ಕರಾವಳಿ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್‍ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್‍ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ […]

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »

ಕರಾವಳಿ

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000ರೂ. ದಂಡ ವಿಧಿಸಿದೆ.   ಬಂಧಿತ ಆರೋಪಿಗಳನ್ನು ಹೈದರಬಾದ್ ಮೂಲದ ಮಪಾಲ ಸರಳೇಬೆಟ್ಟು ನಿವಾಸಿ ತಿಪಿರ್ ನೇನಿ ಆದಿತ್ಯ(21) ಹಾಗೂ ತೆಲಂಗಾಣ ರಾಜ್ಯದ ಖಾನಪುರಂ ಮೂಲದ ಮಪಾಲ ಈಶ್ವರನಗರ ನಿವಾಸಿ ಮೊಗಿಲಿ ಹೇಮಂತ್ ರೆಡ್ಡಿ(20) ಎಂದು ಗುರುತಿಸಲಾಗಿದೆ. 2019ರ ಅ. 27ರಂದು ಉಡುಪಿ

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 08. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಶುಗರ್ ಹಾಗೂ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಜೂ. 07 ರ ಬುಧವಾರದಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮಾತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್

ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಕರಾವಳಿ, ಕರ್ನಾಟಕ

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadba.com ಮಂಗಳೂರು, ಜೂ. 08. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಮಕ್ಕಳನ್ನು ನೀರು ಇರುವ ತಗ್ಗು ಪ್ರದೇಶ,

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಪರಿಚಿತನೋರ್ವ ವ್ಯಕ್ತಿಯೋರ್ವರಿಗೆ ಜೂ. 04ರಂದು ಇನ್ಸ್ಟಾಗ್ರಾಂ ಮೂಲಕ, “ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ ಎನ್ನಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ.

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ

(ನ್ಯೂಸ್ ಕಡಬ) newskadaba.com ಮಡಂತ್ಯಾರು, ಜೂ. 08. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಎಂಬವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕರವರು ಆದೇಶ ಹೊರಡಿಸಿದ್ದು, “ಪ್ರಸ್ತುತ ಬೆಂಗಳೂರಿನ ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿರುವ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಿದೆ.

ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ Read More »

ಕರಾವಳಿ, ಕರ್ನಾಟಕ

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 07. ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ಹಿನ್ನೆಲೆ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ಮುಂಜಾನೆಯಿಂದ ಹೆಚ್ಚಾಗಿದ್ದು, ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾಡ್ಸ್೯ ವಾಪಸ್ಸು ಕಳುಹಿಸುತ್ತಿದ್ದಾರೆ‌. ಇಂದು ಮುಂಜಾನೆಯಿಂದ ಚಂಡಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದ್ದು, ಬೃಹತ್ ಗಾತ್ರದ ಅಲೆಗಳು ಸಮುದ್ರದ ಅಂಚಿಗೆ, ಬಂಡೆಕಲ್ಲುಗಳಿಗೆ ಬಹುವೇಗದಲ್ಲಿ ಅಪ್ಪಳಿಸುತ್ತಿದೆ. ಉಳ್ಳಾಲದ ಕೋಟೆಪುರ,

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯ Read More »

ಕರಾವಳಿ

ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ ➤ ಸಿಎ ಶಾಂತಾರಾಮ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಜಿಲ್ಲಾ ಸಮಿತಿ ವತಿಯಿಂದ ರೆಡ್‍ಕ್ರಾಸ್ ಆಡಳಿತ ಕಚೇರಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮತ್ತು ಕೃಷಿಕರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು. ರೆಡ್‍ಕ್ರಾಸ್ ಜಿಲ್ಲಾ ಸಮಿತಿ ಅಧ್ಯಕ್ಷ ಸಿ.ಎ. ಶಾಂತಾರಾಮ್ ಶೆಟ್ಟಿ ಮಾತನಾಡಿ, ಪರಿಸರದ ಬಗ್ಗೆ ಪ್ರತಿಯೊಬ್ಬರಲ್ಲೂ ಕಾಳಜಿ ಮೂಡಿಸುವುದು ವಿಶ್ವ ಪರಿಸರ ದಿನಾಚರಣೆಯ ಉದ್ದೇಶವಾಗಿದೆ. ಸುಸ್ಥಿರ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.ಪ್ಲಾಸ್ಟಿಕ್ ಮಾಲಿನ್ಯ ಪರಿಸರಕ್ಕೆ ಮಾರಕವಾಗಿದ್ದು, ಈ ಬಗ್ಗೆ ಜನ ಜಾಗೃತಿ

ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ ➤ ಸಿಎ ಶಾಂತಾರಾಮ ಶೆಟ್ಟಿ Read More »

ಕರಾವಳಿ

ಸಾಹಿತ್ಯ ಪುಸ್ತಕಗಳ ಕೊಡುಗೆ ➤ ಜೂ. 12ರೊಳಗೆ ನೋಂದಾಯಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬಿ.ಆರ್. ನರಸಿಂಹ ರಾವ್ ಉಡುಪಿ ಅವರು ಮಂಗಳೂರು ತಾಲೂಕಿನ ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಾಚನಾಲಯಕ್ಕೆ ಸಾಹಿತ್ಯಿಕ  ಪುಸ್ತಕಗಳನ್ನು ಕೊಡುಗೆಯಾಗಿ  ನೀಡಲಿದ್ದಾರೆ. ಈ ಕೊಡುಗೆಯನ್ನು ಪಡೆಯಲು ಶಾಲೆಗಳ ಮುಖ್ಯಸ್ಥರು ಇದೇ ಜೂ.12ರೊಳಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಅರುಣಾ ನಾಗರಾಜ್ ಮೊಬೈಲ್ ಸಂಖ್ಯೆ: 9141716602 ಅಥವಾ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ

ಸಾಹಿತ್ಯ ಪುಸ್ತಕಗಳ ಕೊಡುಗೆ ➤ ಜೂ. 12ರೊಳಗೆ ನೋಂದಾಯಿಸಲು ಕರೆ Read More »

ಕರಾವಳಿ
Scroll to Top