ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು
(ನ್ಯೂಸ್ ಕಡಬ)newskadaba.com ವಿಟ್ಲ, ಮೇ.22. ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ. ಕಂಬಳ ಕೋಣ ಸಾಗಾಟ ಮಾಡುತ್ತಿರುವುದಾಗಿ ಚಾಲಕ ತಿಳಿಸಿದ್ದು, ಆದರೆ ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು, ವಿಚಾರಿಸಿ ಗೋ ಅಕ್ರಮ ಸಾಗಾಟ ಮಾಡುವುದೆಂದು ಹೇಳಿದ್ದಾರೆ. ಗೋವು ಮತ್ತು ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ.
ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು Read More »
ಕರಾವಳಿ
