ಕರಾವಳಿ

ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಎಪ್ರಿಲ್ 27 ರಂದು ಸಂಜೆ 5 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳೂರು ನಗರದ ಕಲೆಕ್ಟರ್ಸ್ ಗೇಟ್‌‌ನಿಂದ ನೆಹರೂ ಮೈದಾನದವರೆಗೆ ಸುಮಾರು ಎರಡು ಕಿಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್ ತಿಳಿಸಿದ್ದಾರೆ. ಎಪ್ರಿಲ್ 27 ರಂದು ಅದ್ದೂರಿ ರೋಡ್ ಶೋ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಇನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎ.24 […]

ಏ.27ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರಿನಲ್ಲಿ ರೋಡ್ ಶೋ Read More »

ಕರಾವಳಿ

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..!

(ನ್ಯೂಸ್ ಕಡಬ)Newskadaba.com ಸುಳ್ಯ,ಏ.23  ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಸುಳ್ಯ ಜಯನಗರದ ರಮೇಶ್‌ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..! Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ವಿದ್ಯುತ್‌ ತಂತಿ ಸ್ಪರ್ಶಿಸಿ ಮೂರು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.23. ಚಾರ್ಮಾಡಿಯಲ್ಲಿ ಅಲ್ಯುಮಿನಿಯಂ ದೋಟಿ ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ಲೈನ್‌ಗೆ ಸಂಪರ್ಕಿಸಿ ಮೂವರು ಮಕ್ಕಳು ಗಾಯಗೊಂಡ ಘಟನೆ ನಡೆದಿದೆ. ಇಮ್ತಿಯಾಜ್ ಅವರ ಮಕ್ಕಳಾದ ಮಹಮ್ಮದ್‌ ಆಲಿ (16), ಮಹಮ್ಮದ್‌ ಇನಾಜ್‌ (8) ಹಾಗೂ ಹನೀಫ್‌ ಅವರ ಪುತ್ರ ಅಯ್ನಾನ್‌ (6) ವಿದ್ಯುತ್‌ ಆಘಾತಕ್ಕೊಳಗಾದವರು. ಇನ್ನು ಸ್ಥಳೀಯರು ಕೂಡಲೇ ಅವರನ್ನು ಕಕ್ಕಿಂಜೆ ಹಾಗೂ ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ಒದಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಸುಟ್ಟ

ಬೆಳ್ತಂಗಡಿ: ವಿದ್ಯುತ್‌ ತಂತಿ ಸ್ಪರ್ಶಿಸಿ ಮೂರು ಮಕ್ಕಳಿಗೆ ಗಾಯ Read More »

ಕರಾವಳಿ

ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಬೀಚ್ ನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಬೀಚ್ ನಲ್ಲಿ ಪತ್ತೆ Read More »

ಕರಾವಳಿ

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ರೂರು, ಏ.23. ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ. ಪಡೀಲ್ ನಲ್ಲಿನ ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟದ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳು ದೂರು‌ ನೀಡಿದ್ದರು.ಅರುಣ್ ಪುತ್ತಿಲ ಕೂಡ ಪೊಲೀಸರ ಬಳಿ ತೆರಳಿ ಈ ಕುರಿತು ಮಾತುಕತೆ ನಡೆಸಿದ್ದರು ಎನ್ನಲಾಗಿದೆ.  

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ Read More »

ಕರಾವಳಿ

ಮಂಗಳೂರು: ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಮೀನುಗಾರಿಕೆಗೆ ತೆರಳಿ ದೋಣಿಯಲ್ಲಿ ಬಲೆಯನ್ನು ಎಳೆಯುತ್ತಿರುವವಾಗ ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರರೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ನಾಗರಾಜ (43) ಎಂದು ಗುರುತಿಸಲಾಗಿದೆ. ಇನ್ನು ದೋಣಿಯಲ್ಲಿದ್ದವರು ನೀರಿಗೆ ಬಿದ್ದ ತಕ್ಷಣ ನಾಗರಾಜ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಉಪಚರಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ಸೇರಿಸಿ ಬಳಿಕ ಅಲ್ಲಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.  

ಮಂಗಳೂರು: ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ

ಧರ್ಮಸ್ಥಳ: ಡಿಕೆಶಿ ಹೆಲಿಕಾಪ್ಟರ್ ಧಿಡೀರ್ ತಪಾಸಣೆ

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಏ.23. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ಹೆಲಿಪ್ಯಾಡ್ ನಲ್ಲಿ ಕುಟುಂಬ ಸಮೇತ ಬಂದಿಳಿದರು ಎಂದು ವರದಿ ತಿಳಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂದಿದ್ದಾಗಲೂ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು ಎನ್ನಲಾಗಿದೆ.

ಧರ್ಮಸ್ಥಳ: ಡಿಕೆಶಿ ಹೆಲಿಕಾಪ್ಟರ್ ಧಿಡೀರ್ ತಪಾಸಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಉಗ್ರರ ದಾಳಿಯಿಂದಾಗಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಸೇನೆಯ ರಾಷ್ಟ್ರೀಯ ರೈಫಲ್ಸ್‌ ತುಕಡಿಗೆ ಸೇರಿದ ಜಮ್ಮುವಿನ ಪೂಂಚ್-ರಜೌರಿ ವಿಭಾಗದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯದಲ್ಲಿ ತೊಡಗಿದ್ದ ಸೇನಾ ವಾಹನವೊಂದರ ಮೇಲೆ ಭಯೋತ್ಪಾದಕರು ಗ್ರೆನೇಡ್ ಹಾಗೂ ಅತ್ಯಾಧುನಿಕ ವಿದೇಶಿ ಶಸ್ತ್ರಾಸ್ತ್ರಗಳ ಮೂಲಕ ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಓರ್ವ ಸೈನಿಕ ತೀವ್ರ ಗಾಯಗೊಂಡಿದ್ದು, ಸೇನಾ ವಾಹನ ಹೊತ್ತಿ ಉರಿದು ನಾಶವಾಗಿದೆ. ಇಂದು ಸಂಜೆ ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್‌ನ

ಮಂಗಳೂರು: ಉಗ್ರರ ದಾಳಿಯಿಂದಾಗಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ Read More »

ಕರಾವಳಿ

➤ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಗ್ರಾ.ಪಂ.ಅಧ್ಯಕ್ಷೆ..!  

(ನ್ಯೂಸ್ ಕಡಬ)Newskadaba.com ಪುತ್ತೂರು,ಏ.23 ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಭಟ್‌ 24 ವರ್ಷಗಳ ಬಳಿಕ ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು, ತಂದೆಯ ವಿಯೋಗದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ.ಅನಂತರ ವೆಂಕಟ್ರಮಣ ಭಟ್‌ ಅವರನ್ನು ವಿವಾಹವಾಗಿ ಪಾಣಾಜೆಯಲ್ಲಿ ನೆಲೆಸಿರುವ ಅವರು 2020-21ನೇ ಸಾಲಿನ ಗ್ರಾ.ಪಂ. ಚುನಾವಣೆಯಲ್ಲಿ ಸದಸ್ಯೆಯಾಗಿ ಆಯ್ಕೆಯಾಗಿ 2

➤ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಗ್ರಾ.ಪಂ.ಅಧ್ಯಕ್ಷೆ..!   Read More »

ಕರಾವಳಿ

ಹಲವು ಉದ್ಯಮಿ ಮನೆ, ಕಚೇರಿಯಲ್ಲಿ ಇಡಿ ➤ ಐಟಿ ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.21. ರಾಜ್ಯದ ಹಲವೆಡೆ ನಡೆದಿರುವ ಇಡಿ, ಐಟಿ ಅಧಿಕಾರಿಗಳ ದಾಖಲೆ ಪರಿಶೀಲನೆ ಕಾರ್ಯ ಉಡುಪಿಯಲ್ಲಿ ಕೂಡಾ ನಡೆದಿದ್ದು, ಉಡುಪಿಯ ಹಲವು ಉದ್ಯಮಿ, ಕಂಟ್ರಾಕ್ಟರ್ ದಾರರ ಮನೆಗಳಲ್ಲಿ ದಾಖಲೆ ಪರೀಶೀಲನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಇಡಿ ಅಧಿಕಾರಿಗಳು ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಯ ಮಾಲಿಕತ್ವದ ಮಲ್ಪೆಯಲ್ಲಿರುವ ಗೆಸ್ಟ್ ಹೌಸ್ ನ ಕಚೇರಿ, ರೆಸ್ಟೋರೆಂಟ್, ಅಂಗಡಿ, ಮನೆ ಮತ್ತು ಇತರ ಕಡೆಗಳಲ್ಲಿ 10 ರಿಂದ

ಹಲವು ಉದ್ಯಮಿ ಮನೆ, ಕಚೇರಿಯಲ್ಲಿ ಇಡಿ ➤ ಐಟಿ ಅಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ
Scroll to Top