ಕರಾವಳಿ

ಸುಳ್ಯ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮೇ. 23. ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಾಣಿ ಮೈಸೂರು ಹೆದ್ದಾರಿ ಸಮೀಪದ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮರ್ಕಂಜ ಗ್ರಾಮದ ನಿವಾಸಿ ನವೀನ್ ಸಂಕೇಶ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಸುಳ್ಯ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.23. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ ಎಂದು ಗುರುತಿಸಲಾಗಿದೆ. ಶರೀಪುಧ್ದೀನ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ ಎನ್ನಲಾಗಿದೆ.  

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಸುಳ್ಯ: ಬೈಕ್ ಅಪಘಾತ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.23. ಕಲ್ಚರ್ಪೆ – ಪಾಲಡ್ಕ ಬಳಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ, ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ವಾಹನವೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ

ಸುಳ್ಯ: ಬೈಕ್ ಅಪಘಾತ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ಆಗಿ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಕೂಡಲೇ ಅವರನ್ನು ಫಳ್ನೀರಿನ ಅಥೆನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನವರು ಕೇರಳದ ವಿದ್ಯಾರ್ಥಿನಿಯರಾಗಿದ್ದು, ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎನ್ನುವ ಮಾಹಿತಿ ವಿದ್ಯಾರ್ಥಿನಿಯರ ಹೆತ್ತವರ ಕಡೆಯಿಂದ ಬಂದಿದೆ. ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು,

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ Read More »

ಕರಾವಳಿ

ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.23. ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಗುರುವಾಯನಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಾಲಾ ಬಸ್ ಬೆಳ್ತಂಗಡಿಯಿಂದ ಮದಡ್ಕ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ಯೋಗೀಶ್ ಪೂಜಾರಿ ಅವರಿಗೆ ಡಿಕ್ಕಿ ಹೊಡೆದು ಅವರ ಕಾಲಿನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಯೋಗೀಶ್ ರವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com.ಮಂಗಳೂರು, ಮೇ.23. ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆ ಮಳೆಗಾಲ ಆರಂಭವಾಗುವ ಎರಡು ತಿಂಗಳ ಮೊದಲೇ ಪೂರ್ಣಗೊಂಡಿದ್ದು, ಅಕ್ಟೋಬರ್‌ 15ರವರೆಗೆ ಮರಳುಗಾರಿಕೆ ನಿಷೇಧ ಜಾರಿಮಾಡಲಾಗಿದೆ. ಪರವಾನಿಗೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾ. 4ಕ್ಕೇ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಣ್ಣೆಗಳಲ್ಲಿ ಮರಳುಗಾರಿಕೆ ನಿಂತಿದ್ದು, ಆ ಬಳಿಕ ಪರಿಸರ ಕ್ಲಿಯರೆನ್ಸ್‌ ಮತ್ತೆ ಪಡೆಯುವುದಕ್ಕೆ ಬೇಕಾದ ಬೆಥಮೆಟ್ರಿ ಸರ್ವೇ ಪೂರ್ಣಗೊಂಡಿದ್ದು, ಆದರೆ ವರದಿ ಬರಲು ಬಾಕಿ ಇದೆ. ಅಲ್ಲದೆ ಈ ಮಧ್ಯೆ ಚುನಾವಣ ಪ್ರಕ್ರಿಯೆಯೂ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ

ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ಪೀಕರ್ ಆಗಿ ಯು.ಟಿ ಖಾದರ್   ➤ ಇಂದು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು.  

ಸ್ಪೀಕರ್ ಆಗಿ ಯು.ಟಿ ಖಾದರ್   ➤ ಇಂದು ನಾಮಪತ್ರ ಸಲ್ಲಿಕೆ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ. ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.  

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.22. ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಢಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿಷಾಹಾರ ಸೇವನೆ ಶಂಕೆ ➤ ಕಾಲೇಜಿನ ಹಾಸ್ಟೆಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ.

ಮಂಗಳೂರು: ವಿಷಾಹಾರ ಸೇವನೆ ಶಂಕೆ ➤ ಕಾಲೇಜಿನ ಹಾಸ್ಟೆಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ Read More »

ಕರಾವಳಿ
Scroll to Top