ಕರಾವಳಿ

crime, arrest, suspected

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ […]

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಅಪರಾಧ ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಿವಾಸಿ ಆನಂದ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಲಂ 365, 395, 326, 506 ಮತ್ತು 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈತನು ಬಯಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಎ ಒನ್ ರೌಡಿಯಾಗಿದ್ದು ಈತನ ವಿರುದ್ಧ ಬೈಲುಕೊಪ್ಪ, ಹಾಸನ, ಬೆಟ್ಟದಹಳ್ಳಿ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬಂಟ್ವಾಳ ನಿವಾಸಿ ಧೀರಜ್ ಮೃತ ಯುವಕ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ರಾತ್ರಿ ಊಟ ಮಾಡಿ ಮಲಗಿದ್ದರು. ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ  

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು Read More »

ಕರಾವಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಈ ಪೈಕಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಖರ್ಚುಗಳ ವೀಕ್ಷಕರು (ಎಕ್ಸೆಂಡಿಚರ್ ಅಬ್ಸರ್ ವರ್) ಜಿಲ್ಲೆಗೆ ಆಗಮಿಸಿದ್ದಾರೆ. 204 ಮಂಗಳೂರು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಪ್ರದೀಪ್ ಸಿಂಗ್ ಗೌತಮ್ (ಐಆರ್‌ಎಸ್) ಅವರು ಖರ್ಚು ವೆಚ್ಚಗಳ ವೀಕ್ಷಕರಾಗಿ ಆಗಮಿಸಿದ್ದಾರೆ ಅವರ ಮೊಬೈಲ್ ಸಂಖ್ಯೆ: 9141046507 ಆಗಿದೆ. 206 ಪುತ್ತೂರು ಹಾಗೂ 207 ಸುಳ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ Read More »

ಕರಾವಳಿ
Death, deadbody, Waterfall

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌(35)ಮೃತರು ಎಂದು ಗುರುತಿಸಲಾಗಿದೆ. ಢಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಳೆಯಂಗಡಿ ಬಳಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ

ಸುಳ್ಯ: ಕಾರು – ಬಸ್ ನಡುವೆ ಭೀಕರ ಅಪಘಾತ ➤ ಆರು ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಸುಳ್ಯ, ಎ.14. ಬಸ್ ಮತ್ತು ಕಾರು ನಡುವೆ ಉಂಟಾದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯಲ್ಲಿ ನಡೆದಿದೆ. ಕಾರು ಮತ್ತು ಬಸ್ ನಡುವೆ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರನ್ನು ಮಂಡ್ಯ ಮೂಲದವರೆಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಸುಳ್ಯ: ಕಾರು – ಬಸ್ ನಡುವೆ ಭೀಕರ ಅಪಘಾತ ➤ ಆರು ಮಂದಿ ದುರ್ಮರಣ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಸ್ಕೂಟಿ ಕದ್ದು ನಿದ್ದೆ ಮಾಡಿ ಸಿಕ್ಕಿಬಿದ್ದ ಕಳ್ಳ !

(ನ್ಯೂಸ್ ಕಡಬ)newskadaba.com ಸುಳ್ಯ, ಏ.17. ಕಳ್ಳನೋರ್ವ ಒಂದು ಸ್ಕೂಟಿ ಕದ್ದುಕೊಂಡು ಬಂದು ಹೋಟೆಲ್ ಒಂದರ ಶೌಚಾಲಯದಲ್ಲಿ ನಿದ್ದೆ ಮಾಡಿ ಕೊನೆಗೆ ಪೊಲೀಸ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡ್ಯದ ನಿವಾಸಿ ಸುಲ್ತಾನ್ ಎಂಬಾತ ಉಡುಪಿಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದರಿಂದ ಸ್ಕೂಟಿ ಕದ್ದಿದ್ದ. ಅದನ್ನು ಮಂಡ್ಯದತ್ತ ತೆಗೆದುಕೊಂಡು ಹೋಗುವ ದಾರಿಯಲ್ಲಿ ಸುಳ್ಯ ಸಮೀಪದ ಗೂನಡ್ಕದ ದೊಡ್ಡಡ್ಕದಲ್ಲಿರುವ ತಾಜುದ್ದೀನ್ ಟರ್ಲಿ ಎಂಬುವವರ ಇಂಡಿಯನ್ ಗೇಟ್ ಹೋಟೆಲ್ ನಲ್ಲಿ ಟೀ ಕುಡಿಯಲೆಂದು ವಾಹನ ನಿಲ್ಲಿಸಿದ್ದಾನೆ ಎಂದು ವರದಿ

ಸುಳ್ಯ: ಸ್ಕೂಟಿ ಕದ್ದು ನಿದ್ದೆ ಮಾಡಿ ಸಿಕ್ಕಿಬಿದ್ದ ಕಳ್ಳ ! Read More »

ಕರಾವಳಿ

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ➤ ಸಚಿವ ಎಸ್. ಅಂಗಾರ

(ನ್ಯೂಸ್ ಕಡಬ)newskadaba.com ಸುಳ್ಯ, ಏ.14. ರಾಜಕೀಯ ನಿವೃತ್ತಿ ಹೇಳಿಕೆ ಟಿಕೆಟ್ ಸಿಗದ ಕಾರಣ ತತ್ ಕ್ಷಣದ ನೋವಾಗಿತ್ತು. ಆದರೆ ಇದೀಗ ನನ್ನ ಹೇಳಿಕೆ ಹಿಂಪಡೆಯುತ್ತಿದ್ದು, ಸಕ್ರೀಯ ರಾಜಕೀಯದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ, ಆದರೆ ನನಗೆ ಹೇಳದೆ ಆಯ್ಕೆ ಮಾಡಿರುವುದು ನೋವುಂಟಾಗಿತ್ತು. ಇದು

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ➤ ಸಚಿವ ಎಸ್. ಅಂಗಾರ Read More »

ಕರಾವಳಿ

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ಗುಂಡ್ಯ, ಏ.14. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಸಮೀಪ KSRTC ರಾಜಹಂಸ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕನ ಕೈ ಮುರಿತಕ್ಕೊಳಗಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ತುಮಕೂರಿನ ಮಧು(25)ಎಂದು ಗುರುತಿಸಲಾಗಿದ್ದು, ಆತನಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ.

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ Read More »

ಕರಾವಳಿ

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.14. ವೇಣೂರು ಜುಗುಲ್‌ ಬಾರ್‌ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್‌ ಅಲಿಯಾಸ್‌ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (70) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top