ಕರಾವಳಿ

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಮತ್ತು ನಗರ ಫೀಡರ್‌ನಲ್ಲಿ ಜೂ.17ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆ.ವಿ ಮತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಹಾಗೂ ನಗರ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನಗರ, ಕಬಕ, ಕೊಡಿಪ್ಪಾಡಿ, ಬನ್ನೂರು, ಬಲ್ನಾಡು, ನವನಗರ, ವಿವೇಕಾನಂದ ಕಾಲೇಜು ಪರಿಸರ, ಪಡ್ಡಾಯೂರು ಗ್ರಾಮದ ವಿದ್ಯುತ್ […]

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ Read More »

ಕರಾವಳಿ

ನಾಳೆ ಕಡಬ ತಾಲೂಕಿನ 21 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 16. ತಾಲೂಕಿನ 21 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯು ಜೂ.17 ರಂದು ಬೆಳಗ್ಗೆ 10.30 ಕ್ಕೆ ಸುಳ್ಯ ಹಾಗೂ 11.30 ಕ್ಕೆ ಕಡಬ ತಾಲೂಕಿನ ಗ್ರಾಮ ಪಂಚಾಯತ್ ಗಳ ಮಿಸಲಾತಿ ಪ್ರಕ್ರಿಯೆಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ನಾಳೆ ಕಡಬ ತಾಲೂಕಿನ 21 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ Read More »

ಕರಾವಳಿ

ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರದಂದು ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ Read More »

ಕರಾವಳಿ

ಮಂಗಳೂರು: ಆನ್-ಲೈನ್ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಆನ್-ಲೈನ್ ಗೂಗಲ್ ರಿವೀವ್ ಟಾಸ್ಕ್ ಕೆಲಸ ಮಾಡಿದಲ್ಲಿ ಕಮಿಷನ್ ನೀಡುವುದ಻ಗಿ ನಂಬಿಸಿ ಸುಮಾರು 1,15,180ರೂ. ವಂಚಿಸಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಗೆ ಜೂ. 06ರಂದು ಅಪರಿಚಿತನೋರ್ವ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಗೂಗಲ್ ರಿವೀವ್ ಟಾಸ್ಕ್ ಕೆಲಸ ಮಾಡಿದರೆ ಕಮಿಷನ್ ಕೊಡುವುದಾಗಿ ತಿಳಿಸಿ ಲಿಂಕ್ ಕಳಿಸಿದ್ದ. ಇದನ್ನು ನಂಬಿದ ದೂರುದಾರ ವ್ಯಕ್ತಿ ಮೂರು ಟಾಸ್ಕ್ ಗಳನ್ನು ಪೂರ್ಣಗೊಳಿಸಿದ್ದರು. ನಂತರ ಒಂಧು ಟಾಸ್ಕ್ ಗೆ 50

ಮಂಗಳೂರು: ಆನ್-ಲೈನ್ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 16. ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್ 15ರ ಗುರುವಾರದಂದು ರಾತ್ರಿ 10.30ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ತೆರಳುತ್ತಿದ್ದ ವೇಳೆ, ದಿವ್ಯಾಳ ಗಂಡ ಆರೋಪಿ ಕುಮಾರ ಎಂಬಾತ ಆಟೋವನ್ನು

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಾಪು, ಜೂ . 16 . ಕಾಪು ವಿಧಾನಸಭಾ ಕ್ಷೇತ್ರದ ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಈ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ್ಕೊರೆತ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತ ಕ್ರಮ  ಕೈಗೊಳ್ಳುವಂತೆ ಸಂಬಂಧಿಸಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು

ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ Read More »

ಕರಾವಳಿ

ಸುಳ್ಯ ಪೊಲೀಸ್ ಉಪನಿರೀಕ್ಷರಾಗಿ ಈರಯ್ಯ ದೂಂತುರು ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 16. ಸುಳ್ಯ ಠಾಣಾ ಉಪನಿರೀಕ್ಷಕರಾಗಿ ಈರಯ್ಯ ದೂಂತುರು ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ. 2014ನೇ ಬ್ಯಾಚ್ ನ ಅಧಿಕಾರಿಯಾಗಿರುವ ಈರಯ್ಯ ದೂಂತುರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೆಷನರಿ ಎಸ್.ಐ ಆಗಿ ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಳಿಕ ಉಪ್ಪಿನಂಗಡಿ, ಶಿರಸಿಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ಕುಂದಾಪುರದಲ್ಲಿ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸುಳ್ಯ ಪೊಲೀಸ್ ಉಪನಿರೀಕ್ಷರಾಗಿ ಈರಯ್ಯ ದೂಂತುರು ಆಯ್ಕೆ Read More »

ಕರಾವಳಿ

ಇಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಇಂದು (ಜೂ.16) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ: ಜೂ.16ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವಭಾವಿ ಸಭೆ ನಡೆಸುವರು. 11.30ಕ್ಕೆ ನಗರದ

ಇಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರ ಪ್ರವಾಸ Read More »

ಕರಾವಳಿ

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. 2023-24ನೇ ಸಾಲಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ 6ರಿಂದ 18ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ನಿಸ್ವಾರ್ಥ ಸೇವೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಶೌರ್ಯ ಪ್ರದರ್ಶಿಸಿದ ಅವಧಿ 2022ರ ಜುಲೈ 1ರಿಂದ 2023ರ ಸೆಪ್ಟೆಂಬರ್ 30ರೊಳಗೆ ನಡೆದಿರಬೇಕು. ಈ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿ, ಛಾಯಾಚಿತ್ರ,

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ . 16 . ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತಾ  ಕಾಲೋನಿ ಮಸೀದಿ ಬಳಿ ನಡೆದಿದೆ. ಆರೋಪಿ ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top