ಕರಾವಳಿ

ಬೆಳ್ತಂಗಡಿ: ನದಿ ನೀರಿಗೆ ವಿಷಪ್ರಾಷನ      ➤ನೀರು ಸರಬರಾಜು ಸ್ಥಗಿತ, ಮೀನುಗಳ ಮಾರಣಹೋಮ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.27. ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿವೆ. ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದೆ. ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು. ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.  

ಬೆಳ್ತಂಗಡಿ: ನದಿ ನೀರಿಗೆ ವಿಷಪ್ರಾಷನ      ➤ನೀರು ಸರಬರಾಜು ಸ್ಥಗಿತ, ಮೀನುಗಳ ಮಾರಣಹೋಮ Read More »

ಕರಾವಳಿ

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು ಮುಖಾಮುಖಿ..! *

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.26 ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು ಮುಖಾಮುಖಿಯಾದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದೇ ಕಡೆ ಸೇರಿದರು.ಪರಸ್ಪರರು ಹಸ್ತಲಾಘವ ಮಾಡಿ ಮಾತುಕತೆ ನಡೆಸಿದರು. ಬೆಂಗಳೂರಿನಿಂದ ಬಂದಿಳಿದ ಮಲ್ಲಿಕಾರ್ಜುನ ಖರ್ಗೆ ಚಿಕ್ಕೋಡಿಯತ್ತ, ಬಸವರಾಜ ಬೊಮ್ಮಾಯಿ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿಯತ್ತ ತೆರಳಿದರು. ಮಾಜಿ ಸಚಿವ ಡಿ.ಬಿ.ಇನಾಮದಾರ ಅವರಿಗೆ ಅಂತಿಮ ನಮನ ಸಲ್ಲಿಸಿ‌ ನೇಗಿನಹಾಳದಿಂದ ಆಗಮಿಸಿದ ಸಿದ್ದರಾಮಯ್ಯ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.      

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು ಮುಖಾಮುಖಿ..! * Read More »

ಕರಾವಳಿ, ಕರ್ನಾಟಕ

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿವರ್ಷ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು. ಆದರೆ, 2021-22ನೇ ಸಾಲಿಗೆ ಸಚಿವರು ಸೇರಿದಂತೆ ಹಲವು ಶಾಸಕರು ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡದೆ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಆಸ್ತಿ ವಿವರ ನೀಡದ 15 ಮಂದಿ ಶಾಸಕರು ಮತ್ತು 18 ಮಂದಿ ವಿಧಾನ ಪರಿಷತ್‌ ಸದಸ್ಯರ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ. ಸಚಿವ ಶ್ರೀರಾಮುಲು, ಮಾಜಿ ಸಚಿವರಾದ ಜಮೀರ್‌ ಅಹ್ಮದ್‌, ಎನ್‌. ಮಹೇಶ್‌

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ Read More »

ಕರಾವಳಿ

ಕರಾವಳಿ ಮೂಲದ ಮುಂಬಯಿ ಹೋಟೆಲ್‌ ಉದ್ಯಮಿಯ ಅಪಹರಣ

(ನ್ಯೂಸ್ ಕಡಬ)newskadaba.com  ಮುಂಬಯಿ, ಏ.26. ಮುಂಬಯಿಯ ಹೋಟೆಲ್‌ ಉದ್ಯಮಿಯೊಬ್ಬರು ಅಪಹರಣಕ್ಕೊಳಗಾದ ಘಟನೆ ಸೋಮವಾರ ಸಂಭವಿಸಿದೆ. ಅಪಹರಣಕ್ಕೊಳಗಾದ ಹೋಟೆಲ್‌ ಉದ್ಯಮಿ ಕರಾವಳಿ ಅನೂಪ್‌ ಶೆಟ್ಟಿ ಎನ್ನಲಾಗಿದೆ. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅನೂಪ್‌ ಶೆಟ್ಟಿಯವರನ್ನು ಪಾರು ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಣಕಾಸಿನ ವ್ಯವಹಾರದ ತಗಾದೆಯ ಹಿನ್ನೆಲೆಯಲ್ಲಿ ಈ ಅಪಹರಣವಾಗಿದೆ. ಕೆಲ ಸಮಯ ಹೋಟೆಲ್‌ ವ್ಯವಹಾರದಲ್ಲಿ ಪಾಲುದಾರನಾಗಿದ್ದ ವ್ಯಕ್ತಿಯೇ ಹಣಕಾಸಿನ ವಿಚಾರದಲ್ಲಿ ತಗಾದೆ ಬಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.  

ಕರಾವಳಿ ಮೂಲದ ಮುಂಬಯಿ ಹೋಟೆಲ್‌ ಉದ್ಯಮಿಯ ಅಪಹರಣ Read More »

ಕರಾವಳಿ

SDPI ರಾಷ್ಟ್ರೀಯ ನಾಯಕರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.26. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಫೈಝಲ್ ಈಝ್ಝುದ್ದೀನ್ ರವರು (ಏ.25) ಮತ್ತು (ಏ.26) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು, ಸಮಾಜದ ವಿವಿಧ ಮುಖಂಡರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಹಾಗೂ ಸ್ಥಳೀಯ ನಾಯಕರು ರಾಷ್ಟ್ರೀಯ ಮುಖಂಡರಿಗೆ ಸಾತ್

SDPI ರಾಷ್ಟ್ರೀಯ ನಾಯಕರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ಉಡುಪಿ: ನಾಳೆ(ಏ.27)ರಂದು ರಾಹುಲ್ ಗಾಂಧಿ ಉಚ್ಛಿಲಕ್ಕೆ ➤ ಸ್ಥಳ ಪರಿಶೀಲಿಸಿದ ಎಸ್ಪಿ

(ನ್ಯೂಸ್ ಕಡಬ)newskadaba.com ಉಡುಪಿ, ಏ.26. ನಾಳೆ ಏ. 27ರಂದು  ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಉಡುಪಿಯ ಉಚ್ಛಿಲಕ್ಕೆ ಬರಲಿದ್ದು ಮೀನುಗಾರರ ಸಮಾವೇಶ ಅವರ ಜೊತೆಗೆ ಸಂವಾದ ಕಾರ್ಯಕ್ರಮ ‌ನಡೆಯಲಿದೆ. ಸಭೆ ಸಂವಾದ ಕಾರ್ಯಕ್ರಮ ಉಚ್ಛಿಲ‌ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ‌ ಜಿ ಶಂಕರ್ ಸಭಾಂಗಣದಲ್ಲಿ‌‌ ನಡೆಯಲಿದೆ. ಕಾಪು‌ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನೇತ್ರತ್ವದಲ್ಲಿ ಸಭೆ ಸಂವಾದ ನಡೆಯುವ ಸ್ಥಳವನ್ನು ಎಸ್ ಪಿ ಅಕ್ಷಯ್ ಮಚ್ಛಿಂದ್ರ ತಂಡ ಪರಿಶೀಲನೆ ನಡೆಸಿದರು.  

ಉಡುಪಿ: ನಾಳೆ(ಏ.27)ರಂದು ರಾಹುಲ್ ಗಾಂಧಿ ಉಚ್ಛಿಲಕ್ಕೆ ➤ ಸ್ಥಳ ಪರಿಶೀಲಿಸಿದ ಎಸ್ಪಿ Read More »

ಕರಾವಳಿ

ಬಂಟ್ವಾಳ:  ದಾಖಲೆ ರಹಿತ ನಗದು ಸಾಗಾಟ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.26. ಫರಂಗಿಪೇಟೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ತಪಾಸಣೆ ನಡೆಯುತ್ತಿದ್ದ ಸಂದರ್ಭ ವಾಹನ ತಪಾಸಣೆ ವೇಳೆ ದಾಖಲೆ ರಹಿತ ನಗದು ಸಾಗಾಟ ಪ್ರಕರಣ ಪತ್ತೆಯಾಗಿದೆ. ಒಟ್ಟು 3 ಲಕ್ಷ ರೂ ವಾಹನದಲ್ಲಿದ್ದು, ಈ ಕುರಿತು ವಾಹನದವರಲ್ಲಿ ದಾಖಲೆ ಕೇಳಿದಾಗ ಸಮರ್ಪಕ ಉತ್ತರ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ತಪಾಸಣಾಧಿಕಾರಿಗಳು ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ನಗದು ಕಂಡುಬಂದಿದ್ದು, ಕೂಡಲೇ ಅದನ್ನು ಚುನಾವಣಾ ಸಂಬಂಧಿ ಪರಿಶೀಲನಾ ಸಮಿತಿಗೆ

ಬಂಟ್ವಾಳ:  ದಾಖಲೆ ರಹಿತ ನಗದು ಸಾಗಾಟ Read More »

ಕರಾವಳಿ

ಕಡಬ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬೈಕ್ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಎ.25. ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಡಬ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬೈಕ್ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.25. ಪಾರ್ಟ್‌ಟೈಮ್‌ ಕೆಲಸ ಎಂಬ ಸಂದೇಶವಿರುವ ವಾಟ್ಸ್ ಆ್ಯಪ್‌ ಖಾತೆಯ ಲಿಂಕ್‌ ರವಾನೆ ಹಾಗೂ ಅದರ ಮೂಲಕ ಹಣ ವರ್ಗಾವಣೆ ಮಾಡಿರುವ ಎರಡು ವಂಚನೆ ಪ್ರಕರಣಗಳು ಮಂಗಳೂರು ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿವೆ. ಮೊದಲ ಪ್ರಕರಣದಲ್ಲಿ, ಏಪ್ರಿಲ್‌ನಲ್ಲಿ 6262948264 ಸಂಖ್ಯೆಯನ್ನು ಬಳಸಿಕೊಂಡು ದೂರುದಾರರ ವಾಟ್ಸಾಪ್ ಖಾತೆಗೆ ‘ಆನ್‌ಲೈನ್‌ನಲ್ಲಿ ಪಾರ್ಟ್‌ಟೈಮ್‌ ಕೆಲಸ’ ಎಂಬ ಸಂದೇಶದೊಂದಿಗೆ ಲಿಂಕ್ ಅನ್ನು ಕಳುಹಿಸಿದ್ದಾರೆ. ಕೆಲಸಗಳನ್ನು ಮಾಡಲು URL ಅನ್ನು ಬಳಸಲು ಸೂಚಿಸಲಾಗಿದ್ದು, ನಂತರ ದೂರುದಾರರ ಖಾತೆಯಿಂದ ಕ್ರಮೇಣವಾಗಿ 3,01,505

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ Read More »

ಕರಾವಳಿ

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.25. ಫೇಸ್ ಬುಕ್ ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪುತ್ತೂರು‌ ಮಹಿಳಾ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ. ಕೆಯ್ಯೂರು ಮಾಡಾವು ನಿವಾಸಿ ನವೀನ್ ಎಂಬಾತನ ಮೇಲೆ ಕೇಸ್ ದಾಖಲಾಗಿದೆ. ನವೀನ್ ಕಾಸರಗೋಡು ಮೂಲದ ಅಪ್ರಾಪ್ತ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು ಪುತ್ತೂರು ಜಾತ್ರೆಯ ವೇಳೆ ಆಕೆಗೆ ಪುಸಲಾಯಿಸಿ ಮಾಡಾವು ಅಂಗನವಾಡಿ ಕೇಂದ್ರದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.  

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ
Scroll to Top