ಕರಾವಳಿ

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ . 17.  ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ, ಕಮಿಷನ್ ನೀಡುವುದಾಗಿ ನಂಬಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜೂ.7 ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಸಂದೇಶ ಮತ್ತು ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದು ಈ ಮೂಲಕ ಟಾಸ್ಕ್ ಪೂರೈಸಿದರೆ ಕಮಿಷನ್ ನೀಡುವುದಾಗಿ ಹೇಳಿ ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು 2.59 ಲ.ರೂ ಗಳನ್ನು ವರ್ಗಾಯಿಸಿದ್ದಾರೆ,ಆದರೆ ಅವರಿಗೆ ಹಣ ನೀಡದೆ ವಂಚನೆ ಮಾಡಲಾಗಿದೆ ಎಂದು ನಗರದ ಸೆನ್ ಠಾಣೆಯಲ್ಲಿ  […]

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲೆಯ ವಿವಿಧ ವೈದ್ಯಕೀಯ ಕಾಲೇಜುಗಳ ಸಹಯೋಗ ➤ ಇಂದಿನಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಇದೇ ಜೂ.17ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದೆ. ಜೂ.17ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಜೂ.20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಮತ್ತು ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಜೂ.21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಸದುಪಯೋಗ ಪಡೆಯುವಂತೆ ಜಿಲ್ಲಾ

ದ.ಕ ಜಿಲ್ಲೆಯ ವಿವಿಧ ವೈದ್ಯಕೀಯ ಕಾಲೇಜುಗಳ ಸಹಯೋಗ ➤ ಇಂದಿನಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಜಿಲ್ಲೆಯಾದ್ಯಂತ ಇದೇ ತಿಂಗಳ 21ರಂದು ಹಮ್ಮಿಕೊಳ್ಳಲಾಗಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್ ಅವರಿಗೆ ನಿರ್ದೇಶನ ನೀಡಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆಯುಷ್ಯ ಇಲಾಖೆ, ಆಯುಷ್ ಕಾಲೇಜುಗಳು, ವಿವಿಧ ಇಲಾಖೆಗಳು, ವಿವಿಧ

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ Read More »

ಕರಾವಳಿ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿಗಳನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರಕಾರ ಘೋಷಣೆ ಮಾಡಿದೆ . ಬಿಜೆಪಿ ಕಾರ್ಯಕರ್ತ ದೀಪಕ್​ ರಾವ್​ ಹಾಗೂ ಮುಸ್ಲಿಂ ಸಮುದಾಯದ ಮೂವರು ಯುವಕರ ಕುಟುಂಬಕ್ಕೆ ಈ ಪರಿಹಾರ ಸಿಗಲಿದೆ. ಮಂಗಳೂರಿನಲ್ಲಿ 2018ರ ಜನವರಿ ಮೂರರಂದು ಕೊಲೆಯಾದ ಕಾಟಿಪಳ್ಳದ ದೀಪಕ್​ ರಾವ್​, 2022ರ ಜುಲೈ 19ರಂದು ಮೃತಪಟ್ಟ ಬೆಳ್ಳಾರೆಯ ಮಸೂದ್​, ಜುಲೈ 28ರಂದು ಕೊಲೆಯಾದ ಮಂಗಳಪೇಟೆಯ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಸೌಜನ್ಯ ಕೊಲೆ ಪ್ರಕರಣ- ಸಂತೋಷ್ ರಾವ್ ದೋಷಮುಕ್ತ ➤ ತೀರ್ಪು ಪ್ರಕಟಿಸಿದ ಸಿಬಿಐ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ. 16. ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ಕೋರ್ಟ್‌ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ ನಿರ್ದೋಷಿ ಎಂದು ಕೇಸಿನಿಂದ ಖುಲಾಸೆ ಮಾಡಿದೆ. ಸಂತೋಷ್‌ ರಾವ್‌ ವಿರುದ್ದ ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷ ಮುಕ್ತಗೊಳಿಸಿರುವುದಾಗಿ ನ್ಯಾಯಮೂರ್ತಿ ಸಿ ಬಿ ಸಂತೋಷ್‌ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಉಜಿರೆ ಎಸ್‌ ಡಿ ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾಳನ್ನು ಅಪಹರಿಸಿ

ಸೌಜನ್ಯ ಕೊಲೆ ಪ್ರಕರಣ- ಸಂತೋಷ್ ರಾವ್ ದೋಷಮುಕ್ತ ➤ ತೀರ್ಪು ಪ್ರಕಟಿಸಿದ ಸಿಬಿಐ Read More »

ಕರಾವಳಿ, ಕರ್ನಾಟಕ

ದ.ಕ ಜಿಪಂ ಸಿಇಒ ಡಾ.ಕುಮಾರ್ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ಮುಂಭಡ್ತಿ ನೀಡಿ ವರ್ಗಾವಣೆಗೊಳಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿರುವ ರಾಜ್ಯ ಸರಕಾರ, ತೆರವಾ ದ.ಕ ಜಿ.ಪಂ ಸಿಇಒ ಸ್ಥಾನಕ್ಕೆ ಯಾರನ್ನೂ ನೇಮಿಸಿಲ್ಲ.  

ದ.ಕ ಜಿಪಂ ಸಿಇಒ ಡಾ.ಕುಮಾರ್ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ Read More »

ಕರಾವಳಿ

ಪುತ್ತೂರು: ಅಖಿಲ ಭಾರತ ಶಾಸಕಾಂಗ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಮುಂಬಯಿಯ ಜಿಯೋ ಕನ್ವೆನ್ಶನ್ ಸೆಂಟರ್ ನಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಭಾಗವಹಿಸಿದರು. ಈ ಸಮ್ಮೇಳನದಲ್ಲಿ ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ದೇಶದ ವಿವಿಧೆಡೆಯಿಂದ ಸುಮಾರು‌ 2000 ಮಂದಿ ಸೇರಿದಂತೆ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮಾವೇಶಕ್ಕೆ ಜೂನ್‌ 17ರ ಶನಿವಾರ ತೆರೆ ಬೀಳಲಿದೆ.

ಪುತ್ತೂರು: ಅಖಿಲ ಭಾರತ ಶಾಸಕಾಂಗ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ Read More »

ಕರಾವಳಿ

ಬೆಳ್ಳಾರೆ: ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 16. ಬಿಜೆಪಿ ಪಕ್ಷವು ಜಗತ್ತಿನ ಅತೀ ದೊಡ್ಡ ಪಕ್ಷವಾಗಿ ಬೆಳೆಯಲು ಹಿರಿಯರ ಬಲಿದಾನ ಮತ್ತು ಅರ್ಪಣಾ ಮನೋಭಾವವೇ ಕಾರಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಜೂ. 16ರಂದು ನಡೆದ ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಳಿಕ ಮಾತನಾಡಿದ ಅವರು ಶಾಸಕಿ ಸ್ಥಾನಕ್ಕೆ ಆಭ್ಯರ್ಥಿಯಾಗಿ ನನನ್ನು ಪಕ್ಷ ಆಯ್ಕೆ ಮಾಡಿ, ಕಾರ್ಯಕರ್ತರ ಪರಿಶ್ರಮದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಇದಕ್ಕಾಗಿ ಎಲ್ಲರಿಗೂ ಕೃತಜ್ಞತೆ

ಬೆಳ್ಳಾರೆ: ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ Read More »

ಕರಾವಳಿ

ಪುತ್ತೂರು ನಗರ ಠಾಣಾ ಕ್ರೈಂ ಎಸ್.ಐ ಭವಾನಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಕ್ರೈಂ ಎಸ್.ಐ ಆಗಿರುವ ಭವಾನಿ ಅವರನ್ನು ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಅದೇಶಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಕರ್ತವ್ಯದಲ್ಲಿದ್ದ ಅವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಅವರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.

ಪುತ್ತೂರು ನಗರ ಠಾಣಾ ಕ್ರೈಂ ಎಸ್.ಐ ಭವಾನಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ Read More »

ಕರಾವಳಿ

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಮತ್ತು ನಗರ ಫೀಡರ್‌ನಲ್ಲಿ ಜೂ.17ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆ.ವಿ ಮತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಹಾಗೂ ನಗರ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನಗರ, ಕಬಕ, ಕೊಡಿಪ್ಪಾಡಿ, ಬನ್ನೂರು, ಬಲ್ನಾಡು, ನವನಗರ, ವಿವೇಕಾನಂದ ಕಾಲೇಜು ಪರಿಸರ, ಪಡ್ಡಾಯೂರು ಗ್ರಾಮದ ವಿದ್ಯುತ್

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ Read More »

ಕರಾವಳಿ
Scroll to Top