಧದ ಎದುರು ಭಾರತೀಯ ಕ್ರೈಸ್ತ ಒಕ್ಕೂಟ ಈ ಕಾಯ್ದೆ ವಿರುದ್ಧ ಒಂದು

ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದ ಸರಕಾರಕ್ಕೆ ಬಾರತೀಯ ಕ್ರೈಸ್ತ ಒಕ್ಕೂಟದಿಂದ ಅಭಿನಂದನೆ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ರವರಿಗೆ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ ಕುರಿತು ವರದಿಯಾಗಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಫ್ಲೆಕ್ಸ್ ಗಳನ್ನ ಹರಿದು ಹಾಕಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು

ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು Read More »

ಕರಾವಳಿ

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17.  ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಧ್ಯಾನ್ ಹಾಗೂ ರಮೇಶ್ ಎಂದು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17. ಖಾಸಗಿ ಬಸ್ ಚಾಲಕರೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದ್ದು, ತಾಲೂಕಿನ 25 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯು ಶನಿವಾರದಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮೀಸಲಾತಿ ಈ ರೀತಿ ಇದೆ. ಕೊಡಿಯಾಲ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ. ಬಾಳಿಲ: ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ ಬೆಳ್ಳಾರೆ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‌ಸಿ ಮಹಿಳೆ, ಪೆರುವಾಜೆ: ಸಾಮಾನ್ಯ, ಉಪಾಧ್ಯಕ್ಷ:

ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ Read More »

ಕರಾವಳಿ

ನೆಲ್ಯಾಡಿ: ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ಆರು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.17. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಾಳುಗಳನ್ನು ಬೆಂಗಳೂರು ಆರ್.ಟಿ. ನಗರ ನಿವಾಸಿಗಳೆಂದು ಗುರುತಿಸಲಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ನೆಲ್ಯಾಡಿ: ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ಆರು ಮಂದಿ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶಿಸ್ತು ಬದ್ಧ, ಜನಪರ ಕೆಲಸ ಮಾಡದ ಅಧಿಕಾರಿಗಳು ಇಲಾಖೆಗೆ ಬೇಡವೇ ಬೇಡ ➤ ಸಚಿವ ಮಂಕಾಳ ವೈದ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಸಂತ್ರಸ್ತ ಮೀನುಗಾರರು ಹಾಗೂ ಅವರ ಕುಟುಂಬಕ್ಕೆ ಸಕಾಲದಲ್ಲಿ ಪರಿಹಾರ ನೀಡದೇ ಇದ್ದಲ್ಲಿ ಅಥವಾ ವಿಳಂಬವಾದರೆ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಶಿಸ್ತು ಬದ್ಧ ಹಾಗೂ ಜನರ ಕೆಲಸ ಮಾಡದ ಅಧಿಕಾರಿಗಳು ಈ ಇಲಾಖೆಗೆ ಬೇಡವೇ ಬೇಡ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ವೈದ್ಯ ಅವರು ತಾಕೀತು ಮಾಡಿದರು. ಅವರು ಜೂ.16ರ ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕಡಲ್ಕೊರೆತ ಸೇರಿದಂತೆ ಬಂದರು, ಮೀನುಗಾರಿಕೆ

ಶಿಸ್ತು ಬದ್ಧ, ಜನಪರ ಕೆಲಸ ಮಾಡದ ಅಧಿಕಾರಿಗಳು ಇಲಾಖೆಗೆ ಬೇಡವೇ ಬೇಡ ➤ ಸಚಿವ ಮಂಕಾಳ ವೈದ್ಯ Read More »

ಕರಾವಳಿ

ಜೂ. 19 ರಿಂದ ಜುಲೈ 6 ರವರೆಗೆ ಕುಷ್ಠರೋಗ ಪತ್ತೆ ಅಭಿಯಾನ ➤ಡಾ. ಕಿಶೋರ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಕುಷ್ಠರೋಗ ದೇವರ ಶಾಪವಲ್ಲ ಹಾಗೂ ಅನುವಂಶಿಕವಾಗಿ ಬರುವ ರೋಗವಲ್ಲ, ಅದರ ವಿರುದ್ಧದ ಹೋರಾಟದಲ್ಲಿ ವೈದ್ಯಕೀಯವಾಗಿ ಗಮನಾರ್ಹ ಯಶಸ್ಸು ಸಾಧಿಸಿದ್ದರೂ ಸಹ ಸಾಮಾಜಿಕವಾಗಿ ಸಾಧಿಸಬೇಕಾದದ್ದು ಬಹಳಷ್ಟಿದೆ ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಅಭಿಪ್ರಾಯಪಟ್ಟರು. ಅವರು ಶುಕ್ರವಾರದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ 2023-24ನೇ ಸಾಲಿನ ಎಲ್ ಸಿ ಡಿ ಸಿ ಕುಷ್ಠರೋಗ ವಿಶೇಷ ಸಮೀಕ್ಷೆ ಅಂಗವಾಗಿ

ಜೂ. 19 ರಿಂದ ಜುಲೈ 6 ರವರೆಗೆ ಕುಷ್ಠರೋಗ ಪತ್ತೆ ಅಭಿಯಾನ ➤ಡಾ. ಕಿಶೋರ್ ಕುಮಾರ್ Read More »

ಕರಾವಳಿ

ಅಪರಿಚಿತ ಮೃತದೇಹಗಳ ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಇಲ್ಲಿನ ವೆನ್‍ಲಾಕ್ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ವಾರಸುದಾರರಿಲ್ಲದೇ ವಿಲೇವಾರಿಯಾಗದ 2 ಮೃತದೇಹಗಳಿವೆ. ಆ ಮೃತದೇಹಗಳ ವಾರಸುದಾರರು ಯಾರಾದರೂ ಇದ್ದಲ್ಲಿ ಗುರುತು ಚೀಟಿಯನ್ನು ಕಚೇರಿಗೆ ಸಲ್ಲಿಸಿ 7 ದಿನದೂಳಗೆ ಮೃತದೇಹಗಳನ್ನು ಪಡೆಯಬಹುದೆಂದು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಮತ್ತು ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರಿಚಿತ ಮೃತದೇಹಗಳ ವಿಲೇವಾರಿ Read More »

ಕರಾವಳಿ
Scroll to Top